ಎಸ್.ಆರ್. ಪಾಟೀಲ್ ಗೆ ಬಸವ ಪುರಸ್ಕಾರ

| Published : Aug 10 2025, 02:17 AM IST

ಸಾರಾಂಶ

ಬೆಂಗಳೂರಿನ ಬಸವ ಪರಿಷತ್ ಕೊಡಮಾಡುವ ಬಸವ ಪುರಸ್ಕಾರ-2025 ಶಿಕ್ಷಣ ಹಾಗೂ ಸಹಕಾರ ಕ್ಷೇತ್ರದಿಂದ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಬಾಡಗಂಡಿ ಗ್ರಾಮದ ಎಸ್.ಆರ್. ಪಾಟೀಲ ಮೆಡಿಕಲ್ ಕಾಲೇಜು ಸಂಸ್ಥಾಪಕ ಅಧ್ಯಕ್ಷರಾದ ಎಸ್.ಆರ್. ಪಾಟೀಲ್ ಅವರಿಗೆ ಲಭಿಸಿದೆ.

ಕನ್ನಡಪ್ರಭ ವಾರ್ತೆ ಬೀಳಗಿ

ಬೆಂಗಳೂರಿನ ಬಸವ ಪರಿಷತ್ ಕೊಡಮಾಡುವ ಬಸವ ಪುರಸ್ಕಾರ-2025 ಶಿಕ್ಷಣ ಹಾಗೂ ಸಹಕಾರ ಕ್ಷೇತ್ರದಿಂದ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಬಾಡಗಂಡಿ ಗ್ರಾಮದ ಎಸ್.ಆರ್. ಪಾಟೀಲ ಮೆಡಿಕಲ್ ಕಾಲೇಜು ಸಂಸ್ಥಾಪಕ ಅಧ್ಯಕ್ಷರಾದ ಎಸ್.ಆರ್. ಪಾಟೀಲ್ ಅವರಿಗೆ ಲಭಿಸಿದೆ. ಬೆಂಗಳೂರಿನ ಭಾರತೀಯ ಸ್ಕೌಟ್ಸ್ ಮತ್ತು ಗೈಡ್ಸ್ ಆವರಣದಲ್ಲಿರುವ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಶನಿವಾರ ನೆಡೆದ ಸಮಾರಂಭದಲ್ಲಿ ಮೈಸೂರಿನ ಸುತ್ತೂರು ಸಂಸ್ಥಾನದ ಜಗದ್ಗುರು ಡಾ. ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಹಾಗೂ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಾಧೀಶರು ಹಾಗೂ ಮಾಜಿ ಲೋಕಾಯುಕ್ತರಾದ ಸಂತೋಷ ಹೆಗ್ಡೆ ಅವರಿಂದ ಗೌರವ ಪುರಸ್ಕಾರ ಸ್ವೀಕರಿಸಿದರು. ಪ್ರತಿಷ್ಠಿತ ಬಸವ ಪುರಸ್ಕಾರ ಸ್ವೀಕರಿಸಿದ್ದು, ಇನ್ನಷ್ಟು ಸಮಾಜಮುಖಿ ಕಾರ್ಯಗಳಲ್ಲಿ ಉತ್ಸಾಹದೊಂದಿಗೆ ತೊಡಗಿಸಿಕೊಳ್ಳಲು ಪ್ರೇರಣೆ ನೀಡುವುದರೊಂದಿಗೆ ಸಂತಸ ಉಂಟು ಮಾಡಿದೆ ಎಂದು ಎಸ್.ಆರ್. ಪಾಟೀಲ ತಿಳಿಸಿದ್ದಾರೆ.