ಸಾರಾಂಶ
ದೇವನಹಳ್ಳಿ: ಹೊಸ ಬಸ್ ನಿಲ್ದಾಣದ ಹಿಂಭಾಗದಲ್ಲಿರುವ ಕಾರ್ಮೆಲ್ ಶಾಲೆಯಲ್ಲಿ ಮಕ್ಕಳು ನಮ್ಮ ಸಂಸ್ಕೃತಿ, ಸಂಪ್ರದಾಯ, ಪರಂಪರೆ ತಿಳಿಸುವ ಉದ್ದೇಶದಿಂದ ಸಂಕ್ರಾಂತಿ ಹಬ್ಬ ಆಚರಿಸಲಾಯಿತು.
ದೇವನಹಳ್ಳಿ: ಹೊಸ ಬಸ್ ನಿಲ್ದಾಣದ ಹಿಂಭಾಗದಲ್ಲಿರುವ ಕಾರ್ಮೆಲ್ ಶಾಲೆಯಲ್ಲಿ ಮಕ್ಕಳು ನಮ್ಮ ಸಂಸ್ಕೃತಿ, ಸಂಪ್ರದಾಯ, ಪರಂಪರೆ ತಿಳಿಸುವ ಉದ್ದೇಶದಿಂದ ಸಂಕ್ರಾಂತಿ ಹಬ್ಬ ಆಚರಿಸಲಾಯಿತು. ಮಕ್ಕಳೆಲ್ಲಾ ಹೊಸ ಬಟ್ಟೆ ತೊಟ್ಟು, ವಿಶೇಷವಾಗಿ ಅಲಂಕರಿಸಿಕೊಂಡು ಖುಷಿಖುಷಿಯಿಂದ ಶಾಲೆಗೆ ಆಗಮಿಸಿ ಹಬ್ಬದ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಶಾಲಾ ಶಿಕ್ಷಕಿಯರು ಗೋವಿನ ಪೂಜೆ ಮಾಡುವ ಮೂಲಕ ಕಾರ್ಯಕ್ರಮದಕ್ಕೆ ಚಾಲನೆ ನೀಡಿದರು. ಶಾಲಾ ಕಾರ್ಯದರ್ಶಿ ಚೇತನ್ ಯಾದವ್ ಮಾತನಾಡಿ, ಸಂಕ್ರಾಂತಿ ಹಬ್ಬದ ವಿಶೇಷತೆಯನ್ನು ತಿಳಿಸಿ ಎಳ್ಳು ಬೆಲ್ಲವನ್ನು ತಿಂದು ಒಳ್ಳೆಯ ಮಾತನಾಡು ಎಂಬ ನಾಣ್ನುಡಿ ಇದೆ. ಹಾಗೆಯೇ ಮಕ್ಕಳೆಲ್ಲರೂ ಯಾವಾಗಲು ಸಂತೋಷದಿಂದ ಇರಬೇಕು ಎಂದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಸಂಗೀತ ಬಾಲನ್, ನಿರ್ವಾಹಕಿ ಉಷಾ ಪೂರ್ಣಚಂದ್ರ, ಇತರೆ ಶಿಕ್ಷಕರು, ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.