ಬೇಲೂರು ಪಟ್ಟಣದ ಯುನೈಟೆಡ್ ಅಕಾಡೆಮಿ ಶಾಲೆಯ ಸಭಾಂಗಣದಲ್ಲಿ ಸರಸ್ವತಿ ದೇವಿಯ ಮೂರ್ತಿಯನ್ನು ಸುಂದರವಾಗಿ ಅಲಂಕರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ಕಾರ್ಯಕ್ರಮವನ್ನು ಶಾಲೆಯ ಕಾರ್ಯದರ್ಶಿಗಳಾದ ಎಚ್.ಎಂ. ದಿನೇಶ್, ಖಜಾಂಚಿ ಸಿ. ಎಚ್. ಲೋಕೇಶ್, ಮುಖ್ಯ ಶಿಕ್ಷಕರು ಉದ್ಘಾಟಿಸಿದರು. ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಸಾಧಿಸಲು ಶ್ರಮ, ಶಿಸ್ತು ಮತ್ತು ಜ್ಞಾನದ ಮಹತ್ವವನ್ನು ಅರಿತುಕೊಳ್ಳಬೇಕು. ಶಾರದಾಂಬೆಯ ಆರಾಧನೆ ಮಾಡುವುದರಿಂದ ಜ್ಞಾನ ವೃದ್ಧಿಯಾಗುತ್ತದೆ ಮತ್ತು ವಿದ್ಯಾಭ್ಯಾಸದಲ್ಲಿ ಪ್ರಗತಿ ಸಾಧಿಸಲು ಪ್ರೇರಣೆ ದೊರೆಯುತ್ತದೆ ಎಂದರು.

ಬೇಲೂರು: ಪಟ್ಟಣದ ಯುನೈಟೆಡ್ ಅಕಾಡೆಮಿ ಶಾಲೆಯ ಸಭಾಂಗಣದಲ್ಲಿ ಸರಸ್ವತಿ ದೇವಿಯ ಮೂರ್ತಿಯನ್ನು ಸುಂದರವಾಗಿ ಅಲಂಕರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಕಾರ್ಯಕ್ರಮವನ್ನು ಶಾಲೆಯ ಕಾರ್ಯದರ್ಶಿಗಳಾದ ಎಚ್.ಎಂ. ದಿನೇಶ್, ಖಜಾಂಚಿ ಸಿ. ಎಚ್. ಲೋಕೇಶ್, ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಸಾಧಿಸಲು ಶ್ರಮ, ಶಿಸ್ತು ಮತ್ತು ಜ್ಞಾನದ ಮಹತ್ವವನ್ನು ಅರಿತುಕೊಳ್ಳಬೇಕು. ಶಾರದಾಂಬೆಯ ಆರಾಧನೆ ಮಾಡುವುದರಿಂದ ಜ್ಞಾನ ವೃದ್ಧಿಯಾಗುತ್ತದೆ ಮತ್ತು ವಿದ್ಯಾಭ್ಯಾಸದಲ್ಲಿ ಪ್ರಗತಿ ಸಾಧಿಸಲು ಪ್ರೇರಣೆ ದೊರೆಯುತ್ತದೆ ಎಂದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಮ್ಮ ಪುಸ್ತಕಗಳು ಮತ್ತು ಬರವಣಿಗೆ ಸಾಮಗ್ರಿಗಳನ್ನು ದೇವಿಯ ಮುಂದೆ ಇಟ್ಟು ಆಶೀರ್ವಾದ ಪಡೆದುಕೊಂಡರು. ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡ ನಡೆದವು. ವಿದ್ಯಾರ್ಥಿಗಳ ಹಾಡು, ಭಾಷಣ ಮತ್ತು ಭಕ್ತಿಗೀತೆಗಳು ಕಾರ್ಯಕ್ರಮಕ್ಕೆ ಮತ್ತಷ್ಟು ಕಳೆ ತಂದವು.