ಸಾರಾಂಶ
ಜಿಲ್ಲಾಡಳಿತ ಭವನದ ಆವರಣದಲ್ಲಿ ಗುರುವಾರ ಸಸಿ ನೆಡುವ ಕಾರ್ಯಕ್ರಮ ನಡೆಯಿತು.
ಕನ್ನಡಪ್ರಭ ವಾರ್ತೆ ಕೊಪ್ಪಳ
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಪಂ, ಪೊಲೀಸ್ ಇಲಾಖೆ, ತೋಟಗಾರಿಕೆ ಇಲಾಖೆ, ಅರಣ್ಯ ಇಲಾಖೆ, ಜಿಲ್ಲಾ ವಕೀಲರ ಸಂಘ ಹಾಗೂ ಜಿಲ್ಲಾ ನಗಾರಭಿವೃದ್ಧಿ ಕೋಶ, ನಗರಸಭೆ ಕೊಪ್ಪಳ ಇವುಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಡಳಿತ ಭವನದ ಆವರಣದಲ್ಲಿ ಗುರುವಾರ ಸಸಿ ನೆಡುವ ಕಾರ್ಯಕ್ರಮ ನಡೆಯಿತು.ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಚಂದ್ರಶೇಖರ ಸಿ. ಸಸಿ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಯಶೋದಾ ವಂಟಗೋಡಿ, ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ. ಕಡಿ, ಹಿರಿಯ ಸಿವಿಲ್ ನ್ಯಾಯಾಧೀಶ ಮಲಕಾರಿ ರಾಮಪ್ಪ ಒಡೆಯರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎ.ವಿ. ಕಣವಿ, ನ್ಯಾಯಾಧೀಶೆ ಭಾಗ್ಯಲಕ್ಷ್ಮಿ ಸೇರಿದಂತೆ ನ್ಯಾಯಾಧೀಶರು, ವಕೀಲರು, ಅರಣ್ಯ ಹಾಗೂ ನ್ಯಾಯಾಲಯದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.ಪರಿಸರ ಸಂರಕ್ಷಿಸುವ ಜವಾಬ್ದಾರಿ ನಿಭಾಯಿಸಿ:
ಏರುತ್ತಿರುವ ತಾಪಮಾನ ತಗ್ಗಿಸಲು ಪರಿಸರ ಸಂರಕ್ಷಣೆ ಮತ್ತು ಗಿಡಮರಗಳನ್ನು ಬೆಳೆಸುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದು ಭಾರತ ಸೇವಾ ದಳದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೋಮಶೇಖರ ಹರ್ತಿ ಹೇಳಿದರು.ಭಾರತ ಸೇವಾದಳ ಜಿಲ್ಲಾ ಸಮಿತಿ, ಶಾಲಾ ಶಿಕ್ಷಣ ಇಲಾಖೆ , ರಾಜರಾಜೇಶ್ವರಿ ಶಿಕ್ಷಣ ಸಂಸ್ಥೆ, ನೆಹರು ಯುವ ಕೇಂದ್ರ, ಮಹಿಳಾ ಧ್ವನಿ ಶಿಕ್ಷಣ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಹಲಿಗೇರಿ ಗ್ರಾಮದಲ್ಲಿ ವಿಶ್ವ ಪರಿಸರ ದಿನಾಚರಣೆ ನಿಮಿತ್ತ ಗಿಡ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಪ್ರತಿಯೊಬ್ಬರು ಸಹ ಒಂದಿಲ್ಲೊಂದು ಗಿಡ ನೆಡುವ ಹಾಗೂ ಪರಿಸರ ಸಂರಕ್ಷಣೆ ಮಾಡುವ ಜವಾಬ್ದಾರಿಯನ್ನು ನಿಭಾಯಿಸುವ ಅನಿವಾರ್ಯತೆ ಎದುರಾಗಿದೆ. ಅದನ್ನು ಅರ್ಥ ಮಾಡಿಕೊಂಡು ತಮ್ಮ ಜವಾಬ್ದಾರಿ ನಿಭಾಯಿಸುವಂತೆ ಕರೆ ನೀಡಿದರು.ಉಪಾಧ್ಯಕ್ಷ ತೋಟಪ್ಪ ಕಾಮನೂರ, ರಾಜರಾಜೇಶ್ವರಿ ವಿದ್ಯಾ ಸಂಸ್ಥೆಯ ಸಂಸ್ಥಾಪಕ ಈರಣ್ಣ ಕಂಬಳಿ ಮಾತನಾಡಿದರು.ಪ್ರಿಯದರ್ಶಿನಿ, ಗವಿಸಿದ್ದೇಶ ಹುಡೇಜಾಲಿ, ಕಾರ್ತಿಕ, ಶಾಲಾ ಮಕ್ಕಳು ಮತ್ತು ಇತರರು ಪಾಲ್ಗೊಂಡಿದ್ದರು.
ಜಿಲ್ಲಾ ಸಂಘಟಕ ಬಸವಣ್ಣೆಪ್ಪ ಪತ್ರಿ ಸ್ವಾಗತಿಸಿದರು.