ಸಾರಾಂಶ
-ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆಯಲ್ಲಿ ಜಿಲ್ಲಾ ಸಂಪನ್ಮೂಲ ವ್ಯಕ್ತಿ ಮಾಲತಿ ಅಭಿಮತ
------ಕನ್ನಡಪ್ರಭ ವಾರ್ತೆ, ಬಾಳೆಹೊನ್ನೂರು: ಗ್ರಾಮೀಣ ಭಾಗದ ಮಹಿಳೆಯರು ಸಂಜೀವಿನಿ ಒಕ್ಕೂಟಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಆರ್ಥಿಕ ಭದ್ರತೆಯನ್ನು ಕಂಡುಕೊಳ್ಳಬಹುದು ಎಂದು ಸಂಜೀವಿನಿ ಒಕ್ಕೂಟದ ಜಿಲ್ಲಾ ಸಂಪನ್ಮೂಲ ವ್ಯಕ್ತಿ ಮಾಲತಿ ಹೇಳಿದರು.
ಸಮೀಪದ ಕರ್ಕೇಶ್ವರ ಗ್ರಾಮ ಪಂಚಾಯಿತಿ ಮಟ್ಟದ ಸಂಜೀವಿನಿ ಒಕ್ಕೂಟ ಆಯೋಜಿಸಿದ್ದ ಒಕ್ಕೂಟದ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು.ಸಂಜೀವಿನಿ ಒಕ್ಕೂಟವು ಗ್ರಾಮೀಣ ಭಾಗದ ಮಹಿಳೆಯರ ಜೀವನಾಡಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಇದರಲ್ಲಿನ ವಿವಿಧ ಚಟುವಟಿಕೆಗಳಲ್ಲಿ ಮಹಿಳೆಯರು ತೊಡಗಿಸಿಕೊಂಡರೆ ಆರ್ಥಿಕ ಭದ್ರತೆಯೊಂದಿಗೆ ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗಲಿದೆ. ಒಕ್ಕೂಟಕ್ಕೆ ಸರ್ಕಾರದಿಂದ ವಿವಿಧ ಸೌಲಭ್ಯಗಳು ಲಭ್ಯವಿದ್ದು, ಅವುಗಳನ್ನು ಒಕ್ಕೂಟದ ಸದಸ್ಯರು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಇದೇ ಸಂದರ್ಭದಲ್ಲಿ ಮೇಲ್ಪಾಲ್‌ನಲ್ಲಿ ಹಲವು ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಡಾ.ವಿಠ್ಠಲ್ ಹೆಗ್ಡೆ, ಶಿಕ್ಷಕ ಚಿನ್ನಪ್ಪ ಅವರನ್ನು ಸನ್ಮಾನಿಸಲಾಯಿತು.ಸಂಜೀವಿನಿ ಒಕ್ಕೂಟದ ತಾಲೂಕು ಸಂಪನ್ಮೂಲ ವ್ಯಕ್ತಿ ಸುಬ್ರಮಣ್ಯ, ಗಿರೀಶ್, ಗ್ರಾಮ ಒಕ್ಕೂಟದ ಅಧ್ಯಕ್ಷೆ ಆಶಾ, ಸದಸ್ಯರಾದ ಪೂರ್ಣಿಮಾ, ಯೋಗೇಶ್ವರಿ, ನಂದಿ ಮತ್ತಿತರರು ಹಾಜರಿದ್ದರು. ಇದೇ ಸಂದರ್ಭದಲ್ಲಿ ಸಂಜೀವಿನಿ ಒಕ್ಕೂಟದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿದ್ದು, ನೂತನ ಅಧ್ಯಕ್ಷರಾಗಿ ವನಜಾಕ್ಷಿ ಆಯ್ಕೆಗೊಂಡರು.
-------೧೬ಬಿಹೆಚ್‌ಆರ್ ೧: ಬಾಳೆಹೊನ್ನೂರು ಸಮೀಪದ ಕರ್ಕೇಶ್ವರ ಗ್ರಾಪಂ ಮಟ್ಟದ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆಯನ್ನು ಜಿಲ್ಲಾ ಸಂಪನ್ಮೂಲ ವ್ಯಕ್ತಿ ಮಾಲತಿ ಉದ್ಘಾಟಿಸಿದರು. ಸುಬ್ರಮಣ್ಯ, ಗಿರೀಶ್, ಆಶಾ, ಪೂರ್ಣಿಮಾ ಇದ್ದರು.