ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರ: ಮಾನವ ಜನ್ಮ ಶ್ರೇಷ್ಠವಾದುದು. ಅದರ ಸದ್ಬಳಕೆ ಆಗಬೇಕು. ಸತ್ಕರ್ಮ, ಸತ್ಸಂಗ, ಸದಾಚಾರ ಪಾಲಿಸಿದರೆ ಬದುಕು ಬಂಗಾರವಾಗುತ್ತದೆ ಎಂದು ನಾಗಠಾಣ ಶಾಸಕ ವಿಠಲ ಕಟಕದೊಂಡ ಹೇಳಿದರು.
ಕನ್ನಡಪ್ರಭ ವಾರ್ತೆ ವಿಜಯಪುರ:
ಮಾನವ ಜನ್ಮ ಶ್ರೇಷ್ಠವಾದುದು. ಅದರ ಸದ್ಬಳಕೆ ಆಗಬೇಕು. ಸತ್ಕರ್ಮ, ಸತ್ಸಂಗ, ಸದಾಚಾರ ಪಾಲಿಸಿದರೆ ಬದುಕು ಬಂಗಾರವಾಗುತ್ತದೆ ಎಂದು ನಾಗಠಾಣ ಶಾಸಕ ವಿಠಲ ಕಟಕದೊಂಡ ಹೇಳಿದರು.ತಾಲೂಕಿನ ನಾಗಠಾಣ ಗ್ರಾಮದ ಹಿರೇಮಠದಲ್ಲಿ ಉದಯಲಿಂಗೇಶ್ವರ ಶಿವಯೋಗಿಗಳ ರಜತ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ವೇಳೆ ನಡೆದ ಧರ್ಮಸಭೆಯಲ್ಲಿ ಮಾತನಾಡಿದರು, ಸನಾತನ ಸಂಸ್ಕೃತಿ, ಧಾರ್ಮಿಕತೆ ಮತ್ತು ಆಧ್ಯಾತ್ಮಿಕ ಚಿಂತನೆಯಿಂದ ಮಾನವ ಜನ್ಮ ಸಾರ್ಥಕಗೊಳ್ಳುತ್ತದೆ ಎಂದು ಹೇಳಿದರು.
ದೇವರ ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ ಮಾತನಾಡಿ, ಪ್ರತಿಯೊಬ್ಬರೂ ತಮ್ಮ ಮನೆಯಲ್ಲಿ ಜನ್ಮ ನೀಡಿದ ತಾಯಿ ಸೇರಿದಂತೆ ಮನೆಯ ಹೆಣ್ಣು ಮಕ್ಕಳಿಗೆ ಗೌರವ ಕೊಡಬೇಕು. ಇದರಿಂದ ತನ್ನ ಮನೆ ದೇಗುಲವಾಗುತ್ತದೆ ಎಂದು ಹೇಳಿದರು.ನೇತೃತ್ವ ವಹಿಸಿದ್ದ ಸಿಂದಗಿಯ ಪ್ರಭುಸಾರಂಗ ದೇವ ಶಿವಾಚಾರ್ಯರು ಮಾತನಾಡಿ, ಪ್ರತಿದಿನ ಗುಡಿಗೆ ಬಂದು ದೇವರ ಆಶೀರ್ವಾದ ಪಡೆದುಕೊಳ್ಳಬೇಕು. ಇದರಿಂದ ಮನಸ್ಸಿನಲ್ಲಿ ನೆಮ್ಮದಿ ಕಾಣಲು ಸಾಧ್ಯವಾಗುತ್ತದೆ ಎಂದರು.
ಈ ವೇಳೆ ನಾಗಠಾಣದ ಚನ್ನಮಲ್ಲಿಕಾರ್ಜುನ ಶಿವಾಚಾರ್ಯರು, ಹಾವಿನಾಳದ ವಿಜಯಮಹಾಂತೇಶ ಶಿವಾಚಾರ್ಯರು, ಮನಗೂಳಿಯ ಅಭಿನವ ಸಂಗನಬಸವ ಶಿವಾಚಾರ್ಯರು ಆಶೀರ್ವಚನ ನೀಡಿದರು. ಅತಿಥಿಗಳಾದ ಜಿಪಂ ಮಾಜಿ ಉಪಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ಉದ್ಯಮಿ ಶರಣಬಸು ಅರಕೇರಿ, ಬನ್ನೂರಿನ ಸಿದ್ದಲಿಂಗ ಶಿವಾಚಾರ್ಯರು, ಶರಣಬಸು ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಉದಯಲಿಂಗೇಶ್ವರ ಶಿವಯೋಗಿಗಳ ಗದ್ದುಗೆಗೆ ಮಹಾ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ, ಹೋಮ ಹವನ, ನೂತನ ರಜತ ಮೂರ್ತಿ ಉತ್ಸವ, ಸುಮಂಗಲೆಯರ ಕುಂಭ, ಡೋಲು ಕುಣಿತ ಮೆರವಣಿಗೆ ಜರುಗಿತು.