ಸಾರಾಂಶ
ಬೇತು ಗ್ರಾಮದ ಸೇಕ್ರೆಡ್ ಆರ್ಟ್ಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕನ್ನಡಪ್ರಭ ವಾರ್ತೆ ನಾಪೋಕ್ಲು
ಇಲ್ಲಿಗೆ ಸಮೀಪದ ಬೇತು ಗ್ರಾಮದ ಸೇಕ್ರೆಡ್ ಆರ್ಟ್ಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಮಡಿಕೇರಿ ಜನರಲ್ ತಿಮ್ಮಯ್ಯ ಶಾಲೆಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 17 ವರ್ಷದ ಒಳಗಿನ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಜಯಗಳಿಸಿದ್ದಾರೆ. ಈ ಪಂದ್ಯಾವಳಿಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಾದ ರಯಾನ್ , ರೋಹನ್ ರೈ , ಮನ್ಸೂರ್ ಮತ್ತು ಶಾಮಿಲ್ ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ ಎಂದು ಶಾಲಾ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.