ನಾಳೆ ಸತೀಶ ಶುಗರ್ಸ ಆವಾರ್ಡ್ಸ ಸಾಂಸ್ಕೃತಿಕ ಕಾರ್ಯಕ್ರಮ

| Published : Jan 19 2024, 01:48 AM IST

ಸಾರಾಂಶ

19ನೇ ಸತೀಶ ಶುಗರ್ಸ ಆವಾರ್ಡ್ಸ ಭಾಷಣ ಸ್ವರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳು ಕಾರ್ಯಕ್ರಮ ಉದ್ಘಾಟಿಸುವರು.

ಕನ್ನಡಪ್ರಭ ವಾರ್ತೆ ಗೋಕಾಕ

ಜ.19, 20 ಹಾಗೂ 21 ರಂದು 20ನೇ ಸತೀಶ ಶುಗರ್ಸ ಆವಾರ್ಡ್ಸ ಸಾಂಸ್ಕೃತಿಕ ಕಾರ್ಯಕ್ರಮ ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ನಿರ್ಮಿಸಿರುವ ಭವ್ಯ ವೇದಿಕೆಯಲ್ಲಿ ಪ್ರತಿದಿನ ಸಂಜೆ 5 ರಿಂದ 10 ಗಂಟೆ ವರೆಗೆ ಜರುಗಲಿವೆ ಎಂದು ಸತೀಶ್ ಶುಗರ್ಸ ಆವಾರ್ಡ್ಸ ಸಂಘಟಕ ರಿಯಾಜ ಚೌಗಲಾ ಹೇಳಿದರು. ಮಂಗಳವಾರ ನಗರದ ಸತೀಶ ಶುಗರ್ಸ ಅಕ್ಯಾಡೆಮಿ ಕಾಲೇಜು ಆವರಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 19ನೇ ಸತೀಶ ಶುಗರ್ಸ ಆವಾರ್ಡ್ಸ ಭಾಷಣ ಸ್ವರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳು ಕಾರ್ಯಕ್ರಮ ಉದ್ಘಾಟಿಸುವರು. ಕಾರ್ಯಕ್ರಮದಲ್ಲಿ 5 ಸಾವಿರ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಪ್ರತಿಭೆ ತೋರಿಸಿದ್ದು, ಅಂತಿಮ ಹಂತಕ್ಕೆ ಒಟ್ಟು 700 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು, ಮೂರು ದಿನ ನಡೆಯುವ ಸತೀಶ್ ಶುಗರ್ಸ ಆವಾರ್ಡ್ಸ ಕಾರ್ಯಕ್ರಮದಲ್ಲಿ ಈ ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಪ್ರದರ್ಶಿಸಲಿದ್ದಾರೆ ಎಂದರು.

ಜ.19 ರಂದು ಪ್ರಾಥಮಿಕ ಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಗಾಯನ ಸ್ವರ್ಧೆ, ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಜಾನಪದ ಗಾಯನ ಸ್ವರ್ಧೆ, ಪ್ರೌಢಶಾಲೆ ವಿಭಾಗದ ವಿದ್ಯಾರ್ಥಿಗಳಿಗೆ ಜಾನಪದ ನೃತ್ಯ ಸ್ವರ್ಧೆ ಹಾಗೂ ಮುಕ್ತ ವಿಭಾಗಕ್ಕೆ ಸಮೂಹ ನೃತ್ಯ ಸ್ವರ್ಧೆ ಜರುಗಲಿದ್ದು, ಇದೇ ದಿನ ಪ್ರಾಥಮಿಕ ಶಾಲೆ, ಪ್ರೌಢ ಶಾಲೆ ಹಾಗೂ ಕಾಲೇಜು ವಿಭಾಗದ ಭಾಷಣ ಸ್ವರ್ಧಾ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ.

ಜ.20 ರಂದು ಗಾಯನ ಸ್ವರ್ಧೆ ಮುಕ್ತ ವಿಭಾಗ, ಜಾನಪದ ಗಾಯನ ಕಾಲೇಜು ವಿಭಾಗ, ಜಾನಪದ ನೃತ್ಯ ಪ್ರಾಥಮಿಕ ಶಾಲಾ ವಿಭಾಗ ಹಾಗೂ ಕಾಲೇಜು ವಿಭಾಗ ಸಮೂಹ ನೃತ್ಯ ಸ್ವರ್ಧೆಗಳು ನಡೆಯಲಿದ್ದು, ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ ಪ್ರತಿಭಾವಂತರಿಗೆ ಸನ್ಮಾನ ಹಾಗೂ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ.

21ರಂದು ಕಾಲೇಜು ವಿಭಾಗದ ವಿದ್ಯಾರ್ಥಿಗಳಿಗೆ ಗಾಯನ ಸ್ವರ್ಧೆ, ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಗಾಯನ ಸ್ವರ್ಧೆ, ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸಮೂಹ ನೃತ್ಯ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಮೂಹ ನೃತ್ಯ ಸ್ವರ್ಧೆ ನಡೆಯಲಿದ್ದು, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ವಿಜೇತ ವಿದ್ಯಾರ್ಥಿಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮತ್ತು ಗಣ್ಯರು ಬಹುಮಾನ ವಿತರಿಸಿ, ಕಾರ್ಯಕ್ರಮ ಉದ್ದೇಶಿಸಿ ಮಾತನಾಡುವರು.

ಸಾರ್ವಜನಿಕರಿಗೆ ಕುಳಿತು ಕೊಳ್ಳಲು 12 ಸಾವಿರ ಆಸನ ವ್ಯವಸ್ಥೆ ಮಾಡಲಾಗಿದ್ದು, ಎಲ್ಲರೂ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ವಿನಂತಿಸಿದರು.ಈ ವೇಳೆ ಸತೀಶ ಶುಗರ್ಸ ಆವಾರ್ಡ್ಸ ಸಂಘಟಕ, ಪತ್ರಕರ್ತ ಸಾದಿಕ ಹಲ್ಯಾಳ, ಪ್ರಾಚಾರ್ಯ ಪಿ.ಎಂ ಲಕ್ಕಶೆಟ್ಟಿ, ಫೌಂಡೇಶನ್ ಸದಸ್ಯ ಸುರೇಶ್ ಜೋರಾಪೂರ ಇದ್ದರು.