ಶಿವಮೊಗ್ಗ ಜಿಲ್ಲೆ ಸಾಗರ ಪಟ್ಟಣದಲ್ಲಿ ನಡೆದ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ 30 ರಿಂದ 35ರ ವಯೋಮಿತಿಯ ಪುರುಷರ ವಿಭಾಗದ ಸ್ಪರ್ಧೆಯಲ್ಲಿ ಕರ್ನಾಟಕ ಸ್ಟೇಟ್ ಅಮೆಚೂರ್ ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಭಾಗವಹಿಸಿದ್ದ ಸಂತೋಷ್ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ.
ಕನ್ನಡಪ್ರಭ ವಾರ್ತೆ ಮೈಸೂರುಶಿವಮೊಗ್ಗ ಜಿಲ್ಲೆ ಸಾಗರ ಪಟ್ಟಣದಲ್ಲಿ ನಡೆದ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ 30 ರಿಂದ 35ರ ವಯೋಮಿತಿಯ ಪುರುಷರ ವಿಭಾಗದ ಸ್ಪರ್ಧೆಯಲ್ಲಿ ಕರ್ನಾಟಕ ಸ್ಟೇಟ್ ಅಮೆಚೂರ್ ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಭಾಗವಹಿಸಿದ್ದ ಸಂತೋಷ್ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ. ಇದರಿಂದ ಮುಂದೆ ಯೋಗ ಫೆಡರೇಷನ್ ಆಫ್ ಇಂಡಿಯಾ ನಡೆಸುವ ರಾಷ್ಟ್ರಮಟ್ಟದ ಯೋಗ ಸ್ಪರ್ಧೆಗೆ ಆಯ್ಕೆಯಾಗಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ. ಇದು ಇವರ 2ನೇ ಬಾರಿಯ ಸಾಧನೆಯಾಗಿದೆ. ಮೈಸೂರಿನ ಜಿಎಸ್‌ಎಸ್ ವಿವೇಕಾನಂದ ಯೋಗ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಯಾಗಿದ್ದು, ಮೂಲತಃ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕು ಕುಂತೂರು ನಿವಾಸಿಯಾಗಿದ್ದಾರೆ.