ಸುರಕ್ಷತೆ ಮತ್ತು ವಿದ್ಯುದ್ದೀಕರಣ ಕಾಮಗಾರಿ ಹಿನ್ನೆಲೆ: ಜೂನ್‌ನಿಂದ ನವೆಂಬರ್‌ 1ರ ವರೆಗೆ ಕೆಲವು ಸಾಪ್ತಾಹಿಕ ರೈಲುಗಳ ಸಂಚಾರ ರದ್ದು

| Published : May 17 2025, 01:36 AM IST

ಸುರಕ್ಷತೆ ಮತ್ತು ವಿದ್ಯುದ್ದೀಕರಣ ಕಾಮಗಾರಿ ಹಿನ್ನೆಲೆ: ಜೂನ್‌ನಿಂದ ನವೆಂಬರ್‌ 1ರ ವರೆಗೆ ಕೆಲವು ಸಾಪ್ತಾಹಿಕ ರೈಲುಗಳ ಸಂಚಾರ ರದ್ದು
Share this Article
  • FB
  • TW
  • Linkdin
  • Email

ಸಾರಾಂಶ

ಸಕಲೇಶಪುರ- ಸುಬ್ರಹ್ಮಣ್ಯ ರೋಡ್ ಮಾರ್ಗದಲ್ಲಿ ಜೂನ್ 1 ರಿಂದ ನವೆಂಬರ್ 1, 2025 ರ ವರೆಗೆ ಸುರಕ್ಷತೆ ಮತ್ತು ರೈಲ್ವೆ ವಿದ್ಯುದ್ದೀಕರಣ ಕಾಮಗಾರಿ ನಡೆಯಲಿರುವ ಕಾರಣದಿಂದಾಗಿ ಕೆಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ.

ಕನ್ನಡಪ್ರಭ ವಾರ್ತೆ ಮಂಗಳೂರು

ಸಕಲೇಶಪುರ- ಸುಬ್ರಹ್ಮಣ್ಯ ರೋಡ್ ಮಾರ್ಗದಲ್ಲಿ ಜೂನ್ 1 ರಿಂದ ನವೆಂಬರ್ 1, 2025 ರ ವರೆಗೆ ಸುರಕ್ಷತೆ ಮತ್ತು ರೈಲ್ವೆ ವಿದ್ಯುದ್ದೀಕರಣ ಕಾಮಗಾರಿ ನಡೆಯಲಿರುವ ಕಾರಣದಿಂದಾಗಿ ಕೆಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ.ಈ ಹಿನ್ನೆಲೆಯಲ್ಲಿ ಮೇ 31 ರಿಂದ ನವೆಂಬರ್ 1 ರ ವರೆಗೆ ಶನಿವಾರಗಳಂದು ಸಂಚರಿಸುವ ಯಶವಂತಪುರ-ಮಂಗಳೂರು ಜಂಕ್ಷನ್ ಸಾಪ್ತಾಹಿಕ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16539) ರದ್ದಾಗಲಿದೆ. ಅದೇ ರೀತಿ ಜೂನ್ 1 ರಿಂದ ನವೆಂಬರ್ 2 ರವರೆಗೆ ಭಾನುವಾರಗಳಂದು ಸಂಚರಿಸುವ ಮಂಗಳೂರು ಜಂಕ್ಷನ್-ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16540) ಸಹ ರದ್ದಾಗಲಿದೆ.ಜೂನ್ 1 ರಿಂದ ಅಕ್ಟೋಬರ್ 30 ರ ವರೆಗೆ ಮಂಗಳವಾರ, ಗುರುವಾರ ಮತ್ತು ಭಾನುವಾರಗಳಂದು ಸಂಚರಿಸುವ ಯಶವಂತಪುರ-ಮಂಗಳೂರು ಜಂಕ್ಷನ್ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16575) ರದ್ದಾಗಲಿದೆ. ಇದರ ಜೊತೆಗೆ, ಜೂನ್ 2 ರಿಂದ ಅಕ್ಟೋಬರ್ 31 ರ ವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರಗಳಂದು ಸಂಚರಿಸುವ ಮಂಗಳೂರು-ಯಶವಂತಪುರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16576) ಸಹ ರದ್ದಾಗಲಿದೆ.ಇದಲ್ಲದೆ ಜೂನ್ 2 ರಿಂದ ಅಕ್ಟೋಬರ್ 31 ರ ವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರಗಳಂದು ಸಂಚರಿಸುವ ಯಶವಂತಪುರ-ಕಾರವಾರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16515) ಹಾಗೂ ಜೂನ್ 3 ರಿಂದ ನವೆಂಬರ್ 1 ರ ವರೆಗೆ ಮಂಗಳವಾರ, ಗುರುವಾರ ಮತ್ತು ಶನಿವಾರಗಳಂದು ಸಂಚರಿಸುವ ಕಾರವಾರ-ಯಶವಂತಪುರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16516) ರೈಲುಗಳ ಸಂಚಾರವನ್ನು ಕೂಡ ರದ್ದುಗೊಳಿಸಲಾಗಿದೆ ಎಂದು ರೈಲ್ವೆ ಪ್ರಕಟಣೆ ತಿಳಿಸಿದೆ.