ಕೆಲವೇ ಪಂಗಡಗಳ ಗುರುವಾಗಿ ನಾರಾಯಣ ಗುರುಗಳನ್ನು ಸೀಮಿತಗೊಳಿಸಲಾಗದು. ಅವರು ಲೋಕ ಸಂತರು. ಜಾತಿ, ಮತ, ಬೇಧಭಾವಗಳನ್ನು ಬದಿಗಿರಿಸಿ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ಮಾನವೀಯ ಸಂದೇಶವನ್ನು ಲೋಕಕ್ಕೆ ಸಾರಿದ ಮಹಾನ್ ಸಮಾಜ ಸುಧಾರಕ ನಾರಾಯಣ ಗುರುಗಳು ಎಂದು ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಹೇಳಿದರು.
ಮಂಗಳೂರು: ಕೆಲವೇ ಪಂಗಡಗಳ ಗುರುವಾಗಿ ನಾರಾಯಣ ಗುರುಗಳನ್ನು ಸೀಮಿತಗೊಳಿಸಲಾಗದು. ಅವರು ಲೋಕ ಸಂತರು. ಜಾತಿ, ಮತ, ಬೇಧಭಾವಗಳನ್ನು ಬದಿಗಿರಿಸಿ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ಮಾನವೀಯ ಸಂದೇಶವನ್ನು ಲೋಕಕ್ಕೆ ಸಾರಿದ ಮಹಾನ್ ಸಮಾಜ ಸುಧಾರಕ ನಾರಾಯಣ ಗುರುಗಳು ಎಂದು ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಹೇಳಿದರು.ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಗರದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶುಕ್ರವಾರ ‘ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ’ ಉದ್ಘಾಟಿಸಿ ಮಾತನಾಡಿದರು.ಉಡುಪಿ ರಾಜ್ಯಶಾಸ್ತ್ರ ಉಪನ್ಯಾಸಕ ದಯಾನಂದ ಕರ್ಕೇರ ಉಗ್ಗೆಲ್ ಬೆಟ್ಟು ಉಪನ್ಯಾಸ ನೀಡಿ, ನಾರಾಯಣ ಗುರುಗಳು ಸಾರಿದ ಸಮಾನತೆ, ಶಿಕ್ಷಣ, ಮಾನವೀಯತೆಯ ಚಿಂತನೆಗಳನ್ನು ಕೇವಲ ಮಾತುಗಳಿಗೆ ಸೀಮಿತಗೊಳಿಸದೆ, ಸಮಾಜದ ಪ್ರತಿಯೊಂದು ಹಂತದಲ್ಲೂ ಅನುಷ್ಠಾನಗೊಳಿಸುವ ಅಗತ್ಯವಿದೆ ಎಂದರು.
ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ ಗಫೂರ್, ಕರ್ನಾಟಕ ಪರಿಸರ ಪ್ರವಾಸೋದ್ಯಮ ಮಂಡಳಿ ಅಧ್ಯಕ್ಷೆ ಶಾಲೆಟ್ ಲವೀನಾ ಪಿಂಟೋ, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಎಂ.ಪಿ ಶ್ರೀನಾಥ್, ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಅಧ್ಯಕ್ಷ ಜಯರಾಜ್ ಸೋಮಸುಂದರಂ, ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ, ಮಂಗಳೂರು ತಹಶೀಲ್ದಾರ್ ರಮೇಶ್ ಬಾಬು, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಜಯರಾಮ್ ಮತ್ತಿತರರು ಇದ್ದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಸ್ವಾಗತಿಸಿದರು.