ನ್ಯಾಮತಿ ಪಟ್ಟಣದ ಶ್ರೀ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ 34ನೇ ವರ್ಷದ ಪಡಿಪೂಜೆ ಮತ್ತು ದೀಪೋತ್ಸವ ಧಾರ್ಮಿಕ ಪೂಜಾ ಕಾರ್ಯಕ್ರಮ ಅಂಗವಾಗಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ, ರಕ್ತದಾನ ಶಿಬಿರ ನಡೆಸಲಾಯಿತು.
ನ್ಯಾಮತಿ: ಪಟ್ಟಣದ ಶ್ರೀ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ 34ನೇ ವರ್ಷದ ಪಡಿಪೂಜೆ ಮತ್ತು ದೀಪೋತ್ಸವ ಧಾರ್ಮಿಕ ಪೂಜಾ ಕಾರ್ಯಕ್ರಮ ಅಂಗವಾಗಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ, ರಕ್ತದಾನ ಶಿಬಿರ ನಡೆಸಲಾಯಿತು.
ಶ್ರೀ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಭಾನುವಾರ ಬೆಳಗ್ಗೆ ಸುಮಂಗಲಿಯರಿಂದ ಗಂಗಾಪೂಜೆ, ಶ್ರೀ ಗಣಪತಿ, ನವಗ್ರಹ ಪೂಜಾ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕೈಂಕರ್ಯಗಳು ದೇಗುಲದ ಪ್ರಧಾನ ಅರ್ಚಕ ಸುಬ್ರಹ್ಮಣ್ಯ ಸ್ವಾಮಿ ಪೌರೋಹಿತ್ಯದಲ್ಲಿ ಜರುಗಿದವು.ಇದೇ ಸಂದರ್ಭದಲ್ಲಿ ಶ್ರೀ ಭಗವಾನ್ ಅಯ್ಯಪ್ಪಸ್ವಾಮಿ ಸೇವಾ ಟ್ರಸ್ಟ್, ಭಾರತೀಯ ಅಯ್ಯಪ್ಪ ಸ್ವಾಮಿ ಸೇವಾ ಸಂಘ, ಅಖಿಲ ಕರ್ನಾಟಕ ಡಾ.ವಿಷ್ಣುವರ್ಧನ ಅಭಿಮಾನಿಗಳ ಸಂಘ ಹಾಗೂ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ಸಹಯೋಗದಲ್ಲಿ ಡಾ.ವಿಷ್ಣುವರ್ಧನರವರ 15 ವರ್ಷದ ಪುಣ್ಯಸ್ಮರಣೆ ಅಂಗವಾಗಿ ರಕ್ತದಾನ ಶಿಬಿರ ನಡೆಸಲಾಯಿತು.
ಶಿಬಿರದಲ್ಲಿ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಸೇರಿದಂತೆ 35 ಜನ ರಕ್ತದಾನ ಮಾಡಿದರು. ಶ್ರೀ ಅಯ್ಯಪ್ಪಸ್ವಾಮಿ ದೇಗುಲದಲ್ಲಿ ಪಡಿಪೂಜೆ ಮತ್ತು ದೀಪೋತ್ಸವ ಧಾರ್ಮಿಕ ಪೂಜಾ ಕಾರ್ಯಕ್ರಮವು ಶುಕ್ರವಾರ ಶ್ರೀ ಸ್ವಾಮಿಯ ಧ್ವಜಾರೋಹಣ ನೆರವೇರಿಸಿ ರಾತ್ರಿ ಶನಿ ಪುರಾಣ, ಪ್ರವಚನ ಕಾರ್ಯಕ್ರಮ ನಡೆದು ಶನಿವಾರ ಶ್ರೀಸ್ವಾಮಿಗೆ ವಿಶೇಷ ಧಾರ್ಮಿಕ ಪೂಜಾ ಕೈಂಕರ್ಯಗಳು ನೆರವೇರಿದವು.- - -
-ಚಿತ್ರ:ನ್ಯಾಮತಿ ಪಟ್ಟಣದ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಪಡಿಪೂಜಾ, ದೀಪೋತ್ಸವ, ಡಾ.ವಿಷ್ಣುವರ್ಧನ ಅವರ 15ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ರಕ್ತದಾನ ಶಿಬಿರ ನಡೆಸಲಾಯಿತು.