ಎಐಸಿಸಿ ಸೂಚನೆಯಂತೆ ಪಕ್ಷದ ವಿವಿಧ ಹುದ್ದೆಗಳಿಗೆ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯ ಭಾಗವಾಗಿ ಕೆಪಿಸಿಸಿ ನಿರ್ದೇಶನದಲ್ಲಿ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಸಂಘಟನ್ ಸೃಜನ್ - 2 ಅಭಿಯಾನ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.

ಕನ್ನಡಪ್ರಭ ವಾರ್ತೆ ಕಾರ್ಕಳ

ಎಐಸಿಸಿ ಸೂಚನೆಯಂತೆ ಪಕ್ಷದ ವಿವಿಧ ಹುದ್ದೆಗಳಿಗೆ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯ ಭಾಗವಾಗಿ ಕೆಪಿಸಿಸಿ ನಿರ್ದೇಶನದಲ್ಲಿ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಸಂಘಟನ್ ಸೃಜನ್ - 2 ಅಭಿಯಾನ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.

ಅಭಿಯಾನದ ಉಸ್ತುವಾರಿ, ವಿಧಾನಪರಿಷತ್ ಸದಸ್ಯ ಐವನ್ ಡಿ’ಸೋಜಾ ಮಾತನಾಡಿ, ಪಕ್ಷದ ವಿವಿಧ ಹುದ್ದೆಗಳಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡುವಾಗ ಕಾರ್ಯಕರ್ತರ ಭಾವನೆಗಳಿಗೆ ಮನ್ನಣೆ ನೀಡುವುದು ಕಾಂಗ್ರೆಸ್ ಪಕ್ಷದ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಈ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.

ಅಭಿಯಾನದ ವೀಕ್ಷಕ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮಾತನಾಡಿ, ಪಕ್ಷದ ನಾಯಕತ್ವ ವಹಿಸಿಕೊಳ್ಳಲು ಸೂಕ್ತ ವ್ಯಕ್ತಿಗಳನ್ನು ಆಯ್ಕೆ ಮಾಡುವ ಈ ಪ್ರಕ್ರಿಯೆಯಿಂದ ಪ್ರತಿಯೊಬ್ಬರಿಗೂ ಅವಕಾಶ ದೊರೆಯಲಿದೆ ಎಂದರು.

ಕಾರ್ಕಳ ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ಮಾತನಾಡಿ, ಈ ಅಭಿಯಾನವು ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ಪಕ್ಷವನ್ನು ಸಜ್ಜುಗೊಳಿಸಲು ಸಹಕಾರಿಯಾಗಲಿದೆ ಎಂದರು.

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ ನೇಮಕಗೊಂಡ ಹಿರಿಯ ಕಾಂಗ್ರೆಸ್ಸಿಗ ಹಾಗೂ ನ್ಯಾಯವಾದಿ ಶೇಖರ ಮಡಿವಾಳ ಅವರನ್ನು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಉಪಾಧ್ಯಕ್ಷ ಸುಧಾಕರ ಕೋಟ್ಯಾನ್, ಜಿಲ್ಲಾ ವಕ್ತಾರ ಬಿಪಿನ್ ಚಂದ್ರಪಾಲ್ ನಕ್ರೆ, ನಿಯೋಗದ ಸದಸ್ಯರಾದ ಶಾಲೆಟ್ ಪಿಂಟೋ, ಅಬ್ದುಲ್ ರವೂಫ್ ಉಪಸ್ಥಿತರಿದ್ದರು. ವಕ್ತಾರ ಪ್ರದೀಪ್ ಬೇಲಾಡಿ ನಿರೂಪಿಸಿದರು. ಪ್ರಚಾರ ಸಮಿತಿ ಅಧ್ಯಕ್ಷ ಅನಿಲ್ ಪೂಜಾರಿ ಮಾಳ ವಂದಿಸಿದರು.