ಸಾರಾಂಶ
ಚನ್ನಪಟ್ಟಣ: ನಿರ್ಬಂಧಿತ ಔಷಧ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಪೋಲಿಸರು ಆತನಿಂದ 770 ಮಾತ್ರೆಗಳು ಹಾಗೂ ಒಂದು ಕಾರನ್ನು ವಶ ಪಡಿಸಿಕೊಂಡಿರುವ ಘಟನೆ ನಗರದ ಟಿಪ್ಪು ನಗರದಲ್ಲಿ ನಡೆದಿದೆ.
ಚನ್ನಪಟ್ಟಣ: ನಿರ್ಬಂಧಿತ ಔಷಧ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಪೋಲಿಸರು ಆತನಿಂದ 770 ಮಾತ್ರೆಗಳು ಹಾಗೂ ಒಂದು ಕಾರನ್ನು ವಶ ಪಡಿಸಿಕೊಂಡಿರುವ ಘಟನೆ ನಗರದ ಟಿಪ್ಪು ನಗರದಲ್ಲಿ ನಡೆದಿದೆ.
ಪಟ್ಟಣದ ಟಿಪ್ಪು ನಗರದ ಅಫ್ರೋಜ್ ಪಾಷಾ ಬಂಧಿತ. ಈತ ನಗರದ ಟಿಪ್ಪು ನಗರದ ಮೈದಾನದ ಬಳಿ ನಿರ್ಬಂಧಿತ ಔಷಧವನ್ನು ಮಾರಾಟ ಮಾಡುತ್ತಿದ್ದು, ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಚನ್ನಪಟ್ಟಣ ಪೂರ್ವ ಪೊಲೀಸ್ ಠಾಣೆಯ ಪೊಲೀಸರು ಈತನನ್ನು ವಶಕ್ಕೆ ಪಡೆದಿದ್ದಾರೆ.ದಾಳಿಯ ವೇಳೆ ನಗರ ವೃತ್ತ ನಿರೀಕ್ಷಕ ರವಿಕಿರಣ್, ಜಿಲ್ಲಾ ಔಷಧ ನಿಯಂತ್ರಣಾಧಿಕಾರಿ ಮಮತಾ ಹಾಗೂ ಪೂರ್ವ ಪೊಲೀಸ್ ಠಾಣೆಯ ಪೊಲೀಸರು ಹಾಜರಿದ್ದರು. ಈ ಸಂಬಂಧ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.