ಸಾರಾಂಶ
ಜಿಲ್ಲಾ ಮಟ್ಟದ ಫುಟ್ಬಾಲ್ ಕ್ರೀಡಾಕೂಟದಲ್ಲಿ 17ನೇ ವಯೋಮಿತಿ ವಿದ್ಯಾರ್ಥಿ ವಿಭಾಗದಲ್ಲಿ ವಿರಾಜಪೇಟೆ ತಾಲೂಕು ಅಮ್ಮತ್ತಿ ನೇತಾಜಿ ಪ್ರೌಢಶಾಲಾ ಬಾಲಕರ ತಂಡ ಪ್ರಥಮ ಸ್ಥಾನ ಗಳಿಸಿದೆ.
ಕನ್ನಡಪ್ರಭ ವಾರ್ತೆ ಶನಿವಾರಸಂತೆ
ಕೊಡಗು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಮತ್ತು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಶನಿವಾರಸಂತೆ ಭಾರತಿ ವಿದ್ಯಾಸಂಸ್ಥೆ ಆಶ್ರಯದಲ್ಲಿ 14, 17ನೇ ವಯೋಮಿತಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸೋಮವಾರ ಭಾರತಿ ವಿದ್ಯಾಸಂಸ್ಥೆ ಮೈದಾನದಲ್ಲಿ ನಡೆದ ಜಿಲ್ಲಾಮಟ್ಟದ ಫುಟ್ಬಾಲ್ ಕ್ರೀಡಾಕೂಟದಲ್ಲಿ 17ನೇ ವಯೋಮಿತಿ ವಿದ್ಯಾರ್ಥಿ ವಿಭಾಗದಲ್ಲಿ ವಿರಾಜಪೇಟೆ ತಾಲೂಕು ಅಮ್ಮತ್ತಿ ನೇತಾಜಿ ಪ್ರೌಢಶಾಲಾ ಬಾಲಕರ ತಂಡ ಪ್ರಥಮ ಸ್ಥಾನಗಳಿದೆ. ಕುಶಾಲನಗರ ತಾಲೂಕು ಫಾತಿಮಾ ಶಾಲಾ ತಂಡ ದ್ವಿತೀಯ ಸ್ಥಾನಗಳಿದೆ.17ರ ವಯೋಮಿತಿ ಬಾಲಕಿಯ ವಿಭಾಗದಲ್ಲಿ ವಿರಾಜಪೇಟೆ ತಾಲೂಕಿನ ಲಯನ್ಸ್ ವಿದ್ಯಾಸಂಸ್ಥೆ ಬಾಲಕಿಯರ ತಂಡ ಪ್ರಥಮ ಹಾಗೂ ಮಡಿಕೇರಿ ತಾಲೂಕು ಸರ್ಕಾರಿ ಪಿಯು ಕಾಲೇಜು ಪ್ರೌಢಶಾಲಾ ತಂಡ ದ್ವಿತೀಯ, 14 ರ ವಯೋಮಿತಿ ಬಾಲಕಿಯರ ವಿಭಾಗದಲ್ಲಿ ವಿರಾಜಪೇಟೆ ತಾಲೂಕು ಪೊನ್ನಂಪೇಟೆ ಅಪ್ಪಚ್ಚುಕವಿ ಪ್ರಾಥಮಿಕ ಶಾಲಾ ತಂಡ ಪ್ರಥಮ, ಮಡಿಕೇರಿ ತಾಲೂಕು ಜಿಎಂಪಿ ಶಾಲಾ ತಂಡ ದ್ವಿತೀಯ, 14ರ ವಯೋಮಿತಿಯ ಬಾಲಕರ ವಿಭಾಗದಲ್ಲಿ ವಿರಾಜಪೇಟೆ ಬಾರ್ಕಸ್ ಪ್ರಾಥಮಿಕ ಶಾಲಾ ತಂಡ ಹಾಗೂ ಸೆಕ್ರೇಟ್ ಹಾರ್ಟ್ ಪ್ರಾಥಮಿಕ ಶಾಲಾ ತಂಡ ದ್ವಿತೀಯ ಸ್ಥಾನಗಳಿಸಿದವು.
ಭಾರತಿ ವಿದ್ಯಾ ಸಂಸ್ಥೆ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಫುಟ್ಬಾಲ್ ಕ್ರೀಡಾಕೂಟಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಹರೀಶ್ ಉದ್ಘಾಟಿಸಿದರು. ಈ ಸಂದರ್ಭ ಶಾಲೆಯ ಮುಖ್ಯ ಶಿಕ್ಷಕ ನರಸಿಂಹಮೂರ್ತಿ, ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕ ಸದಾಶಿವಯ್ಯ ಎಸ್ ಪಲ್ಲೇದ್, ಪಿಯು ಕಾಲೇಜು ಪ್ರಾಂಶುಪಾಲ ಅಶೋಕ್, ಮೂರು ತಾಲೂಕಿನ ತಾಲೂಕು ದೈಹಿಕ ಶಿಕ್ಷಣ ಪರೀಕ್ಷಕರು ಹಾಗೂ ಕ್ರೀಡಾಕೂಟ ಸಂಯೋಜಕ ಎಚ್.ವೈ.ಆದರ್ಶ್, ರಾಜೇಶ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು ಫುಟ್ಬಾಲ್ ತರಬೇತುದಾರರು ಪಾಲ್ಗೊಂಡಿದ್ದರು. ಪಂದ್ಯಾವಳಿಯಲ್ಲಿ ಮೂರು ತಾಲೂಕಿನ 12 ತಂಡಗಳು ಭಾಗವಹಿಸಿದ್ದವು.;Resize=(128,128))
;Resize=(128,128))
;Resize=(128,128))
;Resize=(128,128))