ಉತ್ಸವ ಮೂರ್ತಿಯನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಿ ಉತ್ಸವ ಮೂರ್ತಿಯನ್ನು ಅಡ್ಡೆಯಲ್ಲಿ ಕುಳ್ಳಿರಿಸಿ, ಪೂಜಾ ಕೈಂಕರ್ಯವನ್ನು ನೆರವೇರಿಸಿದ ನಂತರ ಭಕ್ತರು ದೇವಾಲಯದ ಸುತ್ತ ಮೂರು ಸುತ್ತು ಪ್ರದಕ್ಷಿಣೆಯಲ್ಲಿ ಸುತ್ತಮುತ್ತಲಿನ ವಿವಿಧ ಭಾಗಗಳಿಂದ ಬಂದಿದ್ದ ಭಕ್ತರ ಸಮಯದಲ್ಲಿ ಮಂಗಳ ವಾಧ್ಯಗಳೊಂದಿಗೆ ಹರ್ಷೋದ್ಗಾರದೊಂದಿಗೆ ಪ್ರದಕ್ಷಣೆ ಹಾಕಿ ಸ್ವಾಮಿಯ ಸರ್ವ ಸೇವೆಯಲ್ಲಿ ಭಕ್ತರು ಪಾಲ್ಗೊಂಡು ಭಕ್ತಿ ಪರವಶರಾದರು.

ರಾಮನಾಥಪುರ: ಇಲ್ಲಿನ ಕಾವೇರಿ ನದಿ ದಂಡೆಯಲ್ಲಿರುವ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ ಬುಧವಾರ ಸುಬ್ರಹ್ಮಣ್ಯಸ್ವಾಮಿಗೆ ಸರ್ವ ಸೇವೆ ನಡೆಯಿತು.ಉತ್ಸವ ಮೂರ್ತಿಯನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಿ ಉತ್ಸವ ಮೂರ್ತಿಯನ್ನು ಅಡ್ಡೆಯಲ್ಲಿ ಕುಳ್ಳಿರಿಸಿ, ಪೂಜಾ ಕೈಂಕರ್ಯವನ್ನು ನೆರವೇರಿಸಿದ ನಂತರ ಭಕ್ತರು ದೇವಾಲಯದ ಸುತ್ತ ಮೂರು ಸುತ್ತು ಪ್ರದಕ್ಷಿಣೆಯಲ್ಲಿ ಸುತ್ತಮುತ್ತಲಿನ ವಿವಿಧ ಭಾಗಗಳಿಂದ ಬಂದಿದ್ದ ಭಕ್ತರ ಸಮಯದಲ್ಲಿ ಮಂಗಳ ವಾಧ್ಯಗಳೊಂದಿಗೆ ಹರ್ಷೋದ್ಗಾರದೊಂದಿಗೆ ಪ್ರದಕ್ಷಣೆ ಹಾಕಿ ಸ್ವಾಮಿಯ ಸರ್ವ ಸೇವೆಯಲ್ಲಿ ಭಕ್ತರು ಪಾಲ್ಗೊಂಡು ಭಕ್ತಿ ಪರವಶರಾದರು.ಈ ಸಂದರ್ಭದಲ್ಲಿ ಶ್ರೀ ಸುಬ್ರಮಣ್ಯಸ್ವಾಮಿ ದೇವಾಲಯದ ಪಾರುಪತ್ತೇಗಾರ್‌ ರಮೇಶ್ ಭಟ್ ಸರ್ವ ಸೇವೆ ಮಾಡಿಸಿದ ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್‌. ಕೆ. ಶ್ರೀನಿವಾಸ್ ಮುಂತಾದವರು ಭಾಗವಹಿಸಿದ್ದರು.