ಸಾರಾಂಶ
ಶ್ರವಣಬೆಳಗೊಳದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಸರೋಜಮ್ಮ ನಾಗರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಹಕಾರ ಅಭಿವೃದ್ಧಿ ಅಧಿಕಾರಿ ವಿಜಯೇಂದ್ರ ಹಾಗೂ ಹಾಸನ ಜಿಲ್ಲಾ ಸಹಕಾರ ಬ್ಯಾಂಕ್ ಮೇಲ್ವಿಚಾರಕ ಎಸ್.ಆರ್.ಮಧು ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಈ ಸಂದರ್ಭದಲ್ಲಿ ಹೇಮಾವತಿ ಸಕ್ಕರೆ ಕಾರ್ಖಾನೆ ಮಾಜಿ ಅಧ್ಯಕ್ಷ ಎ.ಆರ್.ಶಿವರಾಜ್, ಗ್ರಾಮ ಪಂಚಾಯ್ತಿ ಅಧ್ಯಕ್ಷ ಅಫ್ತಾಬ್ , ಉಪಾಧ್ಯಕ್ಷೆ ಕಾವ್ಯ ಕಿರಣ್, ಮಾಜಿ ಅಧ್ಯಕ್ಷರಾದ ರವಿ ನಂಜಪ್ಪ, ಪ್ರಭಾಕರ್ ನೂತನ ಅಧ್ಯಕ್ಷೆಗೆ ಅಭಿನಂದಿಸಿದರು.
ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ
ಶ್ರವಣಬೆಳಗೊಳದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಸರೋಜಮ್ಮ ನಾಗರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಹಕಾರ ಅಭಿವೃದ್ಧಿ ಅಧಿಕಾರಿ ವಿಜಯೇಂದ್ರ ಹಾಗೂ ಹಾಸನ ಜಿಲ್ಲಾ ಸಹಕಾರ ಬ್ಯಾಂಕ್ ಮೇಲ್ವಿಚಾರಕ ಎಸ್.ಆರ್.ಮಧು ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.ಈ ಸಂದರ್ಭದಲ್ಲಿ ಹೇಮಾವತಿ ಸಕ್ಕರೆ ಕಾರ್ಖಾನೆ ಮಾಜಿ ಅಧ್ಯಕ್ಷ ಎ.ಆರ್.ಶಿವರಾಜ್, ಗ್ರಾಮ ಪಂಚಾಯ್ತಿ ಅಧ್ಯಕ್ಷ ಅಫ್ತಾಬ್ , ಉಪಾಧ್ಯಕ್ಷೆ ಕಾವ್ಯ ಕಿರಣ್, ಮಾಜಿ ಅಧ್ಯಕ್ಷರಾದ ರವಿ ನಂಜಪ್ಪ, ಪ್ರಭಾಕರ್, ಎಸ್.ಟಿ.ಮಹೇಶ್, ಲೋಹಿತ್, ಸಂಘದ ಮಾಜಿ ಅಧ್ಯಕ್ಷೆ ಲತಾ ದೇವೇಂದ್ರ, ಉಪಾಧ್ಯಕ್ಷೆ ಸವಿತಾ ಯೋಗೇಶ್, ನಿರ್ದೇಶಕರಾದ ಸಂತೋಷ್, ಪ್ರದೀಪ್, ಶಾರದಮ್ಮ, ಕೃಷ್ಣಪ್ಪ, ರಾಮಕೃಷ್ಣೇಗೌಡ, ಸತೀಶ್, ಶಿವಮೂರ್ತಿ, ಮಂಜೇಗೌಡ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜೇಗೌಡ ಉಪಸ್ಥಿತರಿದ್ದರು.