ಸ್ವಚ್ಛತೆಗಾಗಿ ನಿರಂತರ ಶ್ರಮಿಸುತ್ತಿರುವ ಪೌರಕಾರ್ಮಿಕರ ಆರೋಗ್ಯ ರಕ್ಷಣೆಯ ದೃಷ್ಟಿಯಿಂದ ಸರ್ಕಾರ ಹಲವು ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಹೇಳಿದರು.

ಕನ್ನಡಪ್ರಭ ವಾರ್ತೆ ಕುಶಾಲನಗರ

ಸ್ವಚ್ಛತೆಗಾಗಿ ನಿರಂತರ ಶ್ರಮಿಸುತ್ತಿರುವ ಪೌರಕಾರ್ಮಿಕರ ಆರೋಗ್ಯ ರಕ್ಷಣೆಯ ದೃಷ್ಟಿಯಿಂದ ಸರ್ಕಾರ ಹಲವು ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಹೇಳಿದರು.

ಕುಶಾಲನಗರ ಪಿ.ಎಂ. ಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಪೌರಕಾರ್ಮಿಕರಿಗೆ ಗ್ಲೌಸ್, ಮಾಸ್ಕ್, ಗಂಬೂಟ್ಸ್, ಸ್ಯಾನಿಟೈಸರ್, ಸೋಪ್ ಹಾಗೂ ರೇನ್‌ಕೋಟ್ ಒಳಗೊಂಡ ಕಿಟ್‌ಗಳನ್ನು ವಿತರಿಸಿದರು.

ಪೌರಕಾರ್ಮಿಕರು ಸ್ವಚ್ಛ ನಗರದ ನೈಜ ಶಿಲ್ಪಿಗಳು, ಚರಂಡಿ, ಕಸ, ತ್ಯಾಜ್ಯ ಸ್ವಚ್ಛಗೊಳಿಸುವಾಗ ಅವರ ಆರೋಗ್ಯಕ್ಕೆ ಧಕ್ಕೆ ಆಗಬಾರದು. ಪ್ರತಿಯೊಬ್ಬರಿಗೂ ಸುರಕ್ಷತಾ ಪರಿಕರಗಳನ್ನು ನೀಡಲಾಗುತ್ತಿದೆ. ಕೆಲಸ ನಿರ್ವಹಿಸುವ ಸಂದರ್ಭ ಅಗತ್ಯ ಪರಿಕರಗಳನ್ನು ಕಡ್ಡಾಯವಾಗಿ ಬಳಸಬೇಕು ಎಂದು ಶಾಸಕ ಡಾ. ಮಂತರ್ ಗೌಡ ತಿಳಿಸಿದರು.

ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ ಪಿ ಶಶಿಧರ್, ಕಾಂಗ್ರೆಸ್ ನಗರ ಅಧ್ಯಕ್ಷರಾದ ಜೋಸೆಫ್ ಫಿಕ್ಟರ್ ಸೋನ್ಸ್, ಕೆಪಿಸಿಸಿ ಸದಸ್ಯ ಮಂಜುನಾಥ್ ಗುಂಡೂರಾವ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಕೆ ಪಿ ಚಂದ್ರಕಲಾ, ವಿ ಎಸ್ ಆನಂದ್ ಕುಮಾರ್, ಪುರಸಭೆ ಮುಖ್ಯಾಧಿಕಾರಿ ಟಿ ಗೆ ಗಿರೀಶ್, ಪೌರ ಕಾರ್ಮಿಕರು ಇದ್ದರು.