ಉಡುಪಿಯ ಯಕ್ಷಶಿಕ್ಷಣ ಟ್ರಸ್ಟ್ ವತಿಯಿಂದ ಕುಂದಾಪುರ ಭಾಗದ 8 ಶಾಲೆಗಳ ವಿದ್ಯಾರ್ಥಿಗಳ ಯಕ್ಷಗಾನ ಪ್ರದರ್ಶನಗಳನ್ನುರ್ ಸಾಲಿಗ್ರಾಮದ ಶ್ರೀ ಗುರುನರಸಿಂಹ ದೇವಸ್ಥಾನದ ದೇವಳದ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಕೆ. ಎಸ್. ಕಾರಂತ ಉದ್ಘಾಟಿಸಿದರು.
ಕುಂದಾಪುರ: ಉಡುಪಿಯ ಯಕ್ಷಶಿಕ್ಷಣ ಟ್ರಸ್ಟ್ ವತಿಯಿಂದ ಕುಂದಾಪುರ ಭಾಗದ 8 ಶಾಲೆಗಳ ವಿದ್ಯಾರ್ಥಿಗಳ ಯಕ್ಷಗಾನ ಪ್ರದರ್ಶನಗಳನ್ನು ಇಲ್ಲಿನ ಸಾಲಿಗ್ರಾಮದ ಶ್ರೀ ಗುರುನರಸಿಂಹ ದೇವಸ್ಥಾನದ ದೇವಳದ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಕೆ. ಎಸ್. ಕಾರಂತರು ಉದ್ಘಾಟಿಸಿದರು.
ನಮ್ಮ ಹಿಂದಿನವರು ಬೆಳೆಸಿರುವ ಈ ಕಲಾಪ್ರಕಾರವನ್ನು ಮುಂದಿನ ತಲೆಮಾರಿಗೆ ತಲಪಿಸುವ ಕೆಲಸವನ್ನು ‘ಯಕ್ಷಶಿಕ್ಷಣ ಟ್ರಸ್ಟ್’ ಸಮರ್ಥವಾಗಿ ನಿರ್ವಹಿಸುತ್ತಿದೆ. ಇಲ್ಲಿ ನಡೆಯುವ ಪ್ರದರ್ಶನಗಳಿಗೆ ದೇವಳದ ನೆರವು ನಿರಂತರ ಮುಂದುವರಿಯುತ್ತದೆ ಎಂದರು.ಅಧ್ಯಕ್ಷತೆ ವಹಿಸಿದ್ದ ದಾನಿ ಆನಂದ ಸಿ. ಕುಂದರ್ ಇಂತಹ ಅತ್ಯುತ್ತಮ ಕಾರ್ಯಕ್ರಮವನ್ನು ಪ್ರೋತ್ಸಾಹಿಸ ಬೇಕಾದುದು ಸಾಮಾಜಿಕರ ಕರ್ತವ್ಯ ಎಂದು ಅಭಿಪ್ರಾಯ ಪಟ್ಟರು.ಅತಿಥಿಗಳಾಗಿ ರಂಗಕರ್ಮಿ ಜೀವನ್ ರಾಂ ಸುಳ್ಯ, ಹಂಗಾರಕಟ್ಟೆ ಯಕ್ಷಗಾನ ಕೇಂದ್ರದ ರಾಜಶೇಖರ ಹೆಬ್ಬಾರ, ನಿವೃತ್ತ ಪ್ರಾಧ್ಯಾಪಕ ಉಪೇಂದ್ರ ಸೋಮಯಾಜಿ, ವಿಮರ್ಶಕ ಬೇಳೂರು ರಾಘವ ಶೆಟ್ಟಿ, ನಿವೃತ್ತ ಬ್ಯಾಂಕ್ ಅಧಿಕಾರಿ ವಾಸುದೇವ ಕಾರಂತ, ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಪದಾಧಿಕಾರಿಗಳಾದ ಎಸ್. ವಿ. ಭಟ್, ಯು. ಎಸ್. ರಾಜಗೋಪಾಲ ಆಚಾರ್ಯ, ಸಂತೋಷ ಕುಮಾರ್ ಶೆಟ್ಟಿ, ಗಣೇಶ ಬ್ರಹ್ಮಾವರ, ಡಾ. ರಾಜೇಶ ನಾವಡ ಉಪಸ್ಥಿತರಿದ್ದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಸ್ತಾವನೆಯೊಂದಿಗೆ ನಿರೂಪಿಸಿದರು. ನಾರಾಯಣ ಎಂ. ಹೆಗಡೆ ವಂದಿಸಿದರು.ಚೇತನಾ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ‘ದಾಸ್ಯ ವಿಮೋಚನ’, ವಿವೇಕ ಬಾಲಕಿಯರ ಪ್ರೌಢಶಾಲಾ ವಿದ್ಯಾರ್ಥಿನಿಯರಿಂದ ‘ಗಿರಿಜಾ ಕಲ್ಯಾಣ’ ಸೊಗಸಾಗಿ ಪ್ರಸ್ತುತಗೊಂಡಿತು.
