ಸಾರಾಂಶ
ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಸಂತಾಪ ವ್ಯಕ್ತಪಡಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಸಂತಾಪ ವ್ಯಕ್ತಪಡಿಸಿದ್ದಾರೆ.ಕೃಷ್ಣ ಅವರ ನಿಧನದ ಸುದ್ದಿ ನೋವು ಉಂಟು ಮಾಡಿದೆ. ರಾಜ್ಯದ 16 ನೇ ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸಿದ್ದ ಅವರು ಬೆಂಗಳೂರನ್ನು ಐಟಿ-ಬಿಟಿಯ ಹೆಬ್ಬಾಗಿಲು ಮಾಡಿದ ಕೀರ್ತಿ ಜತೆಗೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಹೀಗೆ ಅನೇಕ ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಕೃಷ್ಣ ಅವರ ನಿಧನವು ನಾಡಿಗೆ ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಕೃಷ್ಣ ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ಕಂಬನಿ ಮಿಡಿದಿದ್ದಾರೆ.