ಸಾರಾಂಶ
ಸವಣೂರು ವಿದ್ಯಾರಶ್ಮಿ ವಿದ್ಯಾಲಯ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಜಂಟಿ ಆಶ್ರಯದಲ್ಲಿ ತಾಲೂಕು ಮಟ್ಟದ ಚೆಸ್ ಸ್ಪರ್ಧೆ ವಿದ್ಯಾಸಂಸ್ಥೆಯಲ್ಲಿ ನಡೆಯಿತು.
ಪುತ್ತೂರು: ಸವಣೂರು ವಿದ್ಯಾರಶ್ಮಿ ವಿದ್ಯಾಲಯ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಜಂಟಿ ಆಶ್ರಯದಲ್ಲಿ ತಾಲೂಕು ಮಟ್ಟದ ಚೆಸ್ ಸ್ಪರ್ಧೆಯು ನಡೆಯಿತು.
ಸಂಸ್ಥೆಯ ಸಂಚಾಲಕ ಸವಣೂರು ಸೀತಾರಾಮ ರೈ ಕೆ ಸ್ಪರ್ಧೆಯನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಆಟದಲ್ಲಿ ಗೆಲ್ಲುವುದು ಮುಖ್ಯವಲ್ಲ ಭಾಗವಹಿಸುವುದು ಮುಖ್ಯ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಆಡಳಿತಾಧಿಕಾರಿಗಳಾದ ಅಡ್ವಕೇಟ್ ಅಶ್ವಿನ್ ಎಲ್. ಶೆಟ್ಟಿ ಮಾತನಾಡಿ, ಚದುರಂಗ ಸ್ಪರ್ಧೆಯೊಂದೇ ವ್ಯಕ್ತಿಯ ದೈಹಿಕ ಸಾಮರ್ಥ್ಯವನ್ನು ಹೊರತುಪಡಿಸಿ ಮಾನಸಿಕ ಮತ್ತು ಕೌಶಲ್ಯವನ್ನು ಒಳಗೊಂಡಿರುವ ಸ್ಪರ್ಧೆ ಆಗಿದ್ದು ವಿದ್ಯಾರ್ಥಿಯ ಬುದ್ಧಿಶಕ್ತಿಯ ಬೆಳವಣಿಗೆಗೆ ಸಹಾಯಕವಾಗಿದೆ ಎಂದರು. ಜಿಲ್ಲಾ ಚೆಸ್ ಎಸೋಸಿಯೇಷನ್‌ನ ಅಧ್ಯಕ್ಷ ರಮೇಶ್ ಕೋಟೆ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಕ್ರಪಾಣಿ ಮಾತನಾಡಿದರು. ವೇದಿಕೆಯಲ್ಲಿ ಕಡಬ ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷ ಮಾಮಚ್ಚನ್, ಸವಣೂರು ವಲಯ ಮಟ್ಟದ ಪ್ರಾಥಮಿಕ ವಿಭಾಗದ ಸಂಯೋಜಕ ಬಾಲಕೃಷ್ಣ, ಸವಣೂರು ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಜಯಂತ್, ಪುತ್ತೂರಿನ ಚೆಸ್ ವೆಂಚರ್ ಅಕಾಡೆಮಿಯ ಚೆಸ್ ಟ್ರೈನರ್ ಸುರೇಶ್ ಕುಮಾರ್, ಹೈಸ್ಕೂಲ್ ವಲಯ ಮಟ್ಟದ ಸಂಯೋಜಕ ಕೃಷ್ಣಪ್ರಸಾದ್ ಮತ್ತು ಕ್ಷೇತ್ರ ಸಂಪನ್ಮೂಲ ವ್ಯಕ್ತಿ ನವೀನ್ ವೇಗಸ್ ಉಪಸ್ಥಿತರಿದ್ದರು.ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲೆ ಶಶಿಕಲಾ ಎಸ್ ಆಳ್ವ ಸ್ವಾಗತಿಸಿದರು. ಹೈಸ್ಕೂಲು ವಿಭಾಗದ ಶಿಕ್ಷಕಿ ಶ್ರೀಲೇಖಾ ಶೆಟ್ಟಿ ವಂದಿಸಿದರು. ಉಪನ್ಯಾಸಕಿ ತೇಜಸ್ವಿ ನಿರೂಪಿಸಿದರು. ದೈಹಿಕ ಶಿಕ್ಷಕರಾದ ಶಿವಪ್ರಸಾದ್ ಆಳ್ವ ಮತ್ತು ಭರತ್ ಚೆಸ್ ಪಂದ್ಯವನ್ನು ಸಂಯೋಜಿಸಿದರು.