ಸಾರಾಂಶ
ಆಲಮೇಲ: ಪಟ್ಟಣದ ಸರ್ಕಾರಿ ಹೆಣ್ಣು ಮಕ್ಕಳ ಪ್ರೌಢಶಾಲೆಯ ವಿದ್ಯಾರ್ಥಿನಿ ಶಿಲ್ಪಾ ಗುರುಸಿದ್ದಪ್ಪ ಜಂಗಮಶೆಟ್ಟಿ ಅವರಿಗೆ 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಕನ್ನಡ ಭಾಷೆ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದಿದ್ದರಿಂದ ದಾವಣಗೆರೆಯ ಶಾಮನೂರ ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ರಾಜ್ಯ ಮಟ್ಟದ ಸರಸ್ವತಿ ಪುರಸ್ಕಾರ 2024 ಮತ್ತು ಜಿಲ್ಲಾ ಮಟ್ಟದ ಕನ್ನಡ ಕುವರಿ ಎಂಬ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.
ಆಲಮೇಲ: ಪಟ್ಟಣದ ಸರ್ಕಾರಿ ಹೆಣ್ಣು ಮಕ್ಕಳ ಪ್ರೌಢಶಾಲೆಯ ವಿದ್ಯಾರ್ಥಿನಿ ಶಿಲ್ಪಾ ಗುರುಸಿದ್ದಪ್ಪ ಜಂಗಮಶೆಟ್ಟಿ ಅವರಿಗೆ 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಕನ್ನಡ ಭಾಷೆ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದಿದ್ದರಿಂದ ದಾವಣಗೆರೆಯ ಶಾಮನೂರ ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ರಾಜ್ಯ ಮಟ್ಟದ ಸರಸ್ವತಿ ಪುರಸ್ಕಾರ 2024 ಮತ್ತು ಜಿಲ್ಲಾ ಮಟ್ಟದ ಕನ್ನಡ ಕುವರಿ ಎಂಬ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಪ್ರತಿಷ್ಠಾನ ಸಂಸ್ಥಾಪಕ ಸಾಲಿಗ್ರಾಮ ಗಣೇಶ ಶೆಣೈ, ಡಾ.ನಾಗೇಶ ಎಸ್.ಕಿಣಿ, ಎಸ್.ಶ್ರೀಪತಿ ರಾಘವೇಂದ್ರ ಶೆಣೈ, ಕೆ.ಎಚ್.ಮಂಜುನಾಥ, ಕೆ.ಸಿ.ಉಮೇಶ ಸೇರಿದಂತೆ ಗಣ್ಯಾತೀತ ಗಣ್ಯರು ಉಪಸ್ಥಿತರಿದ್ದರು. ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲೆ ಶಿಕ್ಷಕ ವೃಂದ ಮತ್ತು ಆಲಮೇಲ ಪಟ್ಟಣದ ನಾಗರಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.