ಸಾರಾಂಶ
ಕನಕದಾಸರು 15ನೇ ಶತಮಾನದಲ್ಲಿಯೇ ಸಮಾಜದಲ್ಲಿ ಆಳವಾಗಿ ಬೇರುಬಿಟ್ಟಿದ್ದ ಜಾತೀಯತೆಯನ್ನು ಹೊಡೆದೊಡಿಸಲು ಶ್ರಮಿಸಿದ ಮಹಾನ ಸಂತರಾಗಿದ್ದರು ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.ನಗರದ ನೆಹರು ಮಾರ್ಕೆಟ್ ವರ್ತಕರ ಸಂಘದ ಸಮುದಾಯ ಭವನದಲ್ಲಿ ಗುರುವಾರ ತಾಲೂಕು ಆಡಳಿತದ ವತಿಯಿಂದ ಆಯೋಜಿಸಲಾಗಿದ್ದ ಕನಕದಾಸರ ಜಯಂತ್ಯುತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕನ್ನಡಪ್ರಭ ವಾರ್ತೆ ರಾಣಿಬೆನ್ನೂರು
ಕನಕದಾಸರು 15ನೇ ಶತಮಾನದಲ್ಲಿಯೇ ಸಮಾಜದಲ್ಲಿ ಆಳವಾಗಿ ಬೇರುಬಿಟ್ಟಿದ್ದ ಜಾತೀಯತೆಯನ್ನು ಹೊಡೆದೊಡಿಸಲು ಶ್ರಮಿಸಿದ ಮಹಾನ ಸಂತರಾಗಿದ್ದರು ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.ನಗರದ ನೆಹರು ಮಾರ್ಕೆಟ್ ವರ್ತಕರ ಸಂಘದ ಸಮುದಾಯ ಭವನದಲ್ಲಿ ಗುರುವಾರ ತಾಲೂಕು ಆಡಳಿತದ ವತಿಯಿಂದ ಆಯೋಜಿಸಲಾಗಿದ್ದ ಕನಕದಾಸರ ಜಯಂತ್ಯುತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸಮಾಜದಲ್ಲಿ ಸಾಕಷ್ಟು ಶೋಷಣೆಗೆ ಒಳಗಾಗಿದ್ದರೂ ಅದಾವುದನ್ನು ತಲೆಕೆಡಿಸಿಕೊಳ್ಳದೆ ಕನಕದಾಸರು ಜಾತೀಯತೆಯ ವಿರುದ್ಧ ಹೋರಾಡಿದರು. ಉಡುಪಿಯಲ್ಲಿ ಶ್ರೀಕೃಷ್ಣನ ದರ್ಶನಕ್ಕೆ ಅವಕಾಶ ಸಿಗದಿರುವುದಕ್ಕೆ ಧೃತಿಗೆಡದೆ ಭಕ್ತಿಯಿಂದ ಭಗವಂತನನ್ನು ಪ್ರಾರ್ಥಿಸಿ ಆತನನ್ನು ತಮ್ಮತ್ತ ತಿರುಗುವಂತೆ ಮಾಡಿ ಶ್ರೇಷ್ಠ ಭಕ್ತನಾಗಿ ಗುರುತಿಸಿಲ್ಪಟ್ಟರು. ಇಂತಹ ಶ್ರೇಷ್ಠ ವ್ಯಕ್ತಿಗಳನ್ನು ಒಂದು ಜಾತಿಗೆ ಸೀಮಿತಗೊಳಿಸದೆ ಸಮಾಜದ ಎಲ್ಲ ವರ್ಗದ ಜನರು ಅವರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳುವಂತಾಗಬೇಕು ಎಂದರು.
ಮಾಜಿ ಶಾಸಕ ಅರುಣಕುಮಾರ ಪೂಜಾರ, ತಹಸೀಲ್ದಾರ ಹನುಮಂತಪ್ಪ ಶಿರಹಟ್ಟಿ, ತಾಲೂಕು ಕುರುಬ ಸಮಾಜದ ಅಧ್ಯಕ್ಷ ಷಣ್ಮುಖಪ್ಪ ಕಂಬಳಿ, ನಗರಸಭಾ ಸದಸ್ಯರಾದ ಮಲ್ಲಿಕಾರ್ಜುನ ಅಂಗಡಿ, ಹುಚ್ಚಪ್ಪ ಮೆಡ್ಲೇರಿ, ರಮೇಶ ಕರಡೆಣ್ಣನವರ, ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಚೋಳಪ್ಪ ಕಸವಾಳ, ಮೃತ್ಯುಂಜಯ ಗುದಿಗೇರ, ಕೃಷ್ಣಪ್ಪ ಕಂಬಳಿ, ಬಿ.ಪಿ. ಶಿಡೇನೂರ, ಕಿರಣ ಗುಳೆದ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್. ಪಾಟೀಲ, ತಾಪಂ ಇಒ ಸುಮಲತಾ ಎಸ್.ಪಿ., ಟಿಎಚ್‌ಒ ರಾಜೇಶ್ವರಿ ಕದರಮಂಡಲಗಿ, ನಗರಸಭೆ ಪೌರಾಯುಕ್ತ ನಿಂಗಪ್ಪ ಕುಮ್ಮಣ್ಣನವರ, ಸಬ್ ರಜಿಸ್ಟ್ರಾರ್ ವಿಶ್ವನಾಥ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಲಿಂಗರಾಜ ಸುತ್ತಕೋಟೆ ಮತ್ತಿತರರಿದ್ದರು.ಇದಕ್ಕೂ ಪೂರ್ವದಲ್ಲಿ ಜಯಂತ್ಯುತ್ಸವದ ಅಂಗವಾಗಿ ನಗರದ ತಾಲೂಕು ಆಡಳಿತ ಸೌಧದ ಬಳಿಯಿಂದ ಹೊರಟ ಕನಕದಾಸರ ಭಾವಚಿತ್ರದ ಮೆರವಣಿಗೆಯು ಕುರುಬಗೇರಿ ಕ್ರಾಸ್ ಮಾರ್ಗವಾಗಿ ಸಮಾರಂಭದ ಸ್ಥಳಕ್ಕೆ ಬಂದು ಸೇರಿತು.