ಎಲ್ಲರ ಸಹಕಾರದಿಂದ ಸಾಹಿತ್ಯ ಸಮ್ಮೇಳನ ಯಶಸ್ವಿ: ಶಾಸಕ ಜಿ.ಎಚ್.ಶ್ರೀನಿವಾಸ್

| Published : Jul 15 2025, 11:45 PM IST

ಎಲ್ಲರ ಸಹಕಾರದಿಂದ ಸಾಹಿತ್ಯ ಸಮ್ಮೇಳನ ಯಶಸ್ವಿ: ಶಾಸಕ ಜಿ.ಎಚ್.ಶ್ರೀನಿವಾಸ್
Share this Article
  • FB
  • TW
  • Linkdin
  • Email

ಸಾರಾಂಶ

ತರೀಕೆರೆ, ಉತ್ತಮವಾಗಿ ಕಾರ್ಯಕ್ರಮ ಆಯೋಜಿಸುವ ಮೂಲಕ ಎಲ್ಲರೂ ಸೇರಿ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸಿದ್ದಾರೆ ಎಂದು 20ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ, ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.

20ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಯವ್ಯಯ ಮೆಂಡನೆ ಸಭೆ

ಕನ್ನಡಪ್ರಭ ವಾರ್ತೆ, ತರೀಕೆರೆ

ಉತ್ತಮವಾಗಿ ಕಾರ್ಯಕ್ರಮ ಆಯೋಜಿಸುವ ಮೂಲಕ ಎಲ್ಲರೂ ಸೇರಿ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸಿದ್ದಾರೆ ಎಂದು 20ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ, ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.

ಸೋಮವಾರ ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ತರೀಕೆರೆ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ 20ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಯವ್ಯಯ ಮಂಡನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಮ್ಮೇಳನದ ಯಶಸ್ಸಿಗೆ ಎಲ್ಲಾ ಇಲಾಖೆಗಳು, ತಾಲೂಕು ಆಡಳಿತ ಸ್ಪಂದಿಸಿದೆ. ಸಮ್ಮೇಳನದಲ್ಲಿ ಉಟೋಪಚಾರದ ವ್ಯವಸ್ಥೆ ಅಚ್ಚುಕಟ್ಟಾಗಿತ್ತು, ಸಮ್ಮೇಳನದ ನಂತರ ಉಳಿದ ಹಣವನ್ನು ಸಾಹಿತ್ಯ ಪರಿಷತ್ತಿನಿಂದ ಪಟ್ಟಣದಲ್ಲಿ ಕನ್ನಡ ಭವನದ ಕಟ್ಟಡ ನಿರ್ಮಿಸಲು ಉಪಯೋಗಿಸಿಕೊಳ್ಳ ಬಹುದಾಗಿದೆ ಎಂದು ಹೇಳಿದರು.

ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ, ಉಪ ವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್ ಮಾತನಾಡಿ ಶಾಸಕ ಶ್ರೀನಿವಾಸ್ ಅವರ ನಿರ್ದೇಶನದಂತೆ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಕಾರ್ಯಗತ ಮಾಡಲಾಯಿತು. ಅವರೇ ನಮಗೆ ಸ್ಪೂರ್ತಿ ನೀಡಿ, ನಮಗೆ ಜವಾಬ್ದಾರಿ ನೀಡಿದರು. ಉಪ ವಿಭಾಗ ಮಟ್ಟದ ಸಮ್ಮೇಳನ ಅತ್ಯಂತ ಅರ್ಥಪೂರ್ಣವಾಗಿ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಸಹಕಾರದಿಂದ ಸಮ್ಮೇಳನ ಸುಸಂಪನ್ನವಾಯಿತು ಎಂದು ತಿಳಿಸಿದ ಅವರು ಸಹಕರಿಸಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಸೂರಿ ಶ್ರೀನಿವಾಸ್ ಮಾತನಾಡಿ, 20ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಯವ್ಯಯ ಮಂಡಿಸಿ ಮಾತನಾಡಿ ಸಮ್ಮೇಳನದ ಯಶಸ್ಸಿಗೆ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ, ಶಾಸಕ ಜಿ.ಎಚ್.ಶ್ರೀನಿವಾಸ್, ಉಪ ವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್ ಹಾಗೂ ತಾಲೂಕು ಅಡಳಿತ ಕನ್ನಡ ಮನಸ್ಸುಗಳು ಕಾರಣ. ಹಣಕಾಸು ಸಮಿತಿ ಅಧ್ಯಕ್ಷ ಮಿಲ್ಟ್ರಿ ಶ್ರೀನಿವಾಸ್, ಡಾ.ಟಿ.ಎನ್.ಜಗದೀಶ್, ಕಸಾಪ ತಾಲೂಕು ಅದ್ಯಕ್ಷ ರವಿದಳವಾಯಿ ಅವರ ಅಚ್ಚುಕಟ್ಟಾದ ನಿರ್ವಹಣೆ ಫಲವಾಗಿ ಸಮ್ಮೇಳನ ಅತ್ಯಂತ ಯಶಸ್ವಿಯಾಗಿ ಜರುಗಿತು ಎಂದು ಹೇಳಿದರು.ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಆರ್.ಅನಂತಪ್ಪ, ಕನ್ನಡಶ್ರೀ ಬಿ.ಎಸ್.ಭಗವಾನ್, ಎಂ.ಬಿ.ರಾಮಚಂದ್ರಪ್ಪ, ಲೇಖಕ ತ.ಮ.ದೇವಾನಂದ್, ಕಸಾಪ ನಿಕಟಪೂರ್ವ ಅಧ್ಯಕ್ಷ ನವೀನ್ ಪೆನ್ನಯ್ಯ, ಎಸ್.ಟಿ.ತಿಪ್ಪೇಶ್, ಕೆ.ಎಸ್.ಶಿವಣ್ಣ, ಟಿ.ಸಿ.ದರ್ಶನ್, ಉಮಾ ಪ್ರಕಾಶ್, ವಿವಿಧ ಸಮಿತಿಗಳ ಅಧ್ಯಕ್ಷ ಮತ್ತು ಸದಸ್ಯರ ಸಹಕಾರದಿಂದ ಸಮ್ಮೇಳನ ಅತ್ಯಂತ ವ್ಯವಸ್ಥಿತವಾಗಿ ಜರುಗಿತು ಎಂದು ಹೇಳಿದರು.ಕನ್ನಡಶ್ರೀ ಬಿ.ಎಸ.ಭಗವಾನ್ ಮಾತನಾಡಿ ಶಾಸಕರು, ಉಪ ವಿಭಾಗಾಧಿಕಾರಿಗಳ ಜಾಣ್ಮೆ ಮತ್ತು ಕಾರ್ಯದಕ್ಷತೆಯಿಂದ ಎಲ್ಲೂ ಲೋಪ ಬಾರದ ರೀತಿ ನಡೆಯಿತು, ಬಯಲು ರಂಗ ಮಂದಿರದಲ್ಲಿ ಶಾಮಿಯಾನ ಡೆಕೊರೇಟರ್ ಗಿರೀಶ್‌

ಆ ಕರ್ಷಣೀಯವಾದ ವೇದಿಕೆಯನ್ನು ಹಾಗೂ ಇಡೀ ಪಟ್ಟಣವನ್ನೇ ಅಲಂಕರಿಸಿದ್ದರು. ಸಮ್ಮೇಳನಾಧ್ಯಕ್ಷರ ಮೆರವಣಿಗೆಯಿಂದ ಒಳಗೊಂಡು ಸಮ್ಮಳನದ್ಲಲ್ಲಿ ನೆಡೆದ ವಿವಿಧ ಗೋಷ್ಠಿಗಳು, ವಿಚಾರ ಸಂಕಿರಣಗಳು, ಉಪನ್ಯಾಸ, ಸಾಧಕರಿಗೆ ಗೌರವ ಸನ್ಮಾನ ಸಾಂಸ್ಕೃತಿಕ ಕಾರ್ಯಕ್ರಮ ಸೊಗಸಾಗಿ ಮೂಡಿಬಂದವು ಎಂದು ಹೇಳಿದರು.

ತಾಲೂಕು ಕಸಾಪ ಅಧ್ಯಕ್ಷ ರವಿ ದಳವಾಯಿ ಮಾತನಾಡಿ ದಾನಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ತಾಲೂಕು ಅಡಳಿತ ಸಿಬ್ಬಂದಿ ಸಹಕಾರದಿಂದ ಸಮ್ಮೇಳನ ಸಂಪೂರ್ಣ ಯಶಸ್ವಿಯಾಗಿ ಜರುಗಿತು.

ಹಣಕಾಸು ಸಮಿತಿ ಮಿಲ್ಟ್ರಿ ಶ್ರೀನಿವಾಸ್, ಡಾ.ಟಿ.ಎನ್. ಜಗದೀಶ್, ಕಸಾಪ ನಿಕಟಪೂರ್ವ ಅಧ್ಯಕ್ಷ ನವೀನ್ ಪೆನ್ನಯ್ಕ, ಲೇಖಕ ತ.ಮ.ದೇವಾನಂದ್, ಎಸ್.ಟಿ.ತಿಪ್ಪೇಶಪ್ಪ, ರಾಮಚಂದ್ರಪ್ಪ ಪ್ರಕಾಶ್, ಟಿ.ಸಿ.ದರ್ಶನ್, ಸಿ.ಎಸ್.ಬಸವರಾಜ್, ನೌಕರರ ಸಂಘದ ಅಧ್ಯಕ್ಷ ಸಿ.ಆರ್.ಅನಂತಪ್ಪ, ಮಂಜುನಾಥ್, ಉಮಾ ಪ್ರಕಾಶ್ ಮತ್ತಿತರರು ಭಾಗವಹಿಸಿದ್ದರು.15ಕೆಟಿಆರ್.ಕೆ.1ಃ

ತರೀಕೆರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ 20ನೇ ಜಿಲ್ಲಾ ಸಾಹಿತ್ಯ ಸಮ್ಮೆಳನದ ಸ್ವಾಗತ ಸಮಿತಿ ಅಧ್ಯಕ್ಷ, ಶಾಸಕ ಜಿ.ಎಚ್.ಶ್ರೀನಿವಾಸ್ ಮಾತನಾಡಿದರು. ಜಿಲ್ಲಾ ಕಸಾಪ ಅದ್ಯಕ್ಷ ಸೂರಿ ಶ್ರೀನಿವಾಸ್, ತಾ.ಕಸಾಪ ಅಧ್ಯಕ್ಷ ರವಿ ದಳವಾಯಿ, ಹಣಕಾಸು ಸಮಿತಿ ಮಿಲ್ಟ್ರಿ ಶ್ರೀನಿವಾಸ್, ಉಪ ವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್, ಕನ್ನಡಶ್ರೀ ಬಿ.ಎಸ್.ಭಗವಾನ್ ಮತ್ತಿತರರು ಇದ್ದರು.