ಅರಣ್ಯ ಸಂಬಂಧಿ ಸಮಸ್ಯೆಗಳು, ಶರಾವತಿ ಸಂತ್ರಸ್ತರ ಸಮಸ್ಯೆಗಳಂತಹ ದೊಡ್ಡ ಸವಾಲಿರುವ ಕ್ಷೇತ್ರ ಶಿವಮೊಗ್ಗದಲ್ಲಿ ಎರಡು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದು ನನಗೆ ತೃಪ್ತಿ ಇದೆ. ಶರಾವತಿ ಸಂತ್ರಸ್ತರ ಸಮಸ್ಯೆಗಳಿಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ. ನನ್ನ ಅವಧಿಯಲ್ಲಿ ಜಿಲ್ಲೆಯ ಅಭಿವೃದ್ಧಿ ಪ್ರಾಮಾಣಿಕ ಸೇವೆ ಸಲ್ಲಿಸಿದ್ದೇನೆ.
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಅರಣ್ಯ ಸಂಬಂಧಿ ಸಮಸ್ಯೆಗಳು, ಶರಾವತಿ ಸಂತ್ರಸ್ತರ ಸಮಸ್ಯೆಗಳಂತಹ ದೊಡ್ಡ ಸವಾಲಿರುವ ಕ್ಷೇತ್ರ ಶಿವಮೊಗ್ಗದಲ್ಲಿ ಎರಡು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದು ನನಗೆ ತೃಪ್ತಿ ಇದೆ. ಶರಾವತಿ ಸಂತ್ರಸ್ತರ ಸಮಸ್ಯೆಗಳಿಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ. ನನ್ನ ಅವಧಿಯಲ್ಲಿ ಜಿಲ್ಲೆಯ ಅಭಿವೃದ್ಧಿ ಪ್ರಾಮಾಣಿಕ ಸೇವೆ ಸಲ್ಲಿಸಿದ್ದೇನೆ. ಎಷ್ಟೋ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಟ್ಟಿರುವ ಸಮಾಧಾನ ನನಗಿದೆ ಎಂದು ವರ್ಗಾವಣೆಗೊಂಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.ನಗರದ ಪ್ರೆಸ್‌ಟ್ರಸ್ಟ್‌ನಲ್ಲಿ ಶುಕ್ರವಾರ ಮಾಧ್ಯಮದವರ ಜತೆ ಸ್ನೇಹಕೂಟದಲ್ಲಿ ಭಾಗಿಯಾಗಿ ಮಾತನಾಡಿ, ಶಿವಮೊಗ್ಗ ಜಿಲ್ಲೆ ಅರಣ್ಯ ಸಂಬಂಧಿ ಸಮಸ್ಯೆಗಳು, ಕಂದಾಯ ದಾಖಲೆ ಸಮಸ್ಯೆ, ಭೂಸ್ವಾಧೀನ ಪ್ರಕ್ರಿಯೆ, ಶರಾವತಿ ಸಂತ್ರಸ್ತರ ಸಮಸ್ಯೆಗಳಿರುವ ಜಿಲ್ಲೆ. ಇಲ್ಲಿ ಕೆಲಸ ನಿರ್ವಹಿಸಿ ಇಲ್ಲಿನ ಸಾರ್ವಜನಿಕರು, ಅಧಿಕಾರಿಗಳು, ಜನಪ್ರತಿನಿಧಿ ಗಳಿಂದ ಹೆಚ್ಚಿನ ಅಂಶಗಳನ್ನು ಕಲಿತ್ತಿದ್ದೇನೆ. ಬಿ.ಎಚ್.ರಸ್ತೆಯ ಹೆದ್ದಾರಿಗೆ ಸಂಬಂಧಿಸಿದಂತೆ 30 ಜಾಗಗಳಲ್ಲಿ ಭೂಮಿ ಸ್ವಾಧೀನ ಸಮಸ್ಯೆ ಬಗೆಹರಿಸಿದ ಸಮಾಧಾನ ತಮಗಿದೆ. ಶರಾವತಿ ಸಂತ್ರಸ್ತರ ಸಮಸ್ಯೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೇಳಿದ ಎಲ್ಲಾ ದಾಖಲೆಗಳನ್ನು ಸಲ್ಲಿಸಲಾಗಿದೆ ಎಂದರು.
ಪ್ರವಾಸೋದ್ಯಮ ಅಭಿವೃದ್ಧಿಗೆ ಜಿಲ್ಲೆಯಲ್ಲಿ ಹೇರಳ ಅವಕಾಶವಿದೆ. ಪರಿಸರ ಪ್ರವಾಸೋದ್ಯಮಕ್ಕೆ ಸಂಬಂಧಿಸಿದಂತೆ 60ಕ್ಕೂಹೆಚ್ಚಿನ ಪ್ರವಾಸಿ ಸ್ಥಳದಲ್ಲಿ ಪ್ರವಾಸಿಗರ ಆಕರ್ಷಣೆಗೆ ಫ್ಲೆಕ್ಸ್‌ಗಳನ್ನುಅಳವಡಿಸಲಾಗಿದೆ. ವಿಶ್ವಪ್ರಸಿದ್ಧ ಜೋಗ ಜಲಪಾತದ ಅಭಿವೃದ್ಧಿಗೆ ಇದ್ದ ಅಡೆ-ತಡೆ ನಿವಾರಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್ ಯೊಡನೆ ತಾವು ಉತ್ತಮ ಸಂಬಂಧ ಹೊಂದಿದ್ದು, ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಒಳ್ಳೆಯ ರೀತಿಯಲ್ಲಿ ಇರುವಂತೆ ನೋಡಿಕೊಂಡಿದ್ದೇನೆ ಎಂದರು.ಜಿಪಂ ಸಿಇಒ ಎನ್. ಹೇಮಂತ್ ಅವರ ಸಹಕಾರದೊಂದಿಗೆ ಮಿಷನ್ ಸುರಕ್ಷಾ ಯೋಜನೆಯನ್ನು ಜಿಲ್ಲೆಯಲ್ಲಿ ಅತ್ಯುತ್ತಮವಾಗಿ ಅನುಷ್ಟಾನಗೊಳಿಸಲಾಗಿದೆ. ಜಿಲ್ಲೆಯಲ್ಲಿ ಮುಜರಾಯಿ ಇಲಾಖೆಯ ಸುಮಾರು 800 ದೇವಾಲಯಗಳಿದ್ದು 300 ದೇವಾಲಯಗಳ ಸರ್ವೇ ಕಾರ್ಯ ಪೂರ್ಣಗೊಳಿಸಿ, ಉಸ್ತುವಾರಿ ಸಮಿತಿ ರಚಿಸ ಲಾಗಿದೆ. ಶರಾವತಿ ಸಂತ್ರಸ್ಥರ ಬಗ್ಗೆ 9136 ಎಕರೆ ಭೂಮಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳ ಸಹಕಾರದೊಂದಿಗೆ ಸಮೀಕ್ಷೆ ಮಾಡಲಾಗಿದೆ. ಸುಮಾರು 2000 ಅರ್ಜಿ ಗಳು ಬಂದಿದ್ದು, ಶರಾವತಿ ಸಂತ್ರಸ್ತರ ಪಟ್ಟಿಯಿಂದ ಕೈಬಿಡಲಾಗಿದೆ ಎನ್ನಲಾಗಿದ್ದ 800 ಜನ ಸಂತ್ರಸ್ತರು ಅರ್ಜಿ ಸಲ್ಲಿಸಿದ್ದಾರೆ. ಅವರ ಅಹವಾಲುಗಳನ್ನು ಕೂಡ ಪಡೆದು ಅವರಿಗೆ ನ್ಯಾಯ ಒದಗಿಸುವ ಕೆಲಸ ಮಾಡಲಾಗಿದೆ ಎಂದು ಹೇಳಿದರು.
ಪ್ರೆಸ್‌ಟ್ರಸ್ಟ್ ಅಧ್ಯಕ್ಷ ಎನ್. ಮಂಜುನಾಥ್, ಸಹ ಕಾರ್ಯದರ್ಶಿ ಸಂತೋಷ್ ಕಾಚಿನಕಟ್ಟೆ, ಹಿರಿಯ ಪತ್ರಕರ್ತ ಗೋಪಾಲ್ ಯಡಗೆರೆ ಇದ್ದರು. ಪತ್ರಕರ್ತರಿಂದ ಉತ್ತಮ ಸಹಕಾರಶಿವಮೊಗ್ಗದಲ್ಲಿ ಜಿಲ್ಲಾಧಿಕಾರಿಯಾಗಿ ಕೆಲಸ ನಿರ್ವಹಿಸಿದಷ್ಟು ದಿವಸ ಇಲ್ಲಿನ ಪತ್ರಕರ್ತರು ತಮಗೆ ಉತ್ತಮ ಸಹಕಾರ ನೀಡಿದ್ದಾರೆ. ಸಾಮಾನ್ಯವಾಗಿ 2-3 ವರ್ಷ ಕೆಲಸ ನಿರ್ವಹಿಸಿದ ಅವಧಿಯಲ್ಲಿ ಅಧಿಕಾರಿಯ ವಿರುದ್ಧ ಒಂದೆರೆಡಾದರೂ ವೈಯಕ್ತಿಕ ನೆಗೆಟಿವ್ ಸುದ್ದಿಗಳು ಬರುವುದು ಸಹಜ. ಆದರೆ ನನ್ನ ಬಗ್ಗೆ ಒಂದೂ ಕೂಡ ನೆಗೆಟಿವ್ ವರದಿ ಪ್ರಕಟವಾಗದೇ ಇರುವುದು ನಾನು ಮಾಡಿದ ಉತ್ತಮ ಕೆಲಸಕ್ಕೋ ಅಥವಾ ಇಲ್ಲಿ ಒಳ್ಳೆಯ ಪತ್ರಕರ್ತರು ಇರುವುದಕ್ಕೋ ಗೊತ್ತಿಲ್ಲ. ಒಟ್ಟಿನಲ್ಲಿ ಎಲ್ಲಾ ಪತ್ರಕರ್ತರು ನನಗೆ ಒಳ್ಳೆಯ ಸಹಕಾರ ನೀಡಿದ್ದಾರೆ ಎಂದು ಗುರುದತ್ತ ಹೆಗಡೆ ಸ್ಮರಿಸಿದರು.