ಮೂಲ್ಕಿ: ವಿಶ್ವದಲ್ಲಿ ಅಲ್ಲಲ್ಲಿ ಯುದ್ದದ ವಾತಾವರಣ ನಿರ್ಮಾಣವಾಗಿದ್ದು ಇಂದಿನ ದಿನಗಳಲ್ಲಿ ಕಲುಷಿತ ವಾತಾವರಣದ ಜೊತೆಗೆ ಮನುಷ್ಯರ ಮನಸ್ಸು ಕಲುಷಿತಗೊಂಡಿದೆ. ಹಿಂದೆ ಪ್ರಕೃತಿಯಲ್ಲಿ ದೇವರನ್ನು ಕಾಣುತ್ತಿದ್ದು ಸಜ್ಜನರು ಸಕ್ರಿಯರಾಗಬೇಕು, ಭಗವಂತನ ಧ್ಯಾನದಿಂದ ಒಳ್ಳೆಯ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕೊಂಡೆವೂರು ನಿತ್ಯಾನಂದ ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.
ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವ ಅಂಗವಾಗಿ ನಡೆದ ಧರ್ಮ ಜಾಗೃತಿ ಸಭೆಯಲ್ಲಿ ಆಶೀರ್ವಚನ ನೀಡಿ ಅವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ವಾಮನ ಇಡ್ಯಾ ವಹಿಸಿದ್ದರು. ಒಡಿಯೂರು ದಕ್ಷಿಣ ಗಾಣಗಾಪುರ, ಶ್ರೀ ಗುರುದೇವದತ್ತ ಸಂಸ್ಥಾನಮ್ ನ ಶ್ರೀ ಗುರುದೇವಾನಂದ ಸ್ವಾಮೀಜಿ ರವರು ಆಶೀರ್ವಚನ ನೀಡಿ ನಮ್ಮ ಅಂತರಂಗದ ಕಣ್ಣು ಅರಳಿದಾಗ ಬ್ರಹ್ಮಕಲಶೋತ್ಸವದಂತಹ ಉತ್ತಮ ಕಾರ್ಯ ಸಾಧ್ಯ, ದೇವರ ಕಲಶಾಭಿಷೇಕದ ಜೊತೆಗೆ ನಮ್ಮ ಹೃದಯವೂ ಪರಿಶುದ್ಧವಾಗಿ ಪರೋಪಕಾರದ ಬದುಕು ನಮ್ಮದಾಗಬೇಕೆಂದು ಹೇಳಿದರು.ಈ ಸಂದರ್ಭ ಸಾಧಕರ ನೆಲೆಯಲ್ಲಿ ಉಳ್ಳಾಲ ಶ್ರೀ ಭಗವತೀ ಕ್ಷೇತ್ರದ ಕಾರ್ನವರು, ರವಿ ಯಾನೆ ಕಂಡಪ್ಪ ಬಾಲಕೃಷ್ಣ ಯಾನೆ ಮಂಜಪ್ಪ ಕಾರ್ನವರು, ಮಂಗಲ್ಪಾಡಿ ಅಡ್ಕ, ಶ್ರೀ ಭಗವತೀ ಕ್ಷೇತ್ರದ ಕೃಷ್ಣ ಕಾರ್ನವರು, ಸಸಿಹಿತ್ಲುವಿನ ಸುಬ್ರಹ್ಮಣ್ಯ ಭಟ್, ಮೀನಾ ಹಾಗೂ ರಾಘು ಪೂಜಾರಿ ಅವರಿಗೆ ವಿಶೇಷ ಗೌರವಾರ್ಪಣೆ ನಡೆಯಿತು.
ಕಾರ್ಯಕ್ರಮದಲ್ಲಿ ಕಸಾಪ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಪ್ರಸಾದ್ ಶೆಟ್ಟಿ, ಆರ್ಯನ್ ಲಚ್ಚಿಲ್ ಸಸಿಹಿತ್ಲು, ಹಳೆಯಂಗಡಿ ಗ್ರಾಪಂ ಮಾಜಿ ಅಧ್ಯಕ್ಷೆ ಪೂರ್ಣಿಮ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅರುಣ್ ಪ್ರದೀಪ್ ಡಿಸೋಜ, ಬಪ್ಪನಾಡು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಶ್ವೇತಾ ಪಳ್ಳಿ, ಪಡುಪಣಂಬೂರು ಗ್ರಾಪಂ ಮಾಜಿ ಅಧ್ಯಕ್ಷೆ ಕುಸುಮಾ ಚಂದ್ರಶೇಖರ್, ಸಸಿಹಿತ್ಲು ಕದಿಕೆ ಮೊಗವೀರ ಮಹಾಸಭಾ ದ ಕಿಶೋರ್ ಗುರಿಕಾರ, ಸಸಿಹಿತ್ಲು ಬಿಲ್ಲವರ ಹಿತವರ್ಧಕ ಸಂಘದ ಅಧ್ಯಕ್ಷ ಜಗನ್ನಾಥ ಕೋಟ್ಯಾನ್, ಪಾವಂಜೆ ದೇವಾಡಿಗ ಸಮಾಜ ಸೇವಾ ಸಂಘದ ಅಧ್ಯಕ್ಷ ಅಣ್ಣಪ್ಪ ದೇವಾಡಿಗ, ಮಂಗಳೂರು ಶ್ರೀ ಭಗವತೀ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್,ನ ಅಧ್ಯಕ್ಷ ಮಾಧವ, ಉಳ್ಳಾಲ ಶ್ರೀ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷ ಚಿದಾನಂದ ಗುರಿಕಾರ, ಉಳ್ಳಾಲ ಶ್ರೀ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ಮೊಕ್ತೇಸರ ಸುರೇಶ್ ಭಟ್ನಗರ ಉಪಸ್ಥಿತರಿದ್ದರು. ನವೀನ್ ಶೆಟ್ಟಿ ಎಡ್ಮೆಮಾರ್ ಸ್ವಾಗತಿಸಿದರು. ಪ್ರವೀಣ್ ಎಸ್.ಕುಂಪಲ ವಂದಿಸಿ, ನಿರೂಪಿಸಿದರು.ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಕೇಳ ಸುಧಾಕರ ಮತ್ತು ಬಳಗ ಮಂಗಳಾದೇವಿ ಅವರಿಂದ ಸ್ಯಾಕ್ಸೋಫೋನ್ ವಾದನ, ಶ್ರೀ ಶಿರಿಡಿ ಸಾಯಿಬಾಬ ಮಂದಿರ ಆಶ್ರಿತ ಸಾಯಿ ಶಕ್ತಿ ಕಲಾಬಳಗ ಅರ್ಪಿಸುವ ತುಳು ಪೌರಾಣಿಕ ನಾಟಕ "ಬೊಳ್ಳಿ ಮಲೆತ ಶಿವಶಕ್ತಿಲು " ನಡೆಯಿತು.