ಸಾರಾಂಶ
ಘಟನೆಯಲ್ಲಿ ಮೃತಪಟ್ಟ ವ್ಯಕ್ತಿ ಕಲ್ಲಳ್ಳಿ ಗ್ರಾಮದ ರಂಗಸ್ವಾಮಿ(೨೧) ಎಂದು ತಿಳಿದುಬಂದಿದೆ. ಇವರ ಜತೆ ನಿಂತಿದ್ದ ಕಲ್ಲಳ್ಳಿ ಗ್ರಾಮದ ನಿವಾಸಿ ಪುಟ್ಟಸ್ವಾಮಿ ತೀವ್ರವಾಗಿ ಗಾಯಗೊಂಡಿದ್ದಾರೆ.
ಸಂಡೂರು: ಬೈಕ್‌ನೊಂದಿಗೆ ರಸ್ತೆ ಪಕ್ಕ ನಿಂತಿದ್ದ ಇಬ್ಬರು ವ್ಯಕ್ತಿಗಳಿಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ, ಒಬ್ಬರು ಮೃತಪಟ್ಟು ಮತ್ತೊಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಬಾಬಯ್ಯ ಕ್ರಾಸ್ ಬಳಿಯಿಂದ ಹೊಸಪೇಟೆ ಕಡೆಗೆ ಹೋಗುವ ಬೈಪಾಸ್‌ನಲ್ಲಿ ಶುಕ್ರವಾರ ನಡೆದಿದೆ.
ಘಟನೆಯಲ್ಲಿ ಮೃತಪಟ್ಟ ವ್ಯಕ್ತಿ ಕಲ್ಲಳ್ಳಿ ಗ್ರಾಮದ ರಂಗಸ್ವಾಮಿ(೨೧) ಎಂದು ತಿಳಿದುಬಂದಿದೆ. ಇವರ ಜತೆ ನಿಂತಿದ್ದ ಕಲ್ಲಳ್ಳಿ ಗ್ರಾಮದ ನಿವಾಸಿ ಪುಟ್ಟಸ್ವಾಮಿ ತೀವ್ರವಾಗಿ ಗಾಯಗೊಂಡಿದ್ದು, ಅವರಿಗೆ ಸಂಡೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸ`ನೀಡಿ, ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಿಕೊಡಲಾಗಿದೆ.ಬೈಕ್ ಮತ್ತು ಅದರ ಪಕ್ಕದಲ್ಲಿದ್ದ ವ್ಯಕ್ತಿಗಳಿಗೆ ಡಿಕ್ಕಿ ಹೊಡೆದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಕ್ಕದಲ್ಲಿಯ ಹೊಲದಲ್ಲಿ ಹೋಗಿ ನಿಂತಿದೆ. ಪ್ರಕರಣ ಸಂಡೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.