ಸಾರಾಂಶ
ಶ್ವ ಪರಿಸರ ದಿನಾಚರಣೆ ಅಂಗವಾಗಿ ಕಾಲೇಜು ವಠಾರದಲ್ಲಿ ವಿವಿಧ ರೀತಿಯ ಹಣ್ಣುಗಳ ಗಿಡ ನೆಡಲಾಯಿತು.
ಕನ್ನಡಪ್ರಭ ವಾರ್ತೆ ಮಂಗಳೂರು
ಸಕ್ಷಮ ದಕ್ಷಿಣ ಕನ್ನಡ ಜಿಲ್ಲಾ ಘಟಕ ಮತ್ತು ನಂತೂರಿನ ಶ್ರೀ ಭಾರತಿ ಸಮೂಹ ಸಂಸ್ಥೆ ಸಹಯೋಗದಲ್ಲಿ ಸಕ್ಷಮ ಸ್ಥಾಪನಾ ದಿವಸ್, ವಿಶ್ವ ಪರಿಸರ ದಿನಾಚರಣೆ, ಹೆಲೆನ್ ಕೆಲರ್ ದಿನವನ್ನು ಆಚರಿಸಲಾಯಿತು.ಅಧ್ಯಕ್ಷತೆ ವಹಿಸಿದ್ದ ಸಕ್ಷಮ ದಕ್ಷಿಣ ಕನ್ನಡ ಜಿಲ್ಲಾ ಘಟಕ ಅಧ್ಯಕ್ಷ ರಾಜಶೇಖರ ಭಟ್ ಕಾಕುಂಜೆ ಮಾತನಾಡಿ, ವಿಶೇಷ ಚೇತನರ ಕಲ್ಯಾಣಕ್ಕಾಗಿ ಸಮರ್ಪಿತವಾದ ಸಂಘಟನೆಯಾದ ಸಕ್ಷಮದ ಧ್ಯೇಯ ಮತ್ತು ಉದ್ದೇಶಗಳ ಬಗ್ಗೆ ಪ್ರಸ್ತಾಪಿಸಿ, ವಿಕಲಚೇತನರಿಗೆ ಧೈರ್ಯ ತುಂಬುವ ಕಾರ್ಯವನ್ನು 2008ರಿಂದ ನಡೆಸಿಕೊಂಡು ಬರಲಾಗುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿದ ಭಾರತಿ ಸಮೂಹ ಸಂಸ್ಥೆಯ ಸೇವಾ ಸಮಿತಿ ಕಾರ್ಯಾಧ್ಯಕ್ಷ ಗಣೇಶ ಮೋಹನ ಕಾಶಿಮಠ ಮಾತನಾಡಿ, ದಿವ್ಯಾಂಗ ಸಮಾಜದಲ್ಲಿ ಕೀಳು ಭಾವವನ್ನು ಹೊಡೆದೋಡಿಸಿ ಅವರಲ್ಲಿ ಆತ್ಮವಿಶ್ವಾಸ ಮೂಡಿಸುವ ಕಾರ್ಯಆಗಬೇಕಿದೆ ಎಂದರು.
ಮುಖ್ಯ ಅತಿಥಿ, ಕೋಟೆಕಣಿಯ ರೋಮನ್ ಮತ್ತು ಕ್ಯಾತರಿನ್ ಲೋಬೊ ದೃಷ್ಟಿ ಭಾದಿತ ಮಕ್ಕಳ ಅನುದಾನ ರಹಿತ ಆಂಗ್ಲ ಮಾಧ್ಯಮ ವಸತಿ ಶಾಲೆ ಪ್ರಾಂಶುಪಾಲ ಕ್ಯಾಲಿಸ್ಟಸ್ ಡೇಸಾ ಮಾತನಾಡಿ, ದಿವ್ಯಾಂಗರನ್ನು ಕೀಳಾಗಿ ಕಾಣುವುದನ್ನು ನಿಲ್ಲಿಸಬೇಕು ಎಂದು ಹೇಳಿದರು. ಇದೇ ಸಂದರ್ಭ ಕ್ಯಾಲಿಸ್ಟಸ್ ಡೇಸಾ ಅವರನ್ನು ಸನ್ಮಾನಿಸಲಾಯಿತು.ಶ್ರೀ ಭಾರತಿ ಸಮೂಹ ಸಂಸ್ಥೆಗಳ ನಿರ್ದೇಶಕ ಗಿರೀಶ ಎಂ., ಕಾಲೇಜಿನ ಪ್ರಾಂಶುಪಾಲ ಗಂಗಾರತ್ನ ಮಾತನಾಡಿದರು. ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕಾಲೇಜು ವಠಾರದಲ್ಲಿ ವಿವಿಧ ರೀತಿಯ ಹಣ್ಣುಗಳ ಗಿಡ ನೆಡಲಾಯಿತು.
ಸಕ್ಷಮ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಸಹ ಕಾರ್ಯದರ್ಶಿ ಭಾಸ್ಕರ್ ಹೊಸಮನೆ ಸ್ವಾಗತಿಸಿದರು. ಕಾರ್ಯದರ್ಶಿ ಹರೀಶ್ ಪ್ರಭು ವಂದಿಸಿದರು. ಉಪಾಧ್ಯಕ್ಷ ಗಣೇಶ್ ಭಟ್ ವಾರಣಾಸಿ ನಿರೂಪಿಸಿದರು.;Resize=(128,128))
;Resize=(128,128))