ಸಾರಾಂಶ
ದಾಬಸ್‌ಪೇಟೆ: ಪಟ್ಟಣದ ಜ್ಞಾನಸಂಗಮ ಪದವಿ ಪೂರ್ವ ಕಾಲೇಜಿನಲ್ಲಿ ಸಂಕ್ರಾಂತಿ ಹಬ್ಬವನ್ನು ವಿಶಿಷ್ಠ ರೀತಿಯಲ್ಲಿ ಆಚರಿಸಿದರು. ಕಾಲೇಜು ಆವರಣದಲ್ಲಿ ಕಬ್ಬು ಹಾಗೂ ತಳಿರು ತೋರಣಗಳಿಂದ ವಿಶಿಷ್ಠವಾಗಿ ಅಲಂಕರಿಸಲಾಗಿತ್ತು. ಎಳ್ಳು, ಬೆಲ್ಲ ಹಂಚಿ ಸಂಕ್ರಾಂತಿ ಹಬ್ಬವನ್ನು ಆಚರಿಸಿದರು.

ಸಂಸ್ಥಾಪಕ ಅಧ್ಯಕ್ಷ ಕುಮಾರಸ್ವಾಮಿ ಮಾತನಾಡಿ, ನಮ್ಮ ನಾಡಿನ ಕಲೆ, ಸಂಸ್ಕೃತಿ, ಆಚಾರ, ವಿಚಾರ, ಹಬ್ಬ, ಹರಿದಿನಗಳನ್ನು ಮುಂದಿನ ಪೀಳಿಗೆಯವರಿಗೆ ತಿಳಿಸುವ ಉದ್ದೇಶದಿಂದ ಸಾಮೂಹಿಕವಾಗಿ ಸಂಕ್ರಾಂತಿ ಹಬ್ಬ ಆಚರಿಸಲಾಗಿದೆ. ಕಾಲೇಜಿನ ಮಕ್ಕಳು ಗ್ರಾಮೀಣ ಸೊಗಡಿನ ಸಂಕ್ರಮಣ ಹಬ್ಬದ ಈ ವಾತಾವರಣ ತುಂಬಾ ಚೆನ್ನಾಗಿದೆ ಮತ್ತು ಈ ಸಂಕ್ರಾಂತಿ ಎಲ್ಲರಲ್ಲೂ ಹೊಸತನ ತರಲಿ ಎಂದು ಹೇಳಿದರು.ಈ ಸಂದರ್ಭದಲ್ಲಿ ಕಾಲೇಜಿನ ಕಾರ್ಯದರ್ಶಿ ಸುಜಾತ ಸೇರಿದಂತೆ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಪೋಟೋ 7 : ದಾಬಸ್‌ಪೇಟೆಯ ಜ್ಞಾನ ಸಂಗಮ ಕಾಲೇಜಿನಲ್ಲಿ ಸಂಕ್ರಾಂತಿ ಹಬ್ಬವನ್ನು ವಿಶಿಷ್ಠ ರೀತಿಯಲ್ಲಿ ಆಚರಿಸಿದರು.