ಸಿಬ್ಬಂದಿಯ ಆರೋಗ್ಯಕ್ಕೆ ಒತ್ತು ನೀಡಿದ ಸತೀಶ ಶುಗರ್ಸ್‌

| Published : Sep 25 2024, 12:47 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ಮೂಡಲಗಿ ಸತೀಶ ಶುಗರ್ಸ್‌ ಸಂಸ್ಥೆ ತನ್ನೆಲ್ಲ ಕಾರ್ಮಿಕರು, ಸಿಬ್ಬಂದಿಯ ಆರೋಗ್ಯದ ಹಿತದೃಷ್ಟಿಯಿಂದ ಪ್ರತಿವರ್ಷ ಹಲವಾರು ಬಗೆಯ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಸತೀಶ ಸಮೂಹ ಸಂಸ್ಥೆ ಚೇರಮನ್ ಮತ್ತು ಮುಖ್ಯ ಹಣಕಾಸಿನ ಅಧಿಕಾರಿ ಪ್ರದೀಪಕುಮಾರ ಇಂಡಿ ಹೇಳಿದರು.

ಕನ್ನಡಪ್ರಭ ವಾರ್ತೆ ಮೂಡಲಗಿ

ಸತೀಶ ಶುಗರ್ಸ್‌ ಸಂಸ್ಥೆ ತನ್ನೆಲ್ಲ ಕಾರ್ಮಿಕರು, ಸಿಬ್ಬಂದಿಯ ಆರೋಗ್ಯದ ಹಿತದೃಷ್ಟಿಯಿಂದ ಪ್ರತಿವರ್ಷ ಹಲವಾರು ಬಗೆಯ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಸತೀಶ ಸಮೂಹ ಸಂಸ್ಥೆ ಚೇರಮನ್ ಮತ್ತು ಮುಖ್ಯ ಹಣಕಾಸಿನ ಅಧಿಕಾರಿ ಪ್ರದೀಪಕುಮಾರ ಇಂಡಿ ಹೇಳಿದರು.ತಾಲೂಕಿನ ಹುಣಶ್ಯಾಳ ಪಿ.ಜಿ ಬಳಿಯ ಸತೀಶ ಶುಗರ್ಸ್‌ ಕಾರ್ಖಾನೆಯ ಸಭಾಭವನದಲ್ಲಿ ಕಾರ್ಖಾನೆಯ ಸಿಬ್ಬಂದಿಗೆ ಸತೀಶ ಶುಗರ್ಸ್‌, ಬೆಳಗಾವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಪರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಚಿಕ್ಕೋಡಿ, ತಾಲೂಕಾ ಆರೋಗ್ಯ ತಾಲೂಕು ಆರೋಗ್ಯ ಕೇಂದ್ರ ಗೋಕಾಕ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಬಳೋಬಾಳ ಸಂಯುಕ್ತ ಆಶ್ರಯದಲ್ಲಿ ಜರುಗಿದ ಉಚಿತ ಆರೋಗ್ಯ ತಪಾಸಣೆ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ಇಂದಿನ ದಿನಗಳಲ್ಲಿ ಜನರು ತಮ್ಮ ಜೀವನ ಶೈಲಿ, ಆಹಾರ ಪದ್ಧತಿ ಹಾಗೂ ಕೆಲಸದ ಒತ್ತಡಗಳಿಂದಾಗಿ ಅನೇಕ ರೀತಿಯ ಅನಾರೋಗ್ಯಕ್ಕೆ ಒಳಗಾಗುತ್ತಿದ್ದು, ತಮ್ಮ ಆರೋಗ್ಯಕ್ಕೆ ಪೂರಕವಾಗುವಂತಹ ಜೀವನ ಶೈಲಿಯನ್ನು ಮೈಗೂಡಿಸಿಕೊಂಡಾಗ ಮಾತ್ರ ಆರೋಗ್ಯಯುತ ಬದುಕು ಸಾಧಿಸಲು ಸಾಧ್ಯವಾಗಲಿದೆ. ಈ ದಿಸೆಯಲ್ಲಿ ನಮ್ಮೆಲ್ಲ ಸಿಬ್ಬಂದಿ ತಮ್ಮ ಆರೋಗ್ಯದ ಕುರಿತು ಹೆಚ್ಚಿನ ಕಾಳಜಿ ವಹಿಸುವುದರೊಂದಿಗೆ ಕುಟುಂಬಗಳಿಗೆ ಆಸರೆಯಾಗಬೇಕು ಎಂದು ಹೇಳಿದರು.ಗೋಕಾಕ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅಂಟಿನ್ ಕಾರ್ಯಕ್ರಮ ಉದ್ಘಾಟಿಸಿ ಕಾರ್ಖಾನೆಯಿಂದ ಸತ್ಕಾರ ಸ್ವೀಕರಿಸಿ ಮಾತನಾಡಿ, ಸತೀಶ ಶುಗರ್ಸ್‌ ಕಾರ್ಖಾನೆ ಮೊದಲಿನಿಂದಲೂ ಆರೋಗ್ಯ ಇಲಾಖೆಯೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದು, ಕೋವಿಡ್‌ನಂತಹ ತುರ್ತು ಸಂದರ್ಭದಲ್ಲಿ ಕಾರ್ಖಾನೆ ಆರೋಗ್ಯ ಇಲಾಖೆಗೆ ನೀಡಿದ ಸಹಾಯ ಸಹಕಾರ ಸದಾ ಕಾಲ ಸ್ಮರಣೀಯವಾದದ್ದು ಎಂದ ಅವರು, ಸಂಸ್ಥೆಯ ಕುರಿತು ಹೆಮ್ಮೆ ವ್ಯಕ್ತಪಡಿಸಿದರು.ಉಚಿತ ಶಿಬಿರದಲ್ಲಿ ನುರಿತ ತಜ್ಞ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಯಿಂದ ಕಾರ್ಖಾನೆಯ ಕಾರ್ಮಿಕ ಮತ್ತು ಸಿಬ್ಬಂದಿ ಆರೋಗ್ಯಕ್ಕೆ ಸಂಬಂಧಿತ ವಿವಿಧ ತಪಾಸಣೆ ನಡೆಸಿದರು.

ಸಂಸ್ಥೆಯ ಹಿರಿಯ ಉಪಾಧ್ಯಕ್ಷ ಪಿ.ಡಿ.ಹಿರೇಮಠ, ವೀರು ತಳವಾರ, ದಿಲೀಪ ಪವಾರ, ಕಾರ್ಖಾನೆಯ ವೈದ್ಯಾಧಿಕಾರಿ ಡಾ.ಆನಂದ ಪೂಜೇರ ಹಾಗೂ ಎಲ್ಲ ವಿಭಾಗಗಳ ಮುಖ್ಯಸ್ಥರು ಮತ್ತು ಕಾರ್ಮಿಕ ಸಿಬ್ಬಂದಿ ಮತ್ತಿತರರು ಇದ್ದರು.