ಸಾರಾಂಶ
ಅಧ್ಯಕ್ಷೆಯಾಗಿದ್ದ ರಕ್ಷಿತಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ರುಕ್ಸಾನ ಬೇಗಮ್ 11 ಮತ ಪಡೆದರೆ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾದ ಶಶಿಕಲಾ 15 ಮತ ಪಡೆದು ವಿಜೇತರಾದರು ಎಂದು ಚುನಾವಣಾ ಅಧಿಕಾರಿ ಘೋಷಿಸಿದರು.
ಕನ್ನಡಪ್ರಭ ವಾರ್ತೆ ಹಲಗೂರು
ಹಲಗೂರು ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಶಶಿಕಲಾ ಆಯ್ಕೆಯಾಗಿದ್ದಾರೆ.ಅಧ್ಯಕ್ಷೆಯಾಗಿದ್ದ ರಕ್ಷಿತಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ರುಕ್ಸಾನ ಬೇಗಮ್ 11 ಮತ ಪಡೆದರೆ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾದ ಶಶಿಕಲಾ 15 ಮತ ಪಡೆದು ವಿಜೇತರಾದರು ಎಂದು ಚುನಾವಣಾ ಅಧಿಕಾರಿ ಘೋಷಿಸಿದರು. ವಿಜೇತರಾದ ಶಶಿಕಲಾ ಅವರನ್ನು ಕಾರ್ಯಕರ್ತರು ಮತ್ತು ನರೇಂದ್ರಸ್ವಾಮಿ ಬೆಂಬಲಿಗರು ಸನ್ಮಾನಿಸಿ ಅಭಿನಂದಿಸಿದರು.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ಶಶಿಕಲಾ, ನನಗೆ ಮತ ಹಾಕಿದ ಎಲ್ಲಾ ಸದಸ್ಯರಿಗೂ ಹಾಗೂ ನಮ್ಮ ಪಕ್ಷದ ಕಾರ್ಯಕರ್ತರಿಗೂ ಆಭಾರಿಯಾಗಿದ್ದೇನೆ. ನಾನು ಸದಸ್ಯರಾಗಿದ್ದ ವೇಳೆ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಮುಂದೆಯೂ ಮುಂದೆ ಗ್ರಾಮ ಪಂಚಾಯಿತಿ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತೇನೆ ಎಂದು ಭರವಸೆ ನೀಡಿದರು.ತಾಲೂಕು ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಸಿ.ಪಿ.ರಾಜು, ಮುಖಂಡರಾದ ಜೀವನ್ ಕುಮಾರ್, ಎಚ್.ಆರ್ .ಪದ್ಮನಾಭ, ಎಚ್.ವಿ.ರಾಜು, ಎಚ್.ಆರ್.ದೇವರಾಜು, ಗೋಪಾಲ್, ಚಂದ್ರಕುಮಾರ್, ಕೆಂಪಯ್ಯನದೊಡ್ಡಿ ಮೋಹನ್ ಕುಮಾರ್, ಕೆಂಪಣ್ಣ, ಗ್ರಾಮ ಪಂಚಾಯ್ತಿ ಉಪಾಧ್ಯಕ್ಷೆ ಲತಾ, ಲಿಯಾಕತ್ ಅಲಿ ಇತರರಿದ್ದರು.ಪಿಎಲ್‌ಡಿ ಬ್ಯಾಂಕ್‌ಗೆ ಆಲಕೆರೆ ಕೃಷ್ಣೇಗೌಡ ನೇಮಕ
ಮಂಡ್ಯ:ನಗರದ ಪಿಎಲ್‌ಡಿ (ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್) ಬ್ಯಾಂಕ್ ಆಡಳಿತ ಮಂಡಳಿಯ ನಾಮ ನಿರ್ದೇಶಿತ ಸದಸ್ಯರಾಗಿ ತಾಲೂಕಿನ ಆಲಕೆರೆ ಕೃಷ್ಣೇಗೌಡ ಅವರನ್ನು ನೇಮಕ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಜಿ.ರಂಗನಾಥ್ ಅವರು ಆದೇಶ ಪತ್ರ ನೀಡಿದ್ದಾರೆ.