ಸಾರಾಂಶ
ರಸ್ತೆ ಅವ್ಯವಸ್ಥೆ ಬಗ್ಗೆ ಅನೇಕ ಬಾರಿ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳ ಗಮನ ಸೆಳೆದರೂ ಈವರೆಗೆ ಪ್ರಯೋಜನವಾಗಿಲ್ಲ
ಕನ್ನಡಪ್ರಭವಾರ್ತೆ ಸೋಮವಾರಪೇಟೆ
ಪಟ್ಟಣ ಸಮೀಪದ ಚೌಡ್ಲು ಗ್ರಾಮ ಪಂಚಾಯಿತಿಯ ಕಾವೇರಿ ಬಡಾವಣೆಯಲ್ಲಿರುವ ಸೈನಿಕ ರಸ್ತೆ ಕೆಸರುಮಯವಾಗಿದ್ದು, ಸಂಚಾರಕ್ಕೆ ಸಮಸ್ಯೆಯಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.ರಸ್ತೆಯಲ್ಲಿ ಹೊಂಡಗಳು ನಿರ್ಮಾಣವಾಗಿದ್ದು, ವಾಹನ ಸಂಚಾರ ದುಸ್ತರವಾಗಿದೆ. ದ್ವಿಚಕ್ರ, ಆಟೋಗಳ ಸಂಚಾರಕ್ಕೂ ಸಂಚಕಾರ ಬಂದಿದೆ. ರಸ್ತೆ ಅವ್ಯವಸ್ಥೆ ಬಗ್ಗೆ ಅನೇಕ ಬಾರಿ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳ ಗಮನ ಸೆಳೆದರೂ ಈವರೆಗೆ ಪ್ರಯೋಜನವಾಗಿಲ್ಲ ಎಂದು ದೂರಿದ್ದಾರೆ. ಸದ್ಯ ಶಾಲಾ ಕಾಲೇಜು ಮಕ್ಕಳು, ವಯೋವೃದ್ಧರು ನಡೆದಾಡಲೂ ಕಷ್ಟಕರವಾಗಿದೆ. ಸಂಬಂಧಿಸಿದ ಇಲಾಖಾಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.