ಗಿಟಾರ್ ವಾದನ, ಕೀಬೋರ್ಡ, ಹಾರ್ಮೋನಿಯಂ ನುಡಿಸುವದು, ಮೌಥ್ ಪಿಯಾನೋದಲ್ಲಿ ಪರಿಣತಿ

ಕೊಪ್ಪಳ: ನಗರದ ಶ್ರೀಚೈತನ್ಯ ಸಮೂಹ ಸಂಸ್ಥೆಯ ಸ್ವಾಮಿ ವಿವೇಕಾನಂದ ಪದವಿಪೂರ್ವ ವಿಜ್ಞಾನ ಕಾಲೇಜಿನ ದ್ವಿತಿಯ ಪಿಯು ವಿದ್ಯಾರ್ಥಿನಿ ಸಾಹಿತ್ಯ ಎಂ.ಗೊಂಡಬಾಳಗೆ ಕರ್ನಾಟಕ ಸರ್ಕಾರದ ಬಾಲವಿಕಾಸ ಅಕಾಡೆಮಿಯ ರಾಜ್ಯಮಟ್ಟದ ಬಾಲಗೌರವ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಬೆಳಗಾವಿಯ ಸುವರ್ಣಸೌಧದ ಆಡಿಟೋರಿಯಂ ಹಾಲ್‍ನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ 2023-24 ನೇ ಸಾಲಿನ ಬಹುಮುಖ ಪ್ರತಿಭೆ ವಿಭಾಗದಲ್ಲಿ ಸಮಾಜ ಸೇವಕ ಮಂಜುನಾಥ ಜಿ. ಗೊಂಡಬಾಳ ಮತ್ತು ಜ್ಯೋತಿ ಎಂ. ಗೊಂಡಬಾಳ ದಂಪತಿಯ ಪುತ್ರಿ ಬಹುಮುಖ ಪ್ರತಿಭೆ ಸಾಹಿತ್ಯ ಎಂ.ಗೊಂಡಬಾಳ ಅವರಿಗೆ ಬಾಲಗೌರವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಂಗೀತ, ವೆಸ್ಟರ್ನ್ ನೃತ್ಯ, ಭರತನಾಟ್ಯ ಸೇರಿದಂತೆ ಗಿಟಾರ್ ವಾದನ, ಕೀಬೋರ್ಡ, ಹಾರ್ಮೋನಿಯಂ ನುಡಿಸುವದು, ಮೌಥ್ ಪಿಯಾನೋದಲ್ಲಿ ಪರಿಣತಿ, ಕ್ರೀಡಾ ಕ್ಷೇತ್ರದ ರಾಜ್ಯಮಟ್ಟದ ದಸರಾ ಸಿಎಂ ಕಪ್ ನೆಟ್‍ಬಾಲ್ ಸೇರಿ ಹಲವು ರಾಜ್ಯಮಟ್ಟದ ಪ್ರಶಸ್ತಿ, ಪೆಂಕಾಕ್ ಸಿಲತ್‍ನಲ್ಲಿ ರಾಜ್ಯ ಮತ್ತು ರಾಷ್ಟಮಟ್ಟದ ಪದಕ ಸೇರಿ ಜಂಪ್ ರೋಪ್ ಕ್ರೀಡೆ, ಕರಾಟೆ, ಏರ್‍ರೈಫಲ್ ನಲ್ಲಿ ಸಾಹಿತ್ಯ ಗೊಂಡಬಾಳ ಪ್ರಶಸ್ತಿ ಪಡೆದಿರುವದನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಭರಮಣ್ಣ ಉಪ್ಪಾರ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ವಿನಯ ನಾವಲಗಟ್ಟಿ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಡಿಡಿ ಚೇತನ್ ಕುಮಾರ್, ಬಾಲವಿಕಾಸ ಅಕಾಡಮಿ ಯೋಜನಾಧಿಕಾರಿ ಅಕ್ಕಮಹಾದೇವಿ ಕೆ. ಎಚ್.,ಗ್ರಾಪಂ ಅಧ್ಯಕ್ಷೆ ಲಕ್ಷ್ಮೀ ಗಜಪತಿ ಸೇರಿ ಹಲವು ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.