ಸಾರಾಂಶ
ರಾಷ್ಟ್ರೀಯ ಏಕತಾ ದಿವಸ್ ಆಚರಣೆಯಲ್ಲಿ ಅರಳಿಹಳ್ಳಿ ಗ್ರಾಪಂ ಅಧ್ಯಕ್ಷೆ ಸುಜಾತ ಮತ್ತು ಉಪಾಧ್ಯಕ್ಷೆ ಅನಿತಾ ಅವರನ್ನು ಸನ್ಮಾನಿಸಲಾಯಿತು.ರಾಷ್ಟ್ರೀಯ ಏಕತಾ ದಿವಸ್ ಆಚರಣೆಯಲ್ಲಿ ಅರಳಿಹಳ್ಳಿ ಗ್ರಾಪಂ ಅಧ್ಯಕ್ಷೆ ಸುಜಾತ ಮತ್ತು ಉಪಾಧ್ಯಕ್ಷೆ ಅನಿತಾ ಅವರನ್ನು ಸನ್ಮಾನಿಸಲಾಯಿತು.
ಕನ್ನಡಪ್ರಭ ವಾರ್ತೆ ಭದ್ರಾವತಿ
ದೇಶದ ಏಕೀಕರಣಕ್ಕೆ ಶ್ರಮಿಸಿದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭ ಭಾಯ್ ಪಟೇಲ್ ಎಂದಿಗೂ ಅವಿಸ್ಮರಣೀಯರು ಎಂದು ತಾಲೂಕಿನ ಅರಳಿಹಳ್ಳಿ ಸರ್ಕಾರಿ ಪ್ರೌಢಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಪ್ರಕಾಶ್ ಹೇಳಿದರು.ಗುರುವಾರ ಸರ್ದಾರ್ ವಲ್ಲಭ ಭಾಯ್ ಪಟೇಲ್‌ರವರ ಜನ್ಮದಿನದ ಅಂಗವಾಗಿ ಶಾಲೆಯಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಏಕತಾ ದಿವಸ್ ಕಾರ್ಯಕ್ರಮದಲ್ಲಿ ಪ್ರಾಲ್ಗೊಂಡು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ದಿವಾಕರ್ ಮಾತನಾಡಿ, ಪಟೇಲರ ಇಚ್ಛಾಶಕ್ತಿ ಇಂದಿನ ಅಖಂಡ ಭಾರತ ನಿರ್ಮಾಣಕ್ಕೆ ಕಾರಣವಾಗಿದ್ದು, ದಿಟ್ಟ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯಕ್ಕೆ ಅವರೇ ಸಾಟಿ. ನಮ್ಮೆಲ್ಲರಿಗೂ ಸರ್ದಾರ್ ಪಟೇಲರು ಪ್ರೇರಣಾದಾಯಕ. ಅವರ ವ್ಯಕ್ತಿತ್ವ, ಆದರ್ಶ ಗುಣಗಳನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.ಅರಳಿಹಳ್ಳಿ ಗ್ರಾಪಂ ಅಧ್ಯಕ್ಷೆ ಸುಜಾತ ಮತ್ತು ಉಪಾಧ್ಯಕ್ಷೆ ಅನಿತಾ ಅವರನ್ನು ಶಾಲೆಯ ವತಿಯಿಂದ ಸನ್ಮಾನಿಸಲಾಯಿತು. ಶಾಲೆಯ ಎಸ್‌ಡಿಎಂಸಿ ಉಪಾಧ್ಯಕ್ಷ ಸುರೇಶ್, ಚಂದ್ರಶೇಖರ್ ಮತ್ತು ಅನಿತಾ ಉಪಸ್ಥಿತರಿದ್ದರು. ರುದ್ರೇಶ್ ಪ್ರಾರ್ಥಿಸಿ, ರಂಗರಾಜ್ ಸ್ವಾಗತಿಸಿ, ಇಮ್ರಾನ್ ಖಾನ್ ಕಾರ್ಯಕ್ರಮ ನಿರೂಪಿಸಿದರು. ಪಲ್ಲವಿ ಪ್ರತಿಜ್ಞಾ ವಿಧಿ ಬೋಧಿಸಿದರು, ಶಾಂತಪ್ಪ ವಿಶೇಷ ಉಪನ್ಯಾಸ ನೀಡಿದರು.