ಅರಸೀಕೆರೆ: ಪಟ್ಟಣದ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿ.ಎಚ್. ಸಂಜಯ್ ಅವರು ಬಹುಮತದೊಂದಿಗೆ ಆಯ್ಕೆಯಾಗಿದ್ದಾರೆ. ಈ ಹಿಂದೆ ಅಧ್ಯಕ್ಷರಾಗಿದ್ದ ವೀಣಾ ಕೆ.ಎನ್. ವಿಶ್ವನಾಥ್ ಅವರು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನ ತೆರವಾಗಿದ್ದು, ಅದರ ಹಿನ್ನೆಲೆಯಲ್ಲಿ ಚುನಾವಣೆ ಪ್ರಕ್ರಿಯೆಯನ್ನು ನಡೆಸಲಾಯಿತು.

ಅಧ್ಯಕ್ಷ ಸ್ಥಾನಕ್ಕೆ ಸೈಯದ್ ಆಸಿಫ್ ಹಾಗೂ ಬಿ.ಎಚ್. ಸಂಜಯ್ ಅವರು ನಾಮಪತ್ರ ಸಲ್ಲಿಸಿದ್ದರು. ನಂತರ ನಡೆದ ಮತದಾನದಲ್ಲಿ ಸೈಯದ್ ಆಸಿಫ್ 10 ಮತಗಳನ್ನು ಪಡೆದರೆ, ಬಿ.ಎಚ್. ಸಂಜಯ್ 12 ಮತಗಳನ್ನು ಪಡೆದು ಜಯಗಳಿಸಿದರು ಎಂದು ಚುನಾವಣಾಧಿಕಾರಿಯಾಗಿ ಆಗಮಿಸಿದ್ದ ತಹಸೀಲ್ದಾರ್ ಸಂತೋಷ್ ಕುಮಾರ್ ಅವರು ಫಲಿತಾಂಶ ಪ್ರಕಟಿಸಿದರು. ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ನೂತನ ಅಧ್ಯಕ್ಷ ಬಿ.ಎಚ್. ಸಂಜಯ್ ಅವರಿಗೆ ಗ್ರಾಮ ಪಂಚಾಯಿತಿ ಸದಸ್ಯರು ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದರು.