ಯುಪಿಎಸ್‌ಸಿಯಲ್ಲಿ ಸಂತೋಷಗೆ 641ನೇ ರ್‍ಯಾಂಕ್

| Published : Apr 17 2024, 01:21 AM IST

ಸಾರಾಂಶ

ಯುಪಿಎಸ್ಸಿ ಪರೀಕ್ಷೆಯಲ್ಲಿ ವಿಜಯಪುರದ ನಿವಾಸಿ ಸಂತೋಷ ಶ್ರೀಕಾಂತ ಶಿರಾಡೋಣ 641ನೇ ರ್ಯಾಂಕ್ ಪಡೆಯುವ ಮೂಲಕ ವಿಜಯಪುರದ ಕೀರ್ತಿ ಹೆಚ್ಚಿಸಿದ್ದಾನೆ.

ಕನ್ನಡಪ್ರಭ ವಾರ್ತೆ ವಿಜಯಪುರ

ಯುಪಿಎಸ್ಸಿ ಪರೀಕ್ಷೆಯಲ್ಲಿ ವಿಜಯಪುರದ ನಿವಾಸಿ ಸಂತೋಷ ಶ್ರೀಕಾಂತ ಶಿರಾಡೋಣ 641ನೇ ರ್‍ಯಾಂಕ್ ಪಡೆಯುವ ಮೂಲಕ ವಿಜಯಪುರದ ಕೀರ್ತಿ ಹೆಚ್ಚಿಸಿದ್ದಾನೆ.

ಸಂತೋಷ ನಗರದ ಸೈನಿಕ ಶಾಲೆಯ ಶಿಶುನಿಕೇತನ ಶಾಲೆಯಲ್ಲಿ ಒಂದರಿಂದ ಐದನೇ ತರಗತಿ ವಿದ್ಯಾಭ್ಯಾಸ, 6 ರಿಂದ 8 ತರಗತಿ ಗದಗ ತಾಲೂಕಿನ ಹುಲಕೋಟಿಯ ರಾಜರಾಜೇಶ್ವರಿ ಪ್ರೌಢ ಶಾಲೆಯಲ್ಲಿ ವಿದ್ಯಾಭ್ಯಾಸ, ಬಳಿಕ 8 ರಿಂದ 10ನೇ ತರಗತಿವರೆಗೂ ತಾಲೂಕಿನ‌ ಕಗ್ಗೋಡದ ಸಂಗನಬಸವ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ವಿದ್ಯಾಭ್ಯಾಸ ಮಾಡಿದ್ದಾರೆ. ಹೈದರಾಬಾದನ ವಿಚೇತನಾ ಕಾಲೇಜಿನಲ್ಲಿ ಪಿಯುಸಿ ಹಾಗೂ ಬೆಂಗಳೂರಿನ ಆರ್ ವಿ ಎಂಜಿನಿಯರಿಂಗ್ ಕಾಲೇಜಿನಲ್ಲಿ‌ ಕಂಪ್ಯೂಟರ್ ಸೈನ್ಸ್ ಪದವಿ ಪಡೆದಿದ್ದಾರೆ. 2019 ರಿಂದ ಯುಪಿಎಸ್ಸಿ ಪ್ರಯತ್ನ ಮಾಡಿ, 2023ರಲ್ಲಿ ಉತ್ತೀರ್ಣವಾಗಿದ್ದಾರೆ. ಸಂತೋಷ ತಂದೆ ವಕೀಲ ವೃತ್ತಿ ಮಾಡುತ್ತಿದ್ದಾರೆ. ದೆಹಲಿಯ ವಾದಿರಾಮ್ ಕೋಚಿಂಗ್ ಸೆಂಟರ್‌ನಲ್ಲಿ ತರಬೇತಿ ಪಡೆದಿದ್ದ ಸಂತೋಷ ಸಾಧನೆಗೆ ಕುಟುಂಬಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.