ಪರಿಸರ ಉಳಿಸಿ ಸಾಮಾಜಿಕ ಜಾಗೃತಿ: ಮಧುಕುಮಾರ್‌ ಕರೆ

| Published : Jun 06 2024, 12:31 AM IST

ಸಾರಾಂಶ

ವಿರಾಜಪೇಟೆ ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ ನಡೆಯಿತು. ಕಾಲೇಜಿನ ಎನ್.ಎಸ್.ಎಸ್ ಘಟಕ, ನೇಚರ್ ಕ್ಲಬ್ ಘಟಕ, ಯುವ ರೆಡ್ ಕ್ರಾಸ್ ಘಟಕ, ಅರಣ್ಯ ಇಲಾಖೆ, ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ವಿದ್ಯಾರ್ಥಿಗಳು ಪರಿಸರವನ್ನು ಉಳಿಸಿ ಬೆಳೆಸಬೇಕು, ಆ ನಿಟ್ಟಿನಲ್ಲಿ ಸಮಾಜದಲ್ಲಿ ಜಾಗೃತಿ ಮೂಡಿಸುವ ಕಾರ್ಯ ಆಗಬೇಕು ಎಂದು ವಿರಾಜಪೇಟೆಯ ಉಪ ಅರಣ್ಯಾಧಿಕಾರಿ ಮಧುಕುಮಾರ್ ಹೇಳಿದ್ದಾರೆ.

ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕಾಲೇಜಿನ ಎನ್.ಎಸ್.ಎಸ್ ಘಟಕ, ನೇಚರ್ ಕ್ಲಬ್ ಘಟಕ, ಯುವ ರೆಡ್ ಕ್ರಾಸ್ ಘಟಕ, ಅರಣ್ಯ ಇಲಾಖೆ, ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಅಧ್ಯಕ್ಷತೆ ವಹಿಸಿದ್ದ ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕ ಮತ್ತು ಪಿಯು ಕಾಲೇಜು ಪ್ರಾಂಶುಪಾಲ ರೆ.ಫಾ. ಮದಲೈ ಮುತ್ತು ಮಾತನಾಡಿ, ನಾವು ಪರಿಸರವನ್ನು ಸಂರಕ್ಷಿಸಿದರೆ ಮುಂದೊಂದು ದಿನ ಅದು ನಮ್ಮನ್ನು ಸಂರಕ್ಷಿಸುತ್ತದೆ. ಆ ನಿಟ್ಟಿನಲ್ಲಿ ಗಿಡಗಳನ್ನು ನೆಟ್ಟು ಬೆಳೆಸಬೇಕು, ಮತ್ತು ಪರಿಸರ ಜಾಗೃತಿ ಮೂಡಿಸುವಂತಾಗಬೇಕು. ವಿದ್ಯಾರ್ಥಿ ಹಂತದಿಂದಲೇ ಪರಿಸರದ ಮಹತ್ವವನ್ನು ಅರಿಯಬೇಕು ಎಂದು ಕಿವಿಮಾತು ಹೇಳಿದರು.

ಅತಿಥಿಗಳು ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸಂತ ಅನ್ನಮ್ಮ ಚರ್ಚ್ನ ಪ್ರಧಾನ ಗುರುಗಳು ಮತ್ತು ವಿದ್ಯಾಸಂಸ್ಥೆಯ ವ್ಯವಸ್ಥಾಪಕ ರೆ.ಫಾ. ಜೇಮ್ಸ್ ಡೊಮಿನಿಕ್, ಪದವಿ ಕಾಲೇಜು ಪ್ರಾಂಶುಪಾಲೆ ತೃಪ್ತಿ ಬೋಪಣ್ಣ, ಐಕ್ಯೂಎಸಿ ಸಂಚಾಲಕಿ ಹೇಮ, ನೇಚರ್ ಕ್ಲಬ್ ಸಂಚಾಲಕ ಜೇಮ್ಸ್ ಆಂಟೋನಿ, ಯುವ ರೆಡ್ ಕ್ರಾಸ್ ಅಧಿಕಾರಿ ವಿಲೀನ ಗೋನ್ಸಾಲ್ವೇಸ್, ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು, ಕಾಲೇಜಿನ ಎನ್.ಎಸ್.ಎಸ್. ಅಧಿಕಾರಿ ಬಿ.ಎನ್. ಶಾಂತಿಭೂಷಣ್, ಅರಣ್ಯ ಇಲಾಖೆಯ ಹಮೀದ್ ಮತ್ತು ವಿದ್ಯಾರ್ಥಿಗಳು ಇದ್ದರು.