ಸಾರಾಂಶ
ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಸ್ಮರಣಾರ್ಥ ಸರ್ದಾರ್ 150 ಯುನಿಟಿ ಮಾರ್ಚ್ ಅನ್ನು ಪ್ರಾರಂಭಿಸಲಾಗಿದೆ.
ಹೊಸಪೇಟೆ: ಸರ್ದಾರ್ 150 ಯುನಿಟಿ ಮಾರ್ಚ್ ಅಭಿಯಾನದ ನಿಮಿತ್ತ ನಗರದಲ್ಲಿ ನ.25ಕ್ಕೆ ಮೈ ಭಾರತ್ ಮೂಲಕ ವಿಕಸಿತ್ ಭಾರತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಅಭಿಯಾನದ ಸಂಯೋಜನಾ ಅಧಿಕಾರಿ ಡಾ.ಕುಮಾರ್ ತಿಳಿಸಿದರು.
ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಹೆಮ್ಮೆಯನ್ನು ಬೆಳೆಸಲು, ನಾಗರಿಕ ಸಂಬಂಧವನ್ನು ಗಾಢವಾಗಿಸಲು, ಸ್ಮರಣಾರ್ಥ ಮತ್ತು ಭಾಗವಹಿಸುವ ಕಾರ್ಯಕ್ರಮಗಳ ಮೂಲಕ ಯುವಕರಲ್ಲಿ ಏಕತೆಯ ಮನೋಭಾವ ಬಲಪಡಿಸಲು ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಸ್ಮರಣಾರ್ಥ ಸರ್ದಾರ್ 150 ಯುನಿಟಿ ಮಾರ್ಚ್ ಅನ್ನು ಪ್ರಾರಂಭಿಸಲಾಗಿದೆ. ಈ ಅಭಿಯಾನದ ಮೂಲಕ ಯುವಜನರು ತಮ್ಮ ದೈನಂದಿನ ಜೀವನದಲ್ಲಿ ಮತ್ತು ನಾಗರಿಕ ನಿಶ್ಚಿತಾರ್ಥದಲ್ಲಿ ಏಕಭಾರತ, ಆತ್ಮನಿರ್ಭರ ಭಾರತದ ಆದರ್ಶಗಳನ್ನು ಅಳವಡಿಸಿಕೊಳ್ಳಲು ಪ್ರೋತ್ಸಾಹಿಸಲಾಗುತ್ತದೆ ಎಂದರು.
ವಿವಿಧ ಹಂತಗಳಲ್ಲಿ ಅಭಿಯಾನ ನಡೆಯುತ್ತಿದೆ. ಪ್ರತಿ ಸಂಸದೀಯ ಕ್ಷೇತ್ರದ ಎಲ್ಲ ಜಿಲ್ಲೆಗಳನ್ನು ಒಳಗೊಂಡಂತೆ 8 ರಿಂದ 10 ಕಿ.ಮೀ. ಉದ್ದದ ಪಾದಯಾತ್ರೆ ಕೈಗೊಳ್ಳಲಾಗುವುದು. ಇದಕ್ಕೂ ಮುನ್ನ ಸ್ಥಳೀಯ ಸಮುದಾಯಗಳಲ್ಲಿ ಜಾಗೃತಿ ಮತ್ತು ಉತ್ಸಾಹವನ್ನು ಬೆಳೆಸಲು ಶಾಲಾ-ಕಾಲೇಜುಗಳಲ್ಲಿ ವಿವಿಧ ಪೂರ್ವ ಕಾರ್ಯಕ್ರಮ ಚಟುವಟಿಕೆಗಳನ್ನು ರಾಷ್ಟ್ರೀಯ ಸೇವಾ ಯೋಜನೆಯಿಂದ ಆಯೋಜಿಸಲಾಗುತ್ತದೆ. ಇವುಗಳಲ್ಲಿ ಪ್ರಬಂಧ, ಚರ್ಚಾ ಸ್ಪರ್ಧೆಗಳು, ಸರ್ದಾರ್ ಪಟೇಲ್ ಅವರ ಜೀವನದ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.ಜಿಲ್ಲಾ ಯುವ ಅಧಿಕಾರಿ ಸಂಜೀವ್ ಬೂಕ್ಯ, ತಿಮ್ಮಪ್ಪ, ವಿ.ರಾಘವೇಂದ್ರ, ಕಿಚಡಿ ಕೊಟ್ರೇಶ್ ಇದ್ದರು.
ಹೊಸಪೇಟೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸರ್ದಾರ್ 150 ಯುನಿಟಿ ಮಾರ್ಚ್ ಅಭಿಯಾನದ ಪೋಸ್ಟರ್ ಬಿಡುಗಡೆಗೊಳಿಸಲಾಯಿತು.;Resize=(128,128))
;Resize=(128,128))
;Resize=(128,128))
;Resize=(128,128))