ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಧಾನಸಭಾ ಅಧಿವೇಶನದಲ್ಲಿ ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ. ಆದ್ದರಿಂದ ಅವರನ್ನು ತಕ್ಷಣ ಸಂಪುಟದಿಂದ ವಜಾ ಮಾಡಬೇಕು ಎಂದು ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಆಗ್ರಹಿಸಿದ್ದಾರೆ.
ಉಡುಪಿ: ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಗೃಹ ಲಕ್ಷ್ಮೀ ಯೋಜನೆಯ ಹಣವನ್ನು ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಿರುವುದಾಗಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಧಾನಸಭಾ ಅಧಿವೇಶನದಲ್ಲಿ ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ. ಆದ್ದರಿಂದ ಅವರನ್ನು ತಕ್ಷಣ ಸಂಪುಟದಿಂದ ವಜಾ ಮಾಡಬೇಕು ಎಂದು ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಆಗ್ರಹಿಸಿದ್ದಾರೆ.ಶೇ. 90ರಷ್ಟು ಫಲಾನುಭವಿಗಳ ಖಾತೆಗಳಿಗೆ ಪೆಬ್ರವರಿ ಅಥವಾ ಮಾರ್ಚ್ ತಿಂಗಳ ನಂತರ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗಿಲ್ಲ. ಆದರೂ ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವೆ ಸದನದಲ್ಲಿ ಈ ರೀತಿ ಸುಳ್ಳು ಮಾಹಿತಿ ನೀಡಿರುವುದು ಅಪರಾಧವಾಗಿದೆ. ರಾಜ್ಯದ ಮಹಿಳೆಯರ ಬಗ್ಗೆ ವಿಪರೀತ ಕಾಳಜಿ ತೋರುವ ಪ್ರಹಸನ ಮಾಡುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯ ಬಗ್ಗೆ ಸದನದಲ್ಲಿ ತಪ್ಪು ಮಾಹಿತಿ ನೀಡುವ ಮೂಲಕ ಸಚಿವೆ ರಾಜ್ಯದ ಮಹಿಳೆಯರಿಗೆ ಅಪಮಾನ ಮಾಡಿದ್ದಾರೆ ಎಂದವರು ಆರೋಪಿಸಿದ್ದಾರೆ.ಗ್ಯಾರಂಟಿ ಯೋಜನೆಗಳ ಪೊಳ್ಳು ಭರವಸೆಯ ಮೂಲಕ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರಕಾರ ಇದೀಗ ಈ ಯೋಜನೆಗಳನ್ನುಅನುಷ್ಠಾನ ಮಾಡಲು ವಿಫಲವಾಗಿ, ಅದನ್ನು ಮುಚ್ಚಿಡಲು ಸದನದಲ್ಲಿ ಸುಳ್ಳು ಮಾಹಿತಿ ನೀಡುವ ಹಂತಕ್ಕೆ ಬಂದಿದೆ ಎಂದವರು ಹೇಳಿದ್ದಾರೆ.