ಜುಲೈ 28ರಂದು ಸಾಧನಾ ಸಮಾವೇಶ: ಶಾಸಕರಿಂದ ಪೂರ್ವ ಸಿದ್ಧತೆ ಪರಿಶೀಲನೆ

| Published : Jul 21 2025, 12:00 AM IST

ಜುಲೈ 28ರಂದು ಸಾಧನಾ ಸಮಾವೇಶ: ಶಾಸಕರಿಂದ ಪೂರ್ವ ಸಿದ್ಧತೆ ಪರಿಶೀಲನೆ
Share this Article
  • FB
  • TW
  • Linkdin
  • Email

ಸಾರಾಂಶ

ಸರ್ಕಾರದ ಎರಡು ವರ್ಷಗಳ ಯಶಸ್ವಿ ಆಡಳಿತ ಸಾಧನೆ ಹಾಗೂ ಮದ್ದೂರು ಕ್ಷೇತ್ರದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ, ಪೂರ್ಣಗೊಂಡ ಕಾಮಗಾರಿಗಳ ಉದ್ಘಾಟನೆಗಾಗಿ ಬೃಹತ್ ಸಮಾವೇಶ ಯಶಸ್ವಿಯಾಗಿ ನಡೆಸಲು, ಭದ್ರತೆ ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು.

ಮದ್ದೂರು:

ಪಟ್ಟಣದಲ್ಲಿ ಜುಲೈ 28ರಂದು ನಡೆಯಲಿರುವ ರಾಜ್ಯ ಸರ್ಕಾರದ ಸಾಧನಾ ಸಮಾವೇಶ ಹಾಗೂ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನಾ ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಶಾಸಕ ಕೆ.ಎಂ.ಉದಯ್ ನೇತೃತ್ವದಲ್ಲಿ ಅಧಿಕಾರಿಗಳು ಪೂರ್ವ ಸಿದ್ಧತೆಗಳನ್ನು ವೀಕ್ಷಿಸಿದರು.ಹಳೇ ಬೆಂಗಳೂರು-ಮೈಸೂರು ಹೆದ್ದಾರಿಯ ಪಟ್ಟಣದ ಸಮೀಪದ ಸೋಮನಹಳ್ಳಿ ತಿಮ್ಮದಾಸ್ ಹೊಟೇಲ್ ಸಮೀಪದ ಬೃಹತ್ ಸಮಾವೇಶದ ಪೂರ್ವ ಸಿದ್ಧತಾ ಕಾರ್ಯಯೋಜನೆಗಳನ್ನು ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತದ ಅಧಿಕಾರಿ ವರ್ಗದವರ ಜೊತೆಗೂಡಿ ವೀಕ್ಷಣೆ ಮಾಡಲಾಯಿತು.

ಸರ್ಕಾರದ ಎರಡು ವರ್ಷಗಳ ಯಶಸ್ವಿ ಆಡಳಿತ ಸಾಧನೆ ಹಾಗೂ ಮದ್ದೂರು ಕ್ಷೇತ್ರದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ, ಪೂರ್ಣಗೊಂಡ ಕಾಮಗಾರಿಗಳ ಉದ್ಘಾಟನೆಗಾಗಿ ಬೃಹತ್ ಸಮಾವೇಶ ಯಶಸ್ವಿಯಾಗಿ ನಡೆಸಲು, ಭದ್ರತೆ ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಉದಯ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ವೇಳೆ ಜಿಲ್ಲಾಧಿಕಾರಿ ಡಾ.ಕುಮಾರ, ಜಿಪಂ ಸಿಇಒ ಕೆ.ಆರ್.ನಂದಿನಿ, ತಹಸೀಲ್ದಾರ್ ಪರಶುರಾಮ್ ಸತ್ತೀಗೆರೆ, ತಾಪಂ ಇಒ ರಾಮಲಿಂಗಯ್ಯ, ಪುರಸಭೆ ಸಿಒ ಮೀನಾಕ್ಷಿ, ಸಿಪಿಐ ಶಿವಕುಮಾರ್ ಸೇರಿದಂತೆ ಹಲವರು ಇದ್ದರು.

ಜೆಡಿಎಸ್ ಮುಖಂಡರು ಕಾಂಗ್ರೆಸ್ ಸೇರ್ಪಡೆ

ಮದ್ದೂರು:

ತಾಲೂಕಿನ ಸೋಮನಹಳ್ಳಿ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಗೆ ಸೇರಿದ ಅರುವನಹಳ್ಳಿಯ ಜೆಡಿಎಸ್ ಮುಖಂಡರು ಶಾಸಕ ಕೆ.ಎಂ.ಉದಯ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು.

ಗ್ರಾಮದ ಪ್ರಮುಖ ಮುಖಂಡರಾದ ಎ.ಬಿ.ಶ್ರೀನಿವಾಸ್ ಗೌಡ, ಕರಿಯಪ್ಪರ ನಾಗಣ್ಣ, ಗೋವಿಂದ (ಎಸ್ಟಿ), ವೆಂಕಟೇಶ್ (ಎಸ್ಸಿ), ಕಿರಿ ಸಿದ್ದರಾಜು, ಸತೀಶ್ ಬಿಳಿಗೌಡ, ಕೆಂಪೇಗೌಡ, ಮಸಣಯ್ಯ, ಸ್ವಾಮಿ (ಎಸ್ಸಿ) ಸೇರಿದಂತೆ ಹಲವು ಜೆಡಿಎಸ್ ಮುಖಂಡರು, ಕಾಂಗ್ರೆಸ್ ನ ತತ್ವಗಳು, ನೈತಿಕ ಮೌಲ್ಯಗಳು ಮತ್ತು ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಪಕ್ಷ ಸೇರ್ಪಡೆಗೊಂಡಿದ್ದಾರೆ.

ಈ ವೇಳೆ ಮಾತನಾಡಿದ ಶಾಸಕ ಕೆ.ಎಂ.ಉದಯ್, ಕಾಂಗ್ರೆಸ್ ಸೇರ್ಪಡೆಯಿಂದ ಪಕ್ಷದ ಬಲವನ್ನು ಮತ್ತಷ್ಟು ಶಕ್ತಿಶಾಲಿಯಾಗಿಸಲು ಸಹಕಾರಿಯಾಗಿದೆ. ಗ್ರಾಮೀಣ ಮಟ್ಟದ ಸಂಘಟನೆಗೆ ಹೊಸ ಉತ್ತೇಜನವನ್ನು ನೀಡಿದೆ ಎಂದು ಹೇಳಿದರು.