ಬಿಜೆಪಿ ಜಿಲ್ಲಾ ಅಧ್ಯಕ್ಷರಾಗಿ ಎಸ್.ಟಿ. ಪಾಟೀಲ ಪುನರಾಯ್ಕೆ

| Published : Mar 15 2025, 01:00 AM IST

ಸಾರಾಂಶ

ಬಿಜೆಪಿ ಬಾಗಲಕೋಟೆ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಎಸ್.ಟಿ. ಪಾಟೀಲ ಪುನರಾಯ್ಕೆ ಆದರು. ಗುರುವಾರ ನಗರದ ಜಿಲ್ಲಾ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಚುನಾವಣಾಧಿಕಾರಿ ಲಿಂಗರಾಜ ಪಾಟೀಲ ನೂತನ ಅಧ್ಯಕ್ಷರ ಹೆಸರು ಘೋಷಣೆ ಮಾಡಿ ಬಿಜೆಪಿ ಧ್ವಜ ಹಸ್ತಾಂತರಿಸಿ ಶುಭ ಕೋರಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಬಿಜೆಪಿಯ ಬಾಗಲಕೋಟೆ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಎಸ್.ಟಿ. ಪಾಟೀಲ ಪುನರಾಯ್ಕೆ ಆದರು. ಗುರುವಾರ ನಗರದ ಜಿಲ್ಲಾ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಚುನಾವಣಾಧಿಕಾರಿ ಲಿಂಗರಾಜ ಪಾಟೀಲ ನೂತನ ಅಧ್ಯಕ್ಷರ ಹೆಸರು ಘೋಷಣೆ ಮಾಡಿ ಬಿಜೆಪಿ ಧ್ವಜ ಹಸ್ತಾಂತರಿಸಿ ಶುಭ ಕೋರಿದರು. ಬಳಿಕ ಮಾತನಾಡಿದ ಅವರು, ತಳಮಟ್ಟದಿಂದ ಜಿಲ್ಲಾಮಟ್ಟದವರೆಗೆ ಪಕ್ಷ ಸಂಘಟಿಸಿ, ಬಲಗೊಳಿಸಲು ಶಕ್ತಿಮೀರಿ ಪ್ರಯತ್ನಿಸುತ್ತೇನೆ. ಪ್ರತಿ ಮಂಡಲದಲ್ಲಿ ಬಿಜೆಪಿ ಕಾರ್ಯಚಟುವಟಿಕೆ ನಡೆಸುವ ಗುರಿ ಹೊಂದಿದ್ದು, ಎಲ್ಲ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಬಲಪಡಿಸಿ, ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸಲು ಪ್ರಯತ್ನಿಸೋಣ ಎಂದು ಹೇಳಿದರು.

ಸಹ ಚುನಾವಣೆ ಅಧಿಕಾರಿ ದೊಡ್ಡನಗೌಡ ಪಾಟೀಲ, ಲಕ್ಷ್ಮೀನಾರಾಯಣ ಕಾಸಟ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಯ್ಯ ಮೂಗನೂರಮಠ, ಮಾಜಿ ಶಾಸಕ ರಾಜಶೇಖರ ಶೀಲವಂತ, ಜಿಲ್ಲೆಯ ಎಲ್ಲ ಮಂಡಲ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಇದ್ದರು.

ಕಾಂಗ್ರೆಸ್ ಕಚೇರಿಳಾಗಿ ಆಫೀಸ್‌ಗಳು: ರಾಜ್ಯದ ಸರ್ಕಾರಿ ಕಚೇರಿಗಳು ಕಾಂಗ್ರೆಸ್ ಕಚೇರಿಗಳಾಗುತ್ತಿವೆ, ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆ ಅನುಷ್ಠಾನಗೊಳಿಸಲು ಕಾಂಗ್ರೆಸ್ ಕಾರ್ಯಕರ್ತರಿಗೆ ಸರ್ಕಾರದ ಹಣದಲ್ಲಿ ವೇತನ ನೀಡುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಸ್. ಟಿ. ಪಾಟೀಲ ಆರೋಪಿಸಿದ್ದಾರೆ.