ಸಾರಾಂಶ
ಸತೀಶ ಜಾರಕಿಹೊಳಿ ಅವರಿಗೆ ಸಿಎಂ ಸ್ಥಾನ ಕೊಟ್ಟರೆ ಒಳ್ಳೆಯದು ಎಂದು ಸವದತ್ತಿ ಶಾಸಕ ವಿಶ್ವಾಸ ವೈದ್ಯ ಹೇಳಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿ
ಸತೀಶ ಜಾರಕಿಹೊಳಿ ಅವರಿಗೆ ಸಿಎಂ ಸ್ಥಾನ ಕೊಟ್ಟರೆ ಒಳ್ಳೆಯದು ಎಂದು ಸವದತ್ತಿ ಶಾಸಕ ವಿಶ್ವಾಸ ವೈದ್ಯ ಹೇಳಿದರು.ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸತೀಶ ಅವರಿಗೆ ಸಿಎಂ ಸ್ಥಾನ ಕೊಟ್ಟರೆ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪೂರಕವಾಗುತ್ತದೆ. ಆದರೆ, ಈ ವಿಚಾರ ಪಕ್ಷದ ಹೈಕಮಾಂಡ್‌ಗೆ ಬಿಟ್ಟಿದ್ದು ಎಂದರು.
ಸತೀಶ ಜಾರಕಿಹೊಳಿ ಸಿಎಂ ಆದ್ರೆ ಒಳ್ಳೆಯ ವಿಚಾರವಾಗಿದೆ. ಅವರು ಒಳ್ಳೆಯ ಕೆಲಸ ಮಾಡಿದ್ದಾರೆ, ರಾಜ್ಯದಲ್ಲಿ ಅವರದ್ದೇ ಆಗಿರುವ ಸಂಘಟನೆ ಇದೆ. ಸತೀಶ ಜಾರಕಿಹೊಳಿಗೆ ಸಿಎಂ ಆಗುವ ಎಲ್ಲ ಅರ್ಹತೆಗಳಿವೆ ಎಂದ ಅವರು, ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ. ಎಲ್ಲ ಸಚಿವರು,ಶಾಸಕರು ಸಿದ್ದರಾಮಯ್ಯ ಪರವಾಗಿದ್ದು, ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಹೇಳಿದರು.