ನ.16ರಂದು ಸಹಕಾರಿ ಸಪ್ತಾಹದ ‘ಸಹಕಾರ ಮಾಣಿಕ್ಯ ಪ್ರಶಸ್ತಿ’ ಮತ್ತು ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರಕಟ

| Published : Nov 15 2024, 12:33 AM IST

ನ.16ರಂದು ಸಹಕಾರಿ ಸಪ್ತಾಹದ ‘ಸಹಕಾರ ಮಾಣಿಕ್ಯ ಪ್ರಶಸ್ತಿ’ ಮತ್ತು ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರಕಟ
Share this Article
  • FB
  • TW
  • Linkdin
  • Email

ಸಾರಾಂಶ

ಮೂಡುಬಿದಿರೆ ಸಹಕಾರ ತರಬೇತಿ ಕೇಂದ್ರದಲ್ಲಿ ರಾಂಕ್‌ ವಿಜೇತರಾದ ಚೈತ್ರಾ ಮೂಡುಬಿದಿರೆ ಹಾಗೂ ದಿವ್ಯರಾಣಿ ಕುಳಾಯಿ ಇವರನ್ನು ಪುರಸ್ಕರಿಸಲಾಗುವುದು ಎಂದು ಡಾ. ಎಂ. ಎನ್. ರಾಜೇಂದ್ರ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಗಳೂರು

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಉತ್ತಮ ಸಹಕಾರಿ ಸಂಘಗಳನ್ನು ಗುರುತಿಸುವ ಉದ್ದೇಶದಿಂದ 2024ನೇ ಸಾಲಿನಿಂದ ಅಖಿಲ ಭಾರತ ಸಹಕಾರ ಸಪ್ತಾಹದ ಸಂಭ್ರಮ ಆಚರಣೆಯ ಸಂದರ್ಭದಲ್ಲಿ ‘ಸಹಕಾರ ಮಾಣಿಕ್ಯ’ ಎಂಬ ಪ್ರಶಸ್ತಿಯನ್ನು ನೀಡಲು ಈ ಬಾರಿ ನಿರ್ಧರಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ. ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯುವ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಉಭಯ ಜಿಲ್ಲೆಗಳಿಂದ ತಲಾ ಒಂದರಂತೆ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ‘ಸಹಕಾರ ಮಾಣಿಕ್ಯ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಮೂಡುಬಿದಿರೆ ಸೇವಾ ಸಹಕಾರಿ ಸಂಘ ನಿ, ಉಡುಪಿ ಜಿಲ್ಲೆಯಿಂದ ಪಡುಬಿದ್ರಿ ವ್ಯವಸಾಯ ಸೇವಾ ಸಹಕಾರಿ ಸಂಘ ನಿ. ಹಾಗೂ ಕ್ರೆಡಿಟ್ ಕೋ-ಅಪರೇಟಿವ್ ಸಹಕಾರ ಸಂಘದಿಂದ ಮಂಗಳೂರಿನ ರಾಮಕೃಷ್ಣ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಆಯ್ಕೆಯಾಗಿದೆ. ಸಹಕಾರ ಮಾಣಿಕ್ಯ ಪ್ರಶಸ್ತಿ ಜೊತೆಗೆ 5 ಗ್ರಾಂ ಚಿನ್ನದ ಪದಕ, 10,000 ರು. ನಗದು ಹಾಗೂ ಪಾರಿತೋಷಕವನ್ನು ನೀಡಿ ಗೌರವಿಸಲಾಗುವುದು ಎಂದು ಡಾ. ಎಂ. ಎನ್ ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಉತ್ತಮ ಕೃಷಿ ಪತ್ತಿನ ಸಹಕಾರಿ ಸಂಘಗಳ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಬಜ್ಪೆ ವ್ಯವಸಾಯ ಸೇವಾ ಸಹಕಾರಿ ಸಂಘ, ಉಡುಪಿ ಜಿಲ್ಲೆಯಿಂದ ಕೋಟ ಸಹಕಾರಿ ವ್ಯವಸಾಯಿಕ ಸಂಘ, ಉತ್ತಮ ಮಹಿಳಾ ಸಹಕಾರಿ ಸಂಘ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಪುತ್ತೂರು ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘ, ಉಡುಪಿ ಜಿಲ್ಲೆಯಿಂದ ಕಿರಿಮಂಜೇಶ್ವರ ಮಹಿಳಾ ಸಹಕಾರಿ ಸಂಘ, ಉತ್ತಮ ಮೀನುಗಾರಿಕಾ ಸಹಕಾರಿ ಸಂಘ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಮಂಗಳೂರು ಯಾಂತ್ರಿಕ ಮೀನುಗಾರರ ಸಹಕಾರಿ ಸಂಘ, ಉಡುಪಿ ಜಿಲ್ಲೆಯಿಂದ ಹೆಮ್ಮಾಡಿ ಮೀನುಗಾರಿಕಾ ಸಹಕಾರಿ ಸಂಘ, ಉತ್ತಮ ಪತ್ತಿನ ಸಹಕಾರಿ ಸಂಘ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ, ಉಡುಪಿ ಜಿಲ್ಲೆಯಿಂದ ಬಡಗಬೆಟ್ಟು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಹಾಗೂ ಉತ್ತಮ ಆಡಳಿತಾತ್ಮಕ ಸಹಕಾರ ಸಂಘ ಪ್ರಶಸ್ತಿಗೆ ಮಂಗಳೂರಿನ ಕಾವೂರು ವ್ಯವಸಾಯ ಸೇವಾ ಸಹಕಾರ ಸಂಘವನ್ನು ಆಯ್ಕೆ ಮಾಡಲಾಗಿದೆ.

2023-24ರಲ್ಲಿ ಶತಮಾನ ಪೂರೈಸಿರುವ ಸಹಕಾರಿ ಸಂಘಗಳಿಗೆ ನೀಡುವ ಪ್ರಶಸ್ತಿಯನ್ನು ಗಣಪತಿ ಸಹಕಾರಿ ವ್ಯವಸಾಯಿಕ ಸಂಘ ನಿ. ಉಡುಪಿ ಜಿಲ್ಲೆ, ಮಂದಾರ್ತಿ ಸೇವಾ ಸಹಕಾರಿ ಸಂಘ, ಉಡುಪಿ ಜಿಲ್ಲೆ, ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ದಕ್ಷಿಣ ಕನ್ನಡ ಜಿಲ್ಲೆ, ಕೊಲ್ಲಮೊಗ್ರು ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳಿಗೆ ಈ ಸಹಕಾರ ಸಂಘಗಳಿಗೆ ನೀಡಲಾಗುವುದು.

ಉತ್ತಮ ಸೌಹಾರ್ದ ಸಹಕಾರಿ ಸಂಘ ಪ್ರಶಸ್ತಿಗೆ ಒಡಿಯೂರು ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ, ದಕ್ಷಿಣ ಕನ್ನಡ ಜಿಲ್ಲೆ, ವಿವಿಧೋದ್ದೇಶ ಸಹಕಾರ ಸಂಘ-ವಿಶೇಷ ಪ್ರಶಸ್ತಿಗೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನಿ.ಮಂಗಳೂರು, ಎಸ್.ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರೀಯಲ್ ಕೋ-ಅಪರೇಟಿವ್ ಸೊಸೈಟಿ ಮಂಗಳೂರು, ಉತ್ತಮ ನವೋದಯ ಸ್ವಸಹಾಯ ಗುಂಪು ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹಾಲಸ ನವೋದಯ ಸ್ವಸಹಾಯ ಗುಂಪು, ಬೋಂದೆಲ್, ಮಂಗಳೂರು, ಉಡುಪಿ ಜಿಲ್ಲೆಯಿಂದ ಶ್ರೀ ಲಕ್ಷ್ಮೀನಾರಾಯಣ ನವೋದಯ ಸ್ವಸಹಾಯ ಸಂಘ, ಕಾಪು, ಉಡುಪಿ, ಉತ್ತಮ ಹಾಲು ಉತ್ಪಾದಕರ ಸಹಕಾರಿ ಸಂಘ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ನೆರಿಯ ಹಾಲು ಉತ್ಪಾದಕರ ಸಹಕಾರಿ ಸಂಘ, ಬೆಳ್ತಂಗಡಿ, ಉಡುಪಿ ಜಿಲ್ಲೆಯಿಂದ ಹಾಳೆಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘ, ನಿಟ್ಟೆ, ಉಡುಪಿ ಜಿಲ್ಲೆ ಹಾಗೂ ಪತ್ರಿಕಾ ರಂಗದ ಪ್ರಶಸ್ತಿಗೆ ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘ ಮತ್ತು ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ ನಾಯಕ್ ಇಂದಾಜೆ ಇವರು ಆಯ್ಕೆಗೊಂಡಿದ್ದಾರೆ.

ಮಾತ್ರವಲ್ಲ ಮೂಡುಬಿದಿರೆ ಸಹಕಾರ ತರಬೇತಿ ಕೇಂದ್ರದಲ್ಲಿ ರಾಂಕ್‌ ವಿಜೇತರಾದ ಚೈತ್ರಾ ಮೂಡುಬಿದಿರೆ ಹಾಗೂ ದಿವ್ಯರಾಣಿ ಕುಳಾಯಿ ಇವರನ್ನು ಪುರಸ್ಕರಿಸಲಾಗುವುದು ಎಂದು ಡಾ. ಎಂ. ಎನ್. ರಾಜೇಂದ್ರ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.