ಶ್ರೀಗಂಧ ಮರ ಕಳ್ಳತನ: ಅರಣ್ಯ ಇಲಾಖೆಗೆ ದೂರು

| Published : Dec 15 2024, 02:03 AM IST

ಸಾರಾಂಶ

ಮನೆಯ ಮುಂಭಾಗದಲ್ಲಿ ಬೆಳೆದಿದ್ದ ಶ್ರೀಗಂಧ ಮರವನ್ನು ಕಳ್ಳರು ಕದ್ದೊಯ್ದಿರುವ ಘಟನೆ ನಡೆದಿದೆ.

ಕನ್ನಡಪ್ರಭವಾರ್ತೆ ಸೋಮವಾರಪೇಟೆ

ಮನೆಯ ಮುಂಭಾಗದಲ್ಲಿ ಬೆಳೆದಿದ್ದ ಶ್ರೀಗಂಧದ ಮರವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಗಣಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಂಜಿಗನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಕೃಷಿಕ ಕೆ.ಬೋಪಯ್ಯ ಅವರ ಮನೆಯ ಮುಂಭಾಗದಲ್ಲಿ ಶ್ರೀಗಂಧ ಮರವನ್ನು ಬುಡ ಕತ್ತರಿಸಿ ಮಾಲಿನೊಂದಿಗೆ ಪರಾರಿಯಾಗಿದ್ದಾರೆ. ಬೆಳಗ್ಗೆ ಘಟನೆ ಬೆಳಕಿಗೆ ಬಂದಿದ್ದು, ಸೋಮವಾರಪೇಟೆ ಅರಣ್ಯ ಇಲಾಖೆಗೆ ಬೋಪಯ್ಯ ದೂರು ನೀಡಿದ್ದಾರೆ.

--------------------------------------

ರೈತರ ಹೋರಾಟ: ಕರ್ನಾಟಕ ರೈತ ಸಂಘದ ಜಿಲ್ಲಾ ಸಮಿತಿ ಬೆಂಬಲಕನ್ನಡಪ್ರಭವಾರ್ತೆ ಸೋಮವಾರಪೇಟೆಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಡಿ. 20ರಂದು ಮಡಿಕೇರಿಯಲ್ಲಿ ರೈತರ ಹೋರಾಟ ಸಮಿತಿ ಕರೆ ನೀಡಿರುವ ಪ್ರತಿಭಟನಾ ಹೋರಾಟಕ್ಕೆ ಕರ್ನಾಟಕ ರೈತ ಸಂಘದ ಕೊಡಗು ಜಿಲ್ಲಾ ಸಮಿತಿ ಬೆಂಬಲ ನೀಡಲಿದೆ ಎಂದು ಸಮಿತಿ ರಾಜ್ಯ ಕಾರ್ಯದರ್ಶಿ ಡಿ.ಎಸ್. ನಿರ್ವಾಣಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

--------------------

ಇಂದು 167 ನೇ ಮಹಾ ಆರತಿ ಕಾರ್ಯಕ್ರಮ

ಕುಶಾಲನಗರ: ಹುಣ್ಣಿಮೆ ಅಂಗವಾಗಿ ಕುಶಾಲನಗರದಲ್ಲಿ ಕಾವೇರಿ ನದಿಗೆ ಡಿ. 15ರಂದು 167 ನೇ ಮಹಾ ಆರತಿ ಕಾರ್ಯಕ್ರಮ ನಡೆಯಲಿದೆ.ಕುಶಾಲನಗರ ಕಾವೇರಿ ಮಹಾ ಆರತಿ ಬಳಗ ಆಶ್ರಯದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಟ್ರಸ್ಟ್ ಸಹಯೋಗದೊಂದಿಗೆ ಸಂಜೆ 5:30ಕ್ಕೆ ಕಾರ್ಯಕ್ರಮ ನಡೆಯಲಿದೆ.