ಸಾರಾಂಶ
ಹೊಸಕೋಟೆ: ನಗರಸಭೆ ಅಧಿಕಾರಿಗಳು ರಾಜಕಾರಣಿಗಳ ಕೈಗೊಂಬೆಗಳಂತೆ ವರ್ತಿಸುವುದು ಬಿಟ್ಟು, ಸರ್ಕಾರಿ ಆಸ್ತಿ ಸೇರಿದಂತೆ ಸಾರ್ವಜನಿಕರ ಕೆಲಸಗಳನ್ನು ಸಕಾಲದಲ್ಲಿ ಮಾಡುವಂತೆ ಮಾನವ ಹಕ್ಕುಗಳ ಜನಜಾಗೃತಿ ಸಮಿತಿ ರಾಜ್ಯಾಧ್ಯಕ್ಷ ವರದಾಪುರ ನಾಗರಾಜ್ ಆಗ್ರಹಿಸಿದರು.
ಹೊಸಕೋಟೆ: ನಗರಸಭೆ ಅಧಿಕಾರಿಗಳು ರಾಜಕಾರಣಿಗಳ ಕೈಗೊಂಬೆಗಳಂತೆ ವರ್ತಿಸುವುದು ಬಿಟ್ಟು, ಸರ್ಕಾರಿ ಆಸ್ತಿ ಸೇರಿದಂತೆ ಸಾರ್ವಜನಿಕರ ಕೆಲಸಗಳನ್ನು ಸಕಾಲದಲ್ಲಿ ಮಾಡುವಂತೆ ಮಾನವ ಹಕ್ಕುಗಳ ಜನಜಾಗೃತಿ ಸಮಿತಿ ರಾಜ್ಯಾಧ್ಯಕ್ಷ ವರದಾಪುರ ನಾಗರಾಜ್ ಆಗ್ರಹಿಸಿದರು.
ನಗರಸಭೆ ಆವರಣದಲ್ಲಿ ಹಮ್ಮಿಕೊಂಡಿದ್ದ ಒಂದು ದಿನದ ಉಪವಾಸ ಸತ್ಯಾಗ್ರಹದಲ್ಲಿ ಮಾತನಾಡಿದ ಅವರು, ಐದಾರು ವರ್ಷಗಳಿಂದ ನಗರದಲ್ಲಿ ಒತ್ತುವರಿ ಆಗಿರುವ ಪಾದಚಾರಿ ಮಾರ್ಗ, ರಾಜಕಾಲುವೆ, ಸ್ಮಶಾನ, ರಸ್ತೆ, ಪಾರ್ಕ್, ನಿವೇಶನ, ಅಂಬೇಡ್ಕರ್ ಪಾರ್ಕ್ ಸೇರಿದಂತೆ ನಗರಸಭೆ ಕಚೇರಿಗೆ ದಾನವಾಗಿ ಕೊಟ್ಟಿರುವ ಜಾಗವನ್ನೆ ಕಬಳಿಕೆ ಮಾಡಿ ವಾಣಿಜ್ಯ ಮಳಿಗೆ ಕಟ್ಟಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಕೊಟ್ಟಿದ್ದೇವೆ. ನಗರದ ಅಗಸಿನ ಕೆರೆ ಬಳಿ ಮನೆ ಕಟ್ಟಿಕೊಂಡಿದ್ದ ಬಡವರಿಗೆ ನಿವೇಶನ ಹಂಚಿಕೆ ಬದಲು ರಾಜಕಾರಣಿ ಹಿಂಬಾಲಕರಿಗೆ, ಕಾರ್ಯಕರ್ತರಿಗೆ ಕೊಡುತ್ತಿದ್ದಾರೆ. ತಾಲೂಕು ಕಚೇರಿ ಆವರಣದಲ್ಲಿ ಗಾಂಧಿ ಪ್ರತಿಮೆ ಸ್ಥಾಪಿಸಲು ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಈ ರೀತಿ ಸಮಾಜದ ಅಭಿವೃದ್ಧಿಗೆ ಬೇಡಿಕೆ ಇಟ್ಟರೂ ಜನರ ತೆರಿಗೆ ಹಣದಲ್ಲಿ ಸಂಬಳ ಪಡೆಯುವ ಅಧಿಕಾರಿಗಳ ಕೈಗೊಂಬೆಗಳಾಗಿ ಕೆಲಸ ಮಾಡುತ್ತಿದ್ದಾರೆ. ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡುತ್ತೇವೆ ಎಂದರು.ಹೋರಾಟಗಾರ ಸಮೀರ್ ಹಸದ್ ಮಾತನಾಡಿ, ರಾಜಕಾರಣಿಗಳು ಪ್ರಸ್ತುತ ಸನ್ನಿವೇಶದಲ್ಲಿ ಸ್ವಾರ್ಥ ಹಾಗೂ ಸಮಯ ಸಾಧಕರಾಗಿದ್ಧಾರೆ. ಕ್ಷೇತ್ರದಲ್ಲಿ ಶಾಸಕರು, ಸಂಸದರು ನಿಮ್ಮ ರಾಜಕಾರಣವನ್ನು ಅಭಿವೃದ್ಧಿ ಕಾರ್ಯ ಮಾಡುವಲ್ಲಿ, ಭ್ರಷ್ಟಾಚಾರ ಕಡಿಮೆ ಮಾಡುವಲ್ಲಿ ತೋರಿಸಿ ಎಂದರು.
ಭೀಮ್ ಸೇವಾ ಸಮಿತಿ ರಾಜ್ಯಾಧ್ಯಕ್ಷ ಶ್ರೀಕಾಂತ್ ರಾವಣ್ ಮಾತನಾಡಿ, ತಾಲೂಕಿನಲ್ಲಿ ಭ್ರಷ್ಟಾಚಾರ, ಸ್ವಜನಪಕ್ಷಪಾತ ಮಾಡುವ ಮೂಲಕ ಸೌಲಭ್ಯಗಳು ಉಳ್ಳವರ ಪಾಲಾಗುತ್ತಿದೆ. ಅಧಿಕಾರಿಗಳು ಸಾರ್ವಜನಿಕರ ಮನವಿಗೆ ಸ್ಪಂದಿಸದೆ ಬೇಜವಾಬ್ದಾರಿತನ ತೋರಿಸುತ್ತಿದ್ದಾರೆ. ಇಂತಹ ಅಧಿಕಾರಿಗಳ ನಡೆಯನ್ನು ಖಂಡಿಸಿ ಹೋರಾಟ ಮಾಡುವ ಸಂದರ್ಭ ಬಂದೊದಗಿದೆ ಎಂದರು.ಬಾಕ್ಸ್............ಪೌರಾಯುಕ್ತ ಜಹೀರ್ ಅಬ್ಬಾಸ್ ಭರವಸೆ
ನಗರಸಭೆ ಆವರಣದಲ್ಲಿ ಬೆಳಿಗ್ಗೆ 10 ಗಂಟೆಗೆ ಪ್ರಾಂಭಿಸಿದ ಉಪವಾಸ ಸತ್ಯಾಗ್ರಹದ ವೇಳೆ ಹೋರಾಟಗಾರ ವರದಾಪುರ ನಾಗರಾಜ್ ಸೇರಿದಂತೆ ವಿವಿಧ ಸಂಘಟನೆಗಳ 20ಕ್ಕೂ ಹೆಚ್ಚು ಕಾರ್ಯಕರ್ತರು ಬೆಂಬಲ ಸೂಚಿಸಿದ್ದರು. ಮಧ್ಯಾಹ್ನ 1 ಗಂಟೆಗೆ ಸ್ಥಳಕ್ಕಾಗಮಿಸಿ ನಗರಸಭೆ ಪೌರಾಯುಕ್ತ ಜಹೀರ್ ಅಬ್ಬಾಸ್ ಸತ್ಯಾಗ್ರಹಕ್ಕೆ ಕುಳಿತವರ ಮನವೊಲಿಸುವಲ್ಲಿ ಯಶಸ್ವಿಯಾದರು. ಒಟ್ಟು 22 ಬೇಡಿಕೆ ಪತ್ರದಲ್ಲಿ ನಮೂದಿಸಿದ್ದು ನನ್ನ ವ್ಯಾಪ್ತಿಗೆ ಒಳಪಡುವ ಎಲ್ಲಾ ಬೇಡಿಕೆಗಳನ್ನು ತ್ವರಿತವಾಗಿ ಈಡೇರಿಸುತ್ತೇನೆ ಎಂದು ಹಣ್ಣಿನ ರಸ ಕೊಟ್ಟು ಉಪವಾಸ ಸತ್ಯಾಗ್ರಹ ಹಿಂಪಡೆಯುವಂತೆ ಮಾಡಿದರು.ಫೋಟೋ: 19 ಹೆಚ್‌ಎಸ್‌ಕೆ 5
ಹೊಸಕೋಟೆ ನಗರಸಭೆ ಆವರಣದಲ್ಲಿ ಮಾನವ ಹಕ್ಕುಗಳ ಜನಜಾಗೃತಿ ಸಮಿತಿ ರಾಜ್ಯಾಧ್ಯಕ್ಷ ವರದಾಪುರ ನಾಗರಾಜ್ ನೇತೃತ್ವದಲ್ಲಿ ನಗರಸಭೆ ಅಧಿಕಾರಿಗಳ ಆಡಳಿತ ವೈಫಲ್ಯ ಖಂಡಿಸಿ ಉಪವಾಸ ಸತ್ಯಾಗ್ರಹ ನಡೆಸಿದರು.