ಸಾರಾಂಶ
ಕಟೀಲು ಮಲ್ಲಿಗೆಯಂಗಡಿಯಲ್ಲಿ ನಂದಿನಿ ಯುವಕ ಮಂಡಲದ ಆಶ್ರಯದಲ್ಲಿ 33 ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, 16 ವರ್ಷದ ಭಜನಾ ಮಂಗಲೋತ್ಸವ ನಡೆಯಿತು.
ಕನ್ನಡಪ್ರಭವಾರ್ತೆ ಮೂಲ್ಕಿ
ಆಧುನಿಕತೆಯ ತಂತ್ರಜ್ಞಾನದ ಇಂದಿನ ದಿನಗಳಲ್ಲಿ ನಮ್ಮ ಸನಾತನ ಸಂಸ್ಕೃತಿ, ಆಚಾರ ವಿಚಾರ ಉಳಿಸುವ ಜೊತೆಗೆ ಪುರಾಣ ಗ್ರಂಥಗಳ ಅರಿವು ನಮ್ಮ ಮಕ್ಕಳಿಗೆ ನೀಡುವ ಅವಶ್ಯಕತೆ ಇದೆ ಎಂದು ಜಿ.ಪಂ. ಮಾಜಿ ಸದಸ್ಯ ಈಶ್ವರ್ ಕಟೀಲ್ ಹೇಳಿದರು.ಕಟೀಲು ಮಲ್ಲಿಗೆಯಂಗಡಿಯಲ್ಲಿ ನಂದಿನಿ ಯುವಕ ಮಂಡಲದ ಆಶ್ರಯದಲ್ಲಿ ಜರುಗಿದ 33 ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, 16 ವರ್ಷದ ಭಜನಾ ಮಂಗಲೋತ್ಸವ ಸಂದರ್ಭ ನಡೆದ ಧಾರ್ಮಿಕ ಸಭೆಯಲ್ಲಿ ಮಾತನಾಡಿದರು.
ಈ ಸಂದರ್ಭದಲ್ಲಿ ಮಕ್ಕಳಿಗೆ ಧಾರ್ಮಿಕ ಚಿಂತನೆ ಶಿಕ್ಷಣ ನೀಡುವ ನಿಟ್ಟಿನಲ್ಲಿ ಭಗವದ್ಗೀತೆಯ ತರಗತಿಗಳ ಆರಂಭಕ್ಕೆ ಚಾಲನೆ ನೀಡಲಾಯಿತು. ಕಿನ್ನಿಗೋಳಿಯ ಯುಗಪುರುಷದ ಭುವನಾಭಿರಾಮ ಉಡುಪ ಅಧ್ಯಕ್ಷತೆ ವಹಿಸಿದ್ದು ಕೊಡೆತ್ತೂರು ಶ್ರೀ ಅರಸು ಕುಂಜಿರಾಯ ದೈವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಹೊಸಮನೆ, ಕುಂಜಿರಾಯ ದೈವಸ್ಥಾನದ ಮುಕ್ಕಾಲ್ದಿ ಜಯರಾಮ ಮುಕ್ಕಾಲ್ದಿ, ಕಟೀಲು ಶಾಲೆಯ ಶಿಕ್ಷಕ ಶ್ರೀವತ್ಸ ಎಸ್ಆರ್ , ಯತೀಶ್ ಮತ್ತಿತರರು ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದ ಸಾಧಕ ಶ್ರೀವತ್ಸ ಎಸ್ ಆರ್ , ನಾಟಕಕಾರ ವಿಜಯಕಮಾರ್ ಶೆಟ್ಟಿ ಕೊಡಿಯಲ್ ಬೈಲ್, ರಾಷ್ಟ್ರ ಮಟ್ಟದಲ್ಲಿ ಕೊಕ್ಕೋದಲ್ಲಿ ದ್ವಿತೀಯ ಸ್ಥಾನ ಪಡೆದ ಎಕ್ಕಾರು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳನ್ನು, ಬಾಲ್ ಬ್ಯಾಡ್ಮಿಂಟನ್ ನಲ್ಲಿ ರಾಜ್ಯ ಮಟ್ಟದಲ್ಲಿ ಮಿಂಚಿದ ಬಾಲಕಿಯನ್ನು ಗೌರವಿಸಲಾಯಿತು.
ಸಂಸ್ಥೆಯ ಅಧ್ಯಕ್ಷ ಗುರುರಾಜ ಮಲ್ಲಿಗೆಯುಂಗಡಿ ಸ್ವಾಗತಿಸಿದರು. ದುರ್ಗಪ್ರಸಾದ್ ಕೊಂಡೇಲ ಕಾರ್ಯಕ್ರಮ ನಿರೂಪಿಸಿದರು.;Resize=(128,128))
;Resize=(128,128))
;Resize=(128,128))