SAHE University’s 15th Convocation Today

ಕನ್ನಡಪ್ರಭ ವಾರ್ತೆ, ತುಮಕೂರುಎಂಜಿನಿಯರಿಂಗ್, ದಂತ ವೈದ್ಯಕೀಯ ಅಥವಾ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳಿಗೆ ಕೌಶಲ್ಯಗಳು ಮತ್ತು ದೃಷ್ಟಿಕೋನಗಳಲ್ಲಿ ಬದಲಾವಣೆಗಳನ್ನು ತರುವ ಮೂಲಕ ಪ್ರಪಂಚದಾದ್ಯಂತ ತಮ್ಮ ವಿದ್ಯಾರ್ಥಿ ಸಮೂಹವನ್ನು ಹೊಂದಿರುವ ನಗರದ ಅಗಳಕೋಟೆಯಲ್ಲಿರುವ ಸಾಹೇ (ಶ್ರೀ ಸಿದ್ಧಾರ್ಥ ಅಕಾಡೆಮಿ ಆಫ್ ಹೈಯರ್ ಎಜುಕೇಷನ್) ವಿಶ್ವವಿದ್ಯಾಲಯದ ತನ್ನ 15ನೇ ಘಟಿಕೋತ್ಸವದ ಸಂಭ್ರಮದಲ್ಲಿದ್ದು ಶನಿವಾರದಂದು ಈ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಲಿದೆ.

ಅಗಳಕೋಟೆಯ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಡಾ.ಎಚ್.ಎಂ ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಶನಿವಾರ ಬೆಳಿಗ್ಗೆ 10.30ಕ್ಕೆ ನಡೆಯುವ ಘಟಿಕೋತ್ಸವದಲ್ಲಿ ಕರ್ನಾಟಕದ ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಮತ್ತು 2026ರ ಪದ್ಮಶ್ರೀ ಪುರಸ್ಕೃತರಾದ ಡಾ.ಶುಭಾ ವೆಂಕಟೇಶ ಅಯ್ಯಂಗಾರ್, ಹಿರಿಯ ಸಾಹಿತಿ ಮತ್ತು ಚಲನಚಿತ್ರ ನಿರ್ದೇಶಕ ಪ್ರೊ. ಬರಗೂರು ರಾಮಚಂದ್ರಪ್ಪ ಮತ್ತು ತಮಿಳುನಾಡಿನ ಪ್ರಸಿದ್ಧ ವೈದ್ಯರಾದ ಡಾ.ಸಿ.ಪಳನಿವೇಲು ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತಿದೆ.ಸಾಹೇ (ಶ್ರೀ ಸಿದ್ಧಾರ್ಥ ಅಕಾಡೆಮಿ ಆಫ್ ಹೈಯರ್‌ಎಜುಕೇಷನ್) ವಿಶ್ವವಿದ್ಯಾಲಯದ 15 ನೇ ಘಟಿಕೋತ್ಸವದಲ್ಲಿ 1347 ವಿದ್ಯಾರ್ಥಿಗಳಿಗೆ ಪದವಿಮತ್ತು 18 ಮಂದಿಗೆ ಚಿನ್ನದ ಪದಕ ಪ್ರದಾನ ಮಾಡಲಾಗುತ್ತದೆ. ವೈದ್ಯಕೀಯ- 4, ದಂತ ವೈದ್ಯಕೀಯ-2 ಎಂಜಿನಿಯರಿಂಗ್-10 ಎಂಸಿಎ ಮತ್ತು ಎಂಬಿಎ-2 ಸೇರಿದಂತೆ 18 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರದಾನ. ೧೮ ಪಿಎಚ್‌ಡಿ ಪದವಿ, ಫೆಲೋಶಿಪ್-8 ಪದಕ ಪಡೆಯಲಿದ್ದಾರೆ.

ಸಮಾರಂಭದಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅಧ್ಯಕ್ಷರು ಮತ್ತು ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿ ಡಾ.ವಿ.ನಾರಾಯಣ್ ಅವರು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಸಾಹೇ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಜಿ.ಪರಮೇಶ್ವರ ಅವರು ಘಟಿಕೋತ್ಸವದಲ್ಲಿ ಪದವಿ ಪ್ರಮಾಣ ಗೌಪ್ಯತೆಯನ್ನು ಬೋಧಿಸಿ, ಪ್ರಮಾಣ ಪತ್ರಗಳನ್ನು ವಿತರಿಸಲಿದ್ದು, ಘಟಿಕೋತ್ಸವದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಟ್ರಸ್ಟಿಗಳಾದ ಕನ್ನಿಕಾ ಪರಮೇಶ್ವರಿ ಮತ್ತು ಡಾ.ಜಿ.ಎಸ್.ಆನಂದ್ ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.ಸಾಹೇ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಕೆ.ಬಿ.ಲಿಂಗೇಗೌಡ, ಕುಲಸಚಿವ ಡಾ. ಅಶೋಕ್ ಮೆಹತಾ, ಸಾಹೇ ವಿಶ್ವವಿದ್ಯಾನಿಲಯದ ಪರೀಕ್ಷಾಂಗ ವಿಭಾಗದ ನಿಯಂತ್ರಕ ಡಾ.ಸುನೀಲ್ ಕೆ, ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ.ಸಾಣಿಕೊಪ್ಪ, ಡೆಂಟಲ್ ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಪ್ರವೀಣ್ ಕುಡುವ, ವೈದ್ಯಕೀಯ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ.ಪ್ರಭಾಕರ್ ಜಿ ಎನ್, ಉಪ ಕುಲಸಚಿವರು ಆದ ಡಾ.ಸುದೀಪ್ ಕುಮಾರ್, ಟಿ.ಬೇಗೂರಿನ ಶ್ರೀ ಸಿದ್ಧಾರ್ಥ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರದ ಪ್ರಾಂಶುಪಾಲ ಡಾ ದಿವಾಕರ್, ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಮಹಾಂತೇಶ್ ಎಂ ನಡಕಟ್ಟಿ ಸೇರಿದಂತೆ ಎಲ್ಲಾ ವಿಭಾಗಗಳ ಮುಖ್ಯಸ್ಥರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಮತ್ತು ಪೋಷಕರು ಭಾಗವಹಿಸಲಿದ್ದಾರೆ.