ಶತಮಾನದ ಸಂತ ಡಾ. ಬಾಲಗಂಗಾಧರನಾಥ ಸ್ವಾಮೀಜಿ

| Published : Jan 15 2025, 12:47 AM IST

ಸಾರಾಂಶ

ಪವಾಡ ಪುರುಷ, ಸಂತ ಯೋಗಿ, ನಾಥ ಸಂಪ್ರದಾಯದ ಮೂಲಕ ಸನಾತನ ಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸಿದ ಶತಮಾನದ ಸಂತ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ನಾವೆಲ್ಲರೂ ಮುನ್ನಡೆಯಬೇಕಿದೆ ಎಂದು ತಾಲೂಕಿನ ದಸರೀಘಟ್ಟದ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ತಿಳಿಸಿದರು.

ತಿಪಟೂರು: ಪವಾಡ ಪುರುಷ, ಸಂತ ಯೋಗಿ, ನಾಥ ಸಂಪ್ರದಾಯದ ಮೂಲಕ ಸನಾತನ ಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸಿದ ಶತಮಾನದ ಸಂತ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ನಾವೆಲ್ಲರೂ ಮುನ್ನಡೆಯಬೇಕಿದೆ ಎಂದು ತಾಲೂಕಿನ ದಸರೀಘಟ್ಟದ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ತಿಳಿಸಿದರು.

ತಾಲೂಕಿನ ದಸರೀಘಟ್ಟದ ಆದಿಚುಂಚನಗಿರಿ ಶಾಖಾಮಠದ ಶ್ರೀ ಚೌಡೇಶ್ವರಿ ದೇವಿ ದೇವಾಲಯದಲ್ಲಿ ಡಾ.ಬಾಲಗಂಗಾಧರನಾಥ ಸ್ವಾಮೀಜಿಯ ಪುಣ್ಯಾರಾಧನೆ ಅಂಗವಾಗಿ ಆಯೋಜಿಸಿದ್ದ ಶ್ರೀ ಗುರು ಸ್ಮರಣಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀಗಳು, ಬಾಲಗಂಗಾಧರನಾಥ ಶ್ರೀಗಳು ಸಾಮಾಜಿಕ ಕಳಕಳಿ ಕಾರಣದಿಂದಲೇ ಜಗತ್ತಿನಾದ್ಯಂತ ಚಿರಸ್ಮರಣಿಯಾಗಿದ್ದರು. ಅನ್ನ, ಅಕ್ಷರ, ಆರೋಗ್ಯ ಕ್ಷೇತ್ರಗಳನ್ನು ತಮ್ಮ ಮೂಲ ಮಂತ್ರವಾಗಿಸಿಕೊಂಡು ರೈತರಿಗೆ, ದೀನ- ದಲಿತರಿಗೆ ನೀಡಿದ ಸೇವೆ ಅವಿಸ್ಮರಣೀಯ. ಸಮಾಜಕ್ಕಾಗಿ ತಮ್ಮನ್ನು ತಾವು ತೊಡಗಿಸಿಕೊಂಡು ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ಪ್ರಗತಿಗೆ ಹೆಚ್ಚಿನ ಆದ್ಯತೆ ನೀಡಿ ಎಲ್ಲಾ ವರ್ಗದ ಜನಸಾಮಾನ್ಯರಿಗೆ ದಾರಿ ದೀಪವಾಗಿ ಇಂದಿಗೂ ಪ್ರಜ್ವಲಿಸುತ್ತಿದ್ದಾರೆ ಎಂದರು. ಪ್ರಕೃತಿಯ ವಿನಾಶದಿಂದ ಮಾನವನ ಅಂತ್ಯ ಎಂಬ ಸಂದೇಶ ಅರಿತಿದ್ದ ಅವರು, ಸಸಿಗಳನ್ನು ನೆಟ್ಟು ಪೋಷಣೆ ಮಾಡುವ ಕಾರ್ಯದಲ್ಲಿ ತೊಡಗಿದ್ದರು. ಸೇವಾ ಮನೋಭಾವಕ್ಕೆ ಉದಾಹರಣೆಯಾಗಿ ರಾಜ್ಯದ ಮೂಲೆ ಮೂಲೆಗಳಲ್ಲಿಯೂ ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳನ್ನು ತೆರೆಯುವ ಮುಖಾಂತರ ಉಚಿತ ಸೇವೆ, ಜ್ಞಾನ ಪ್ರಸರಣವನ್ನು ಇಂದಿಗೂ ಮಾಡುತ್ತಿರುವುದು ಶ್ಲಾಘನೀಯ ಎಂದರು.

ಸಮಾರಂಭದಲ್ಲಿ ಗುಡಿಗೌಡರು ಕುಮಾರಸ್ವಾಮಿ, ಎಪಿಎಂಸಿ ಇಂಜಿನಿಯರ್ ಮಂಜುನಾಥ್ ಸೇರಿದಂತೆ ಗ್ರಾಮಸ್ಥರು, ಮಠದ ಸಿಬ್ಬಂ ಹಾಗೂ ಭಕ್ತಾದಿಗಳು ಭಾಗವಹಿಸಿದ್ದರು.