ಸಾರಾಂಶ
ಜಿಪಂನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಸಿದ್ಧತೆ ಕುರಿತು ಪರಿಶೀಲನಾ ಸಭೆ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಪರೀಕ್ಷಾ ಪಾವಿತ್ರ್ಯತೆಯನ್ನು ಕಡ್ಡಾಯವಾಗಿ ಪಾಲಿಸಬೇಕು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಯಾವುದೇ ರೀತಿ ತೊಂದರೆಯಾಗದಂತೆ ಸುಗಮವಾಗಿ ಪರೀಕ್ಷೆ ನಡೆಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅಧಿಕಾರಿಗಳಿಗೆ ಸೂಚನೆ ನೀಡಿದರು.ನಗರದ ಜಿಪಂನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಸಿದ್ದತೆ ಕುರಿತು ನಡೆದ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ 21 ರಿಂದ ಪ್ರಾರಂಭವಾಗಿ ಏಪ್ರಿಲ್ 4 ರವರೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಶಿಸ್ತು ಕ್ರಮಕ್ಕೆ ಒಳಪಡಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದು, ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಾರೆ ಎಂದು ತಿಳಿಸಿದ ಅವರು, ಬಿಸಿಲಿನ ತಾಪ ಹೆಚ್ಚು ಇರುವುದರಿಂದ ಪ್ರಥಮ ಚಿಕಿತ್ಸಾ ವ್ಯವಸ್ಥೆಯೊಂದಿಗೆ ಹಾಜರಾಗಬೇಕು. ಪರೀಕ್ಷೆ ವೆಬ್ ಕಾಸ್ಟಿಂಗ್ ಮೂಲಕ ನಡೆಯುತ್ತಿರುವುದರಿಂದ ನಿರಂತರ ವಿದ್ಯುತ್ ವ್ಯವಸ್ಥೆಗೆ ಕೆಇಬಿಗೆ ನಿರ್ದೇಶನ ನೀಡಲಾಗಿದೆ. ಜೊತೆಗೆ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿಯೂ ಯುಪಿಎಸ್ ವ್ಯವಸ್ಥೆಗೆ ಸಿದ್ಧತೆ ಮಾಡಿಕೊಳ್ಳಲು ತಿಳಿಸಿದರು.ಪರೀಕ್ಷಾ ಪೂರ್ವದಲ್ಲಿ ಹಾಗೂ ಪರೀಕ್ಷೆಯಲ್ಲಿ ಜಿಲ್ಲೆಯ ಬಗ್ಗೆ ವ್ಯತಿರಿಕ್ತ ವರದಿ ಬರಬಾರದು. ಗುಣಮಟ್ದ ಫಲಿತಾಂಶದ ಮೂಲಕ ಜಿಲ್ಲೆಯು ಸುದ್ದಿಯಾಗಬೇಕು ಎಂದು ಹೇಳಿದರು. ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲ್ಪಟ್ಟ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಪರೀಕ್ಷಾ ಕಾರ್ಯ ಪೂರ್ಣಗೊಳ್ಳು ವವರೆಗೂ ಪರೀಕ್ಷಾ ಕೇಂದ್ರದಲ್ಲಿ ಹಾಜರಿದ್ದು, ಪರೀಕ್ಷಾ ಪಾವಿತ್ರ್ಯತೆ ಪಾಲಿಸಬೇಕು. ಜೊತೆಗೆ ಉಪ ನಿರ್ದೇಶಕರು ಆಡಳಿತ ಮತ್ತು ಉಪ ನಿರ್ದೇಶಕರು ಅಭಿವೃದ್ಧಿ ಅವರು ಪರೀಕ್ಷಾ ಕಾರ್ಯ ಸುವ್ಯವಸ್ಥಿತವಾಗಿ ನಿರ್ವಹಿಸಿ, ಪಾರದರ್ಶಕತೆ ಕಾಯ್ದಕೊಳ್ಳು ವಂತೆ ತಿಳಿಸಿದರು.ಜಿಲ್ಲಾ ನೋಡಲ್ ಅಧಿಕಾರಿ ನಾಗರಾಜು ಪರೀಕ್ಷಾ ವ್ಯವಸ್ಥೆ ಬಗ್ಗೆ ಮಾಹಿತಿ ನೀಡಿ, ಪರೀಕ್ಷಾ ಕೇಂದ್ರದಲ್ಲಿ ಒಂದು ಕೊಠಡಿಗೆ ತಲಾ 24ರಂತೆ ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ವಿಶೇಷ ಚೇತನ ಮಕ್ಕಳಿಗೆ ಕೆಳಹಂತದ ಪರೀಕ್ಷಾ ಕೊಠಡಿ ಗಳನ್ನು ಮೀಸಲಿಡಬೇಕು. ಕೇಂದ್ರದಲ್ಲಿ ಎಲ್ಲಾ ಮೂಲಭೂತ ಸೌಲಭ್ಯ ಕಲ್ಪಿಸಬೇಕು. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ವೇಗದ ಇಂಟರ್ ನೆಟ್ ವ್ಯವಸ್ಥೆ, ವೆಬ್ ಕಾಸ್ಟಿಂಗ್ ವ್ಯವಸ್ಥೆ, ಪರೀಕ್ಷಾ ಕೇಂದ್ರದ ಮುಖ್ಯಸ್ಥರು ತಮ್ಮ ಲಾಗಿನ್‌ನಲ್ಲಿಯೇ ಗೈರು ಹಾಜರಿ ಮಾಹಿತಿಯನ್ನು ಮತ್ತು ನಮೂನೆಯನ್ನು ಭರ್ತಿ ಮಾಡುವ ಬಗ್ಗೆ ತಿಳಿಸಿದರು.ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪುಟ್ಟರಾಜು, ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿ, ಡಯಟ್‌ನ ಹಿರಿಯ ಉಪನ್ಯಾಸಕರು ಮತ್ತು ಉಪನ್ಯಾಸಕರು, ಕ್ಷೇತ್ರ ಸಮನ್ವಯಾಧಿಕಾರಿ, ಬ್ಲಾಕಿನ ನೋಡಲ್ ಅಧಿಕಾರಿ, ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಉಪಸ್ಥಿತರಿದ್ದರು.---- ಬಾಕ್ಸ್----ಪರೀಕ್ಷಾ ಸಹಾಯವಾಣಿಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಿನ್ನೆಲೆಯಲ್ಲಿ ತೆರೆಯಲಾಗುವ ಸಹಾಯವಾಣಿ ಮಾ. 18 ರಿಂದ ಮಾ. 20 ರವರೆಗೆ ಮಧ್ಯಾಹ್ನ 3ರಿಂದ ಸಂಜೆ 5.30 ರವರೆಗೆ ಕಾರ್ಯನಿರ್ವಹಿಸಲಿದೆ. ಪರೀಕ್ಷಾ ದಿನಗಳಲ್ಲಿ ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 3 ಗಂಟೆವರೆಗೆ ಸಹಾಯವಾಗಿ ಕಾರ್ಯನಿರ್ವಹಿಸಲಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದರು.
ಎಲ್ಲಾ 53 ಪರೀಕ್ಷಾ ಕೇಂದ್ರಗಳಲ್ಲಿ ಕೊಠಡಿಗಳ ವ್ಯವಸ್ಥೆ ಮತ್ತು ಮೂಲ ಸೌಕರ್ಯಗಳಾದ ಪೀಠೋಪಕರಣಗಳು, ಆಸನ ವ್ಯವಸ್ಥೆ, ಕುಡಿಯುವ ನೀರು, ಪ್ರತ್ಯೇಕ ಶೌಚಗೃಹದ ವ್ಯವಸ್ಥೆ ಇರುವುದನ್ನು ಖಾತ್ರಿಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಪರೀಕ್ಷೆಯಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ಜಿಲ್ಲಾ ಹಂತದ ಜಾಗೃತ ದಳ, ವಿಚಕ್ಷಣಾ ದಳಗಳ ನೇಮಕ ಮಾಡ ಲಾಗಿದೆ. ಇದಲ್ಲದೆ ಎಲ್ಲಾ 53 ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಕ್ಯಾಮರಾಗಳ ಕಾರ್ಯ ನಿರ್ವಹಣೆ ಕುರಿತು ಖಾತ್ರಿಪಡಿಸಿ ಕೊಳ್ಳಲಾಗಿದೆ. ಎಲ್ಲ ಪರೀಕ್ಷಾ ಕೊಠಡಿಗಳಿಗೆ, ಮುಖ್ಯ ಅಧೀಕ್ಷಕರ ಕೊಠಡಿ ಮತ್ತು ಕಾರಿಡಾರ್‌ಗೆ ಸಿ.ಸಿ ಕ್ಯಾಮರಾ ಅಳವಡಿ ಸಿರುವ ಬಗ್ಗೆ ಖಾತ್ರಿ ಮಾಡಿಕೊಳ್ಳಲಾಗಿದೆ ಎಂದರು.-18 ಕೆಸಿಕೆಎಂ 4ಚಿಕ್ಕಮಗಳೂರಿನ ಜಿಪಂ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಡಿಸಿ ಮೀನಾ ನಾಗರಾಜ್ ಅಧ್ಯಕ್ಷತೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಪೂರ್ವ ಸಿದ್ಧತಾ ಸಭೆ ನಡೆಯಿತು. ನಾಗರಾಜು, ಪುಟ್ಟರಾಜು ಉಪಸ್ಥಿತ ರಿದ್ದರು.