ಗ್ರಾಮೀಣಾಭಿವೃದ್ಧಿಗೆ ಶಕ್ತಿ ತುಂಬಿದ ಎಸ್.ಆರ್. ಪಾಟೀಲ: ಎಸ್.ಎನ್. ನೀಲಪ್ಪನವರ

| Published : May 25 2025, 01:46 AM IST

ಗ್ರಾಮೀಣಾಭಿವೃದ್ಧಿಗೆ ಶಕ್ತಿ ತುಂಬಿದ ಎಸ್.ಆರ್. ಪಾಟೀಲ: ಎಸ್.ಎನ್. ನೀಲಪ್ಪನವರ
Share this Article
  • FB
  • TW
  • Linkdin
  • Email

ಸಾರಾಂಶ

ಬೀಳಗಿ ತಾಲೂಕಿನಲ್ಲಿ ಬ್ಯಾಂಕು, ಬಾಪೂಜಿ ಅಂತಾರಾಷ್ಟ್ರೀಯ ಶಾಲೆ, ಸಕ್ಕರೆ ಕಾರ್ಖಾನೆ ಹಾಗೂ ಮೆಡಿಕಲ್ ಕಾಲೇಜು ಪ್ರಾರಂಭಿಸಿ ಸಹಕಾರ, ಶಿಕ್ಷಣ ಔದ್ಯೋಗಿಕ, ವೈದ್ಯಕೀಯ ಸೇರಿದಂತೆ ಹಲವು ಕ್ಷೇತ್ರಗಳ ಪ್ರಥಮಗಳಿಗೆ ನಾಂದಿ ಹಾಡಿ ಈ ಭಾಗದ ಗ್ರಾಮಗಳ ಅಭಿವೃದ್ಧಿಗೆ ಶಕ್ತಿ ತುಂಬಿದ ಎಸ್.ಆರ್. ಪಾಟೀಲರ ಕೊಡುಗೆ ಅಪಾರವಾಗಿದೆ ಎಂದು ಬಾಗಲಕೋಟೆಯ ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಎಸ್.ಎನ್. ನೀಲಪ್ಪನವರ ಹೇಳಿದರು.

ಕನ್ನಡಪ್ರಭ ವಾರ್ತೆ ಬೀಳಗಿ

ತಾಲೂಕಿನಲ್ಲಿ ಬ್ಯಾಂಕು, ಬಾಪೂಜಿ ಅಂತಾರಾಷ್ಟ್ರೀಯ ಶಾಲೆ, ಸಕ್ಕರೆ ಕಾರ್ಖಾನೆ ಹಾಗೂ ಮೆಡಿಕಲ್ ಕಾಲೇಜು ಪ್ರಾರಂಭಿಸಿ ಸಹಕಾರ, ಶಿಕ್ಷಣ ಔದ್ಯೋಗಿಕ, ವೈದ್ಯಕೀಯ ಸೇರಿದಂತೆ ಹಲವು ಕ್ಷೇತ್ರಗಳ ಪ್ರಥಮಗಳಿಗೆ ನಾಂದಿ ಹಾಡಿ ಈ ಭಾಗದ ಗ್ರಾಮಗಳ ಅಭಿವೃದ್ಧಿಗೆ ಶಕ್ತಿ ತುಂಬಿದ ಎಸ್.ಆರ್. ಪಾಟೀಲರ ಕೊಡುಗೆ ಅಪಾರವಾಗಿದೆ ಎಂದು ಬಾಗಲಕೋಟೆಯ ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಎಸ್.ಎನ್. ನೀಲಪ್ಪನವರ ಹೇಳಿದರು.ಬೀಳಗಿ ಪಟ್ಟಣ ಸಹಕಾರ ಬ್ಯಾಂಕಿನ ರಜತಮಹೋತ್ಸವ ನಿಮಿತ್ತ ಬೀಳಗಿ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಪತ್ತಿನ ಸಹಕಾರ ಸಂಘ ಹಾಗೂ ಸೌಹಾರ್ದ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳಿಗೆ ಆಯೋಜಿಸಿದ್ದ ಒಂದು ದಿನದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಕೃಷಿ ಪತ್ತಿನ ಸಹಕಾರ ಸಂಘಗಳು ತಮ್ಮ ಸ್ವಂತ ಬಂಡವಾಳ ಹೆಚ್ಚಿಸಿಕೊಳ್ಳವ ಮೂಲಕ ಕೃಷಿ ಸಾಲದ ಜೊತೆಗೆ ಕೃಷಿಯೇತರ ಸಾಲದ ಪ್ರಮಾಣ ಹೆಚ್ಚಿಸಿ ಕೃಷಿ ಪತ್ತಿನ ಸಹಕಾರಿ ಸಂಘಗಳನ್ನು ಬಹುಸೇವಾ ಕೇಂದ್ರಗಳನ್ನಾಗಿ ಮಾಡಬೇಕು. ರೈತರ, ಜನರು ಕಲ್ಯಾಣಕ್ಕೆ ಬ್ಯಾಂಕುಗಳು ಅಗತ್ಯ, ಸಹಕಾರಿ ಸಂಘಗಳು ಇನ್ನು ಹೆಚ್ಚಿನ ಯೋಜನೆ ಹಾಕಿಕೊಳ್ಳಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಬ್ಯಾಂಕಿನ ಸಂಸ್ಥಾಪಕ ಅಧ್ಯಕ್ಷ ಎಸ್.ಆರ್. ಪಾಟೀಲ ಮಾತನಾಡಿ, ಬ್ಯಾಂಕಿನ ಪ್ರಾರಂಭೋತ್ಸವ ದಿನ ನಡೆದಾಡುವ ದೇವರು ಸಿದ್ದೇಶ್ವರ ಶ್ರೀ ಗಳು ಹೇಳಿದ ಅಮೂಲ್ಯವಾದ ಮಾತುಗಳನ್ನು ನಿರಂತರವಾಗಿ ಪರಿಪಾಲಿಸಿದ ಪ್ರಯುಕ್ತ ಇಂದು ಬ್ಯಾಂಕ್ ಹೆಮ್ಮರವಾಗಿ ಬೆಳೆಯಲು ಸಾಧ್ಯವಾಯಿತು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ವಿಶ್ವಸಂಸ್ಥೆಯು 2025 ಅಂತಾರಾರಾಷ್ಟ್ರೀಯ ಸಹಕಾರ ವರ್ಷ ಎಂದು ಘೋಷಣೆ ಮಾಡಿದ ವರ್ಷವೇ ನಮ್ಮ ಬೀಳಗಿ ಪಟ್ಟಣ ಸಹಕಾರ ಬ್ಯಾಂಕ್ ರಜತ ಮಹೋತ್ಸವ ಆಚರಿಸಿಕೊಳ್ಳುತ್ತಿರುವುದು ನಮ್ಮ ಸೌಭಾಗ್ಯವೇ ಸರಿ ಎಂದು ಹೇಳಿದರು.

ಪ್ರಧಾನ ವ್ಯವಸ್ಥಾಪಕ ಎಲ್.ಬಿ.ಕುರ್ತಕೋಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಸಹಕಾರ ಕ್ಷೇತ್ರದ ನಿಯಮಾವಳಿಗಳ ಹಾಗೂ ಸಹಕಾರಿ ಸಂಘದ ಅಧ್ಯಕ್ಷ ಮತ್ತು ಕಾರ್ಯದರ್ಶಿಗಳ ಕಾರ್ಯವೈಖರಿ ಕುರಿತು ತಾಲೂಕಿನ ಸಹಕಾರಿ ಬಂಧುಗಳಿಗೆ ಒಂದು ದಿನದ ತರಬೇತಿ ಆಯೋಜಿಸಲಾಗಿದೆ ಎಂದು ಹೇಳಿದರು.

ಸಹಕಾರ ಸಂಘಗಳ ಬೆಳವಣಿಗೆಯಲ್ಲಿ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ಪಾತ್ರ ಕುರಿತು ಕೆನರಾ ಬ್ಯಾಂಕ್ ನಿವೃತ್ತ ಅಧಿಕಾರಿ ಜನಾರ್ದನ ಸೌಕಾರ ಮತ್ತು ಕುಟುಂಬ ನಿರ್ವಹಣೆ ಮತ್ತು ಸಂಸ್ಕಾರ ವಿಷಯದ ಕುರಿತು ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಗುರುರಾಜ ಲೂತಿ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಜೀವನ ಕೌಶಲ್ಯಗಳು ವಿಷಯದ ಕುರಿತು ಅಶೋಕ ಕೆಂಪಲಿಂಗನ್ನವರ ಉಪನ್ಯಾಸ ನೀಡಿದರು.

ಕೆನರಾ ಬ್ಯಾಂಕ್ ನಿವೃತ್ತ ಅಧಿಕಾರಿ ಜನಾರ್ದನ ಸೌಕಾರ ಅವರು ಸೇರಿದ ನೂರಾರು ಸಹಕಾರಿ ಗಳಿಗೆ ತರಬೇತಿ ನೀಡಿದರು.

ಬಾಡಗಂಡಿ ಶಾಂತಾದೇವಿ ಮೆಮೊರಿಯಲ್ ಆಯುರ್ವೇದಿಕ್ ಕಾಲೇಜಿನ ಪ್ರಾಚಾರ್ಯ ಎ.ಎ. ಬಾಳಿಕಾಯಿ, ಅಧಿಕ್ಷಕ ಸಿ.ಆರ್. ಪೂಜಾರ, ಡಿಸಿಸಿ ಬ್ಯಾಂಕ್ ಅಧಿಕಾರಿ ಗಿರೀಶ ಸಂಶಿ. ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷ ಸತ್ಯಪ್ಪ ಮೆಲ್ನಾಡ, ನಿರ್ದೇಶಕರಾದ ಎಂ.ಎನ್. ಪಾಟೀಲ, ಹೆಮಾದ್ರಿ ಕೊಪ್ಪಳ, ಅಮಿನಸಾಬ ಬೀಳಗಿ, ನಿಂಗನಗೌಡ ಪಾಟೀಲ, ಕಲ್ಲಯ್ಯ ಪತ್ರಿ, ಗಂಗಣ್ಣ ಕೆರೂರ, ರಾಜಣ್ಣ ಬಾರಕೇರ, ಡಿ.ಬಿ. ಮಮದಾಪೂರ, ಭೀಮಪ್ಪ ಕೂಗಟಿ, ಬ್ಯಾಂಕಿನ ವ್ಯವಸ್ಥಾಪಕ ಜಿ.ಎಸ್.ಬನ್ನಟ್ಟಿ, ಶಾಹಿರ್ ಬೀಳಗಿ ಇದ್ದರು.